ಬೀದರ್‌ | VB-G‌ RAM G ಮಸೂದೆ ಹಿಂಪಡೆಯಲು ಆಗ್ರಹಿಸಿ ಸಂಸದರ ಮನೆ ಎದುರು ಪ್ರತಿಭಟನೆ

Date:

ಕಾರ್ಮಿಕರ ಹಕ್ಕುಗಳನ್ನು ನಿರಾಕರಿಸುವ ಹಾಗೂ ಗ್ರಾಮ ಪಂಚಾಯಿತಿಗಳನ್ನು ದುರ್ಬಲ ಪಡಿಸುವ ಮೂಲಕ ಸಾಮಾಜಿಕ ನ್ಯಾಯವನ್ನೇ ಅಣಕಿಸುವ ವಿಕಸಿತ ಭಾರತ ರೋಜಗಾರ ಮತ್ತು ಅಜೀವಿಕಾ ಮಿಷನ್ (VB-G‌ RAM G-2025 ಮಸೂದೆಯನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘದ ಕಾರ್ಯಕರ್ತರು ಬೀದರ್‌ ಸಂಸದ ಸಾಗರ ಖಂಡ್ರೆ ಅವರ ಭಾಲ್ಕಿ ನಿವಾಸದ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಈ ಸಂಬಂಧ ಸಂಸದ ಸಾಗರ ಖಂಡ್ರೆ ಅವರ ಪರವಾಗಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರನ್ನು ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ʼವಿಕಸಿತ ಭಾರತ ರೋಜಗಾರ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಮಸೂದೆ ಮನರೇಗಾ-2005ನ್ನು ಪೂರ್ಣ ಪ್ರಮಾಣದಲ್ಲಿ ಬದಲಾಯಿಸುವ ಕಾಯ್ದೆಯಾಗಿದೆ. ಕಾರ್ಮಿಕರು, ಕಾರ್ಮಿಕ ಗುಂಪುಗಳು, ಚಿಂತಕರು ಹಾಗೂ ಹೋರಾಟಗಾರರ ಜೊತೆ ಸಮಾಲೋಚನೆ ನಡೆಸದೆ ಈ ಮಸೂದೆಯನ್ನು ರಚಿಸಲಾಗಿದೆ. ಉದ್ಯೋಗ ಖಾತ್ರಿಯನ್ನು ಕೇಂದ್ರ ಸರಕಾರದ ಕೇಂದ್ರಿಕೃತ, ಬಜೆಟ್‌ನ್ನು ನಿಯಂತ್ರಿಸುವ, ಬಡವರ ಉದ್ಯೋಗದ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನವಾಗಿದೆʼ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಮನರೇಗಾ ಕೂಲಿ ಕಾರ್ಮಿಕರ ಬೇಡಿಕೆಗೆ ಅನುಗುಣವಾಗಿ ಕೆಲಸ ನೀಡುವ, ಪರಿಹಾರ ನೀಡುವ ಜವಾಬ್ದಾರಿ ಕೇಂದ್ರ ಸರಕಾರದಾಗಿತ್ತು. ಜಿ ರಾಮ್‌ ಜಿ ಮಸೂದೆ 4(5) ರ ಪ್ರಕಾರ, ಕೇಂದ್ರ ಸರಕಾರದಿಂದ ನಿರ್ಧರಿಸಲ್ಪಟ್ಟ ರಾಜ್ಯವಾರು ಬಜೆಟ್ ಹಂಚಿಕೆಗಳ ಮೂಲಕ ಮಾನವ ದಿನಗಳನ್ನು ನಿರ್ಧರಿಸಲಾಗುತ್ತದೆ. ಪರಿಚ್ಛೇದ 4(6) ರಲ್ಲಿ ಈ ಬಜೆಟ್ ಮಿತಿಯನ್ನು ಮೀರಿದರೆ ರಾಜ್ಯ ಸರಕಾರಗಳ ಹೊರೆಯನ್ನು ಭರಿಸಬೇಕುʼ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತಿ ಯೋಜನೆಯ ಪ್ರಕಾರ ಕೆಂದ್ರ ಸರಕಾರ ಮತ್ತು ರಾಜ್ಯ ಸರಕಾರದ ಬಜೆಟ್ ಹಂಚಿಕೆ ಶೇ 90-10 ರಷ್ಟಿತ್ತು. ಆದರೆ, VB G RAM G 2025ರ ನೂತನ ಮಸೂದೆಯ ಪರಿಚ್ಛೇದ 22(2) ಪ್ರಕಾರ ಬಜೆಟ್‌ ಶೇ 60-40 ಅನುಪಾತದಲ್ಲಿ ಹಂಚಿಕೆಯಾಗಿದೆ. ಈ ಹಿಂದೆ ವರ್ಷದ ಯಾವುದೇ ದಿನದಲ್ಲಿಯೂ ಕೆಲಸ ಕೇಳುವ ಅಧಿಕಾರ ಕಾರ್ಮಿಕರಿಗಿತ್ತು. ಹೊಸ ಮಸೂದೆಯ ಪ್ರಕಾರ ಕೃಷಿ ಚಟುವಟಿಕೆ ಸಮಯಯದಲ್ಲಿ 60 ದಿನಗಳ ಕಾಲ ಯೊಜನೆ ಸ್ಥಗಿತ ಗೊಳಿಸಲಾಗುವುದು ಹಾಗೂ ವರ್ಷದಲ್ಲಿ ಎರಡು ತಿಂಗಳು ಕೆಲಸ ನಿರಾಕರಿಸುವುದರಿಂದ ಮಹಿಳೆಯರು, ಭೂಹಿನರು ಮತ್ತು ಇತರೆ ಅಂಚಿನಲ್ಲಿರುವ ಸಮುದಾಯಗಳ ಉದ್ಯೋಗದ ಹಕ್ಕಿನಿಂದ ನಿರಾಕರಿಸಿದಂತಾಗುತ್ತದೆʼ ಎಂದು ಹೇಳಿದರು.

ಜಿ ರಾಮ್‌ ಜಿ ಯೋಜನೆ ಮಹಾತ್ಮ ಗಾಂಧೀಜಿಯವರ ಹೆಸರು ಬದಲಾವಣೆ ಮಾಡುವ ಮೂಲಕ ಮಾಹಾತ್ಮ ಗಾಂಧೀಜಿಯವರ ಆಶಯಗಳ ವಿರೋಧವಾಗಿ ರೂಪುಗೊಂಡಿದೆ. ಅಷ್ಟೆ ಅಲ್ಲದೆ ಕೋಟ್ಯಾಂತರ ಭೂಹೀನ ಕಾರ್ಮಿಕರ, ಮಹಿಳೆಯರ, ಆದಿವಾಸಿಗಳ, ದಲಿತರ ಬದುಕನ್ನು ಸಂಕಷ್ಟಕೊಳಪಡಿಸುತ್ತದೆ. ಡಾ. ಬಾಬಾ ಸಾಹೇಬ ಅಂಬೇಡ್ಕರರ ಸಾಮಾಜಿಕ ನ್ಯಾಯದ ಆಶಯವನ್ನು ಸಂಪೂರ್ಣ ಬದಿಗೆ ಸರಿಸಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಯ ದುಡಿಮೆಯ ಗೌರವದ ಹಕ್ಕನ್ನು ಉಳಿಸುವ ನಿಟ್ಟಿನಲ್ಲಿ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ ಮತ್ತು ಅಜೀವಿಕಾ ಮಿಷನ್‌ ಗ್ರಾಮೀಣ (VB G RAM G) 2025 ಮಸೂದೆಯನ್ನು ತಕ್ಷಣ ಹಿಂಪಡೆಯಬೇಕೆಂದು ಒತ್ತಾಯಿಸಿದರು.

ಇದನ್ನೂ ಓದಿ : ಬೀದರ್‌ | ಒಂದು ಲಕ್ಷ ಮನೆಗಳಲ್ಲಿ ಗ್ರಂಥಾಲಯ ನಿರ್ಮಿಸುವ ಗುರಿ : ಡಾ.ಮಾನಸ

ಈ ಸಂದರ್ಭದಲ್ಲಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘದ ಜಿಲ್ಲಾ ಸಂಚಾಲಕಿ ಸಪ್ನಾದೀಪ ಸೇರಿದಂತೆ ಸಂಘಟನೆಯ ಪ್ರಮುಖರಾದ ಗೀತಾ ಡಿಗಾರೆ, ಸುರೇಖಾ, ರೇಶ್ಮಾ, ಗೀತಾ, ಸುಶೀಲಬಾಯಿ, ರಾಜಕುಮಾರ್, ಲೋಕೇಶ ಕಾಂಬಳೆ, ಮಹಾದೇವ ಮದಕಟ್ಟಿ, ಕೃಷ್ಣ ಸೇರಿದಂತೆ ಎಲ್ಲಾ ತಾಲೂಕಿನ ನರೇಗಾ ಕಾರ್ಮಿಕರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...