ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ನ ಸಾಮಾಜಿಕ ಮಾಧ್ಯಮ ವಿಭಾಗದ ರಾಜ್ಯ ಸಂಯೋಜಕರಾಗಿ ಬೀದರ್ ಬೀದರ್ ಜಿಲ್ಲೆಯ ಔರಾದ ತಾಲೂಕಿನ ತುಳಜಾಪೂರ ಗ್ರಾಮದ ಪ್ರಥ್ವಿರಾಜ ಮುಧೋಳಕರ ಅವರನ್ನು ನೇಮಕ ಮಾಡಲಾಗಿದೆ.
ಯುವ ಕಾಂಗ್ರೆಸ್‌ನ ಕರ್ನಾಟಕ ಉಸ್ತುವಾರಿಗಳಾದ ನಿಗಮ್ ಭಂಡಾರಿ, ರಾಜ್ಯಾಧ್ಯಕ್ಷ ಮಂಜುನಾಥ್ ಗೌಡ, ರಾಷ್ಟ್ರೀಯ ಸಂಯೋಜಕರು ಹಾಗೂ ಸಾಮಾಜಿಕ ಮಾಧ್ಯಮ ವಿಭಾಗದ ಉಸ್ತುವಾರಿ ಶ್ವೇತಾ ಸೋನಿ ಮತ್ತು ಸಾಮಾಜಿಕ ಮಾಧ್ಯಮ ವಿಭಾಗದ ರಾಜ್ಯಾಧ್ಯಕ್ಷ ಸಿದ್ದು ಹಳೇಗೌಡ ಅವರ ನೇತೃತ್ವದಲ್ಲಿ ಈ ನೇಮಕಾತಿ ನಡೆದಿದೆ. ಪ್ರಥ್ವಿರಾಜ ಮುಧೋಳಕರ ಅವರಿಗೆ ರಾಜ್ಯ ಮಟ್ಟದ ಹೊಣೆಗಾರಿಕೆ ವಹಿಸಲಾಗಿದೆ.
ʼಕಾಂಗ್ರೆಸ್ ಪಕ್ಷದಲ್ಲಿ ನನ್ನ ಕೆಲಸವನ್ನು ಗುರುತಿಸಿ ರಾಜ್ಯ ಮಟ್ಟದ ಜವಾಬ್ದಾರಿ ನೀಡಿರುವುದು ಸಂತಸ ತಂದಿದೆʼ ಪ್ರಥ್ವಿರಾಜ ಮುಧೋಳಕರ ಹೇಳಿದರು.
ಇದನ್ನೂ ಓದಿ : ಬೀದರ್ | ಸ್ವಾಭಿಮಾನಕ್ಕಾಗಿ ನಡೆದ ಭೀಮಾ ಕೋರೆಗಾಂವ್ ಕದನ : ಮಹೇಶ ಗೊರನಾಳಕರ್
ಕಾಂಗ್ರೆಸ್ ಪಕ್ಷದ ತತ್ವ, ಸಿದ್ದಾಂತಗಳು ಹಾಗೂ ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಜನರಿಗೆ ತಲುಪಿಸಲು ಹೆಚ್ಚಿನ ಶ್ರಮ ವಹಿಸುವುದು ಜೊತೆಗೆ ವಿರೋಧ ಪಕ್ಷಗಳ ವೈಫಲ್ಯಗಳನ್ನು ಜನರ ಮುಂದೆ ಸಮರ್ಥವಾಗಿ ಪ್ರಸ್ತುತಪಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದ್ದಾರೆ
ಈ ಜವಾಬ್ದಾರಿಯನ್ನು ನೀಡಿದ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡ ಹಾಗೂ ಸಾಮಾಜಿಕ ಮಾಧ್ಯಮ ವಿಭಾಗದ ರಾಜ್ಯಾಧ್ಯಕ್ಷ ಸಿದ್ದು ಹಳೇಗೌಡ ಅವರಿಗೆ ಅವರು ಪ್ರಥ್ವಿರಾಜ ಮುಧೋಳಕರ ಕೃತಜ್ಞತೆ ಸಲ್ಲಿಸಿದ್ದಾರೆ.





