ಬೀದರ್‌ | ಸದಲಾಪುರ ಗ್ರಾಮದ ದಲಿತ ಓಣಿಗೆ ಮೂಲ ಸೌಕರ್ಯ ಕಲ್ಪಿಸಿ : ಎಎಸ್‌ಎಸ್‌ಕೆ

Date:

ಬಸವಕಲ್ಯಾಣ ತಾಲೂಕಿನ ಯರಬಾಗ ಗ್ರಾಮ ಪಂಚಾಯತ್‌ ವ್ಯಾಪ್ತಿಗೆ ಬರುವ ಸದಲಾಪುರ ಗ್ರಾಮದ ದಲಿತರ ಓಣಿಯಲ್ಲಿ ಮೂಲ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಅಂಬೇಡ್ಕರ್‌ ಸೇವಾ ಸಮಿತಿ ಕರ್ನಾಟಕ ತಾಲೂಕು ಘಟಕ ಒತ್ತಾಯಿಸಿದೆ.

ಈ ಸಂಬಂಧ ಸಂಘಟನೆಯ ಪದಾಧಿಕಾರಿಗಳು ತಾಲೂಕು ಪಂಚಾಯತ್‌ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.

ʼಸದಲಾಪುರ ಗ್ರಾಮದ ದಲಿತರ ಓಣಿಯಲ್ಲಿ ರಸ್ತೆ, ಚರಂಡಿ ಸೇರಿದಂತೆ ಅಗತ್ಯ ಮೂಲ ಸೌಕರ್ಯ ಇಲ್ಲದೆ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಇನ್ನು ಮಳೆಗಾಲದಲ್ಲಿ ಸ್ವಚ್ಛತೆ ಇಲ್ಲದೆ ಸಾಂಕ್ರಾಮಿಕ ರೋಗಗಳ ಭಯ ಕಾಡುತ್ತಿದೆ. ಈ ಬಗ್ಗೆ ಪಂಚಾಯತ್‌ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಪಂಚಾಯತ್‌ ಅಧಿಕಾರಿಗಳು, ಸದಸ್ಯರು ಸ್ಪಂದಿಸುತ್ತಿಲ್ಲʼ ಎಂದು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼ15ನೇ ಹಣಕಾಸು ಯೋಜನೆ ಹಣವನ್ನು ಮೂಲ ಸೌಕರ್ಯಕ್ಕೆ ಬಳಸದೆ ಗುಡಿ ಗುಂಡಾರಗಳಿಗೆ ಬಳಸುತ್ತಿದ್ದು, ಪಂಚಾಯತ್‌ ಪಿಡಿಒ, ಅಧ್ಯಕ್ಷರು 15ನೇ ಹಣಕಾಸು ಯೋಜನೆಯ ಅನುದಾನ ದುರ್ಬಳಕೆ ಮಾಡಿಕೊಂಡಿದ್ದಾರೆ. ಕೂಡಲೇ ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೆ ತಾಲೂಕು ಪಂಚಾಯತ್‌ ಎದುರು ಧರಣಿ ನಡೆಸಲಾಗುವುದುʼ ಎಂದು ಎಚ್ಚರಿಸಿದರು.

ಇದನ್ನೂ ಓದಿ : ಔರಾದ್‌ | ಮಾನವೀಯತೆ ಸಂಬಂಧ ಗಟ್ಟಿಗೊಳಿಸಿದ ಶರಣರು : ಶಿವಕುಮಾರ ಘಾಟೆ

ಈ ಸಂದರ್ಭದಲ್ಲಿ ಅಂಬೇಡ್ಕರ್‌ ಸೇವಾ ಸಮಿತಿ ಕರ್ನಾಟಕದ ಜಿಲ್ಲಾಧ್ಯಕ್ಷ ಲೋಕೇಶ ಕಾಂಬಳೆ, ಬಸವಕಲ್ಯಾಣ ತಾಲೂಕಾಧ್ಯಕ್ಷ ಮುಕೇಶ ಪಾಂಡೆ ಸೇರಿದಂತೆ ಪ್ರಮುಖರಾದ ದೇವಾನಂದ ತೊಳೆ, ಭೀಮರೆಡ್ಡಿ ಸಿಂಧನಕೇರಾ, ಗೌತಮ ಖರ್ಗೆ, ಯುವರಾಜ ಐಹೊಳೆ, ಸಾಗರ ರಾಯೋಳ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...