ಬೀದರ್‌ | ವೇಶ್ಯಾವಾಟಿಕೆ ದಂಧೆ : ಹೊರ ರಾಜ್ಯದ 5 ಮಹಿಳೆಯರ ರಕ್ಷಣೆ; ಇಬ್ಬರ ಆರೋಪಿಗಳ ಬಂಧನ

Date:

ಬೀದರ್ ನಗರದ ಶಿವನಗರ ಟ್ರಾಫಿಕ್ ಸಿಗ್ನಲ್ ಸಮೀಪದ ಲೋಟಸ್ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಪೊಲೀಸರು ಶುಕ್ರವಾರ ರಾತ್ರಿ ದಾಳಿ ನಡೆಸಿ ಐವರು ಯುವತಿಯರನ್ನು ರಕ್ಷಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರ ಮಾರ್ಗದರ್ಶನದಲ್ಲಿ, ಸೇನ್ ಪೊಲೀಸ್ ಠಾಣೆಯ ಡಿವೈಎಸ್ಪಿ ಎಸ್.ಎನ್ ಸನದಿ ನೇತೃತ್ವದಲ್ಲಿ ವಿಶೇಷ ತಂಡ ದಾಳಿ ನಡೆಸಿತು. ದಾಳಿಯಲ್ಲಿ ನೂತನ ನಗರ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ವಿಜಯಕುಮಾರ್ ಹಾಗೂ ಸೇನ್, ನೂತನ ನಗರ ಪೊಲೀಸ್ ಠಾಣೆ ಮತ್ತು ವಿಶೇಷ ಘಟಕದ ಸಿಬ್ಬಂದಿ ಭಾಗವಹಿಸಿದ್ದರು.

ವೇಶ್ಯಾವಾಟಿಕೆ ದಂಧೆಯಲ್ಲಿ ಭಾಗಿಯಾದ ಮಹಾರಾಷ್ಟ್ರದ ಇಬ್ಬರು, ಅಸ್ಸಾಂನ ಒಬ್ಬರು, ಹರ್ಯಾಣದ ಒಬ್ಬರು ಹಾಗೂ ಮಧ್ಯಪ್ರದೇಶದ ಒಬ್ಬರು ಸೇರಿ ಒಟ್ಟು ಐವರು ಯುವತಿಯರನ್ನು ಪೊಲೀಸರು ರಕ್ಷಿಸಿದರು. ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಸ್‌ಪಿ ಪ್ರದೀಪ್ ಗುಂಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂಬಂಧ ಬೀದರ್ ಮಹಿಳಾ ಪೊಲೀಸ್ ಠಾಣೆಯಲ್ಲಿ ಕಲಂ 3,4,5 EMMORAL TRAFFIC PREVENTION ACT-1956 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಯಶಸ್ವಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಎಸ್ಪಿ ಪ್ರದೀಪ ಗುಂಟಿ ಅವರು ಶ್ಲಾಘಿಸಿದ್ದಾರೆ.

ಇದನ್ನೂ ಓದಿ : ಬೀದರ್ | ಆಟವಾಡುತ್ತಿದ್ದಾಗ ಚರಂಡಿಗೆ ಬಿದ್ದು 5 ವರ್ಷದ ಬಾಲಕ ಸಾವು

ʼಜಿಲ್ಲೆಯಲ್ಲಿ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸಿದರೆ ಅಂತಹ ಸ್ಪಾ ಮೇಲೆ ದಾಳಿ ನಡೆಸಿ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆʼ ಎಂದು ಎಸ್‌ಪಿ ಪ್ರದೀಪ್ ಗುಂಟಿ ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...