ಬೀದರ್‌ | ʼಈದಿನʼದ ಐದು ಸಣ್ಣ ಸುದ್ದಿಗಳು ಓದಿ

Date:

ಬೀದರ್‌ | ಫೆ.22-23ರಂದು ವಿವಿಧ ಮೇಳ ಆಯೋಜನೆ :

ಕೃಷಿ ಇಲಾಖೆಯ ವತಿಯಿಂದ 2025-26ನೇ ಸಾಲಿನ ಜಿಲ್ಲಾ ಮಟ್ಟದ ಸಿರಿಧಾನ್ಯ ಮೇಳ, ಮತ್ಸ್ಯ ಮೇಳ, ಉದ್ಯೋಗ ಮೇಳ, ಪುಷ್ಪ ಮೇಳ ಹಾಗೂ ತೋಟಗಾರಿಕೆ ಮೇಳ–2026 ಕಾರ್ಯಕ್ರಮವನ್ನು ಫೆಬ್ರವರಿ 22 ಮತ್ತು 23ರಂದು ಬೀದರ್ ನಗರದ ನೆಹರೂ ಕ್ರಿಡಾಂಗಣನಲ್ಲಿ ಆಯೋಜಿಸಲಾಗಿದೆ ಎಂದು ಬೀದರ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕುರಿ-ಮೇಕೆ ಸಾಕಾಣಿಕೆ ತರಬೇತಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರದಲ್ಲಿ ಫೆ.23 ಮತ್ತು 24ರಂದು ಕುರಿ ಹಾಗೂ ಮೇಕೆ ಸಾಕಾಣಿಕೆ ತರಬೇತಿ ಹಮ್ಮಿಕೊಳ್ಳಲಾಗಿದೆ.

ಆಸಕ್ತ ರೈತರು ವಾಟ್ಸಪ್ ಮೂಲಕ ಹೆಸರು ಮತ್ತು ಮೊಬೈಲ್ ಸಂಖ್ಯೆಯೊಂದಿಗೆ ನೋಂದಾಯಿಸಬೇಕು. 40 ಮಂದಿಗೆ ಮಾತ್ರ ಅವಕಾಶವಿದ್ದು, ಮೊದಲು ನೋಂದಾಯಿಸಿದವರಿಗೆ ಆದ್ಯತೆ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಮೊಬೈಲ್: 9902561957 ಸಂಪರ್ಕಿಸಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.


ಭಾಲ್ಕಿ : ನಿಷೇಧಿತ ಸ್ಥಳದಲ್ಲಿ ಮಹಾತ್ಮರ ಭಾವಚಿತ್ರ ಅಳವಡಿಸಿದರೆ ಕಾನೂನು ಕ್ರಮ

ಭಾಲ್ಕಿ ತಾಲೂಕಿನಲ್ಲಿ ಪರವಾನಿಗೆ ಇಲ್ಲದೇ ಸಾರ್ವಜನಿಕ ಮತ್ತು ನಿಷೇಧಿತ ಸ್ಥಳಗಳಲ್ಲಿ ಮಹಾತ್ಮರ ಭಾವಚಿತ್ರ ಅಳವಡಿಕೆ, ಕಟ್ಟೆ ಕಟ್ಟುವುದು, ಕಂಬ ನೆಡುವುದು ಕಂಡು ಬಂದರೆ ಅಂತಹ ವ್ಯಕ್ತಿಗಳ ವಿರುದ್ಧ ಕಾನೂನು ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ತಹಸೀಲ್ದಾರ ಮಲ್ಲಿಕಾರ್ಜುನ ವಡ್ಡನಕೇರಿ ಮತ್ತು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಸೂರ್ಯಕಾಂತ ಬಿರಾದಾರ್ ಎಚ್ಚರಿಕೆ ನೀಡಿದ್ದಾರೆ.

ಕೆಲವು ಗ್ರಾಮಗಳಲ್ಲಿ ಕೆಲ ಜನರ ಗುಂಪು ಸಾರ್ವಜನಿಕ ಶಾಂತಿ ಮತ್ತು ಸಾಮರಸ್ಯಕ್ಕೆ ಭಂಗ ತರುವ ಉದ್ದೇಶದಿಂದ ಮನ-ಬಂದಲ್ಲಿ ಕೆಲವು ಮಹಾಪುರುಷರ ಭಾವ-ಚಿತ್ರಕ್ಕೆ ಪೂಜೆ ಮಾಡುವುದು, ಕಟ್ಟಿ ಕಟ್ಟವುದು ಮತ್ತು ಕಂಬ ನಡೆವುದು ಇತ್ತಿಚಿನ ದಿನಗಳಲ್ಲಿ ಹೆಚ್ಚಾಗಿ ಕಂಡು ಬರುತ್ತಿದೆ. ವಿನಕಾರಣ ನಿಯಮ ಬಾಹಿರವಾಗಿ ಈ ರೀತಿ ಸಾಮಾಜಿಕ ಶಾಂತಿ ಸಾಮರಸ್ಯಕ್ಕೆ ಧಕ್ಕೆ ಉಂಟು ಮಾಡುವ ಈ ಕುಕೃತ್ಯಕ್ಕೆ ಕೈ ಹಾಕಿದರೆ ಅಂಥವರ ವಿರುದ್ಧ ಕ್ರಿಮನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದಿದ್ದಾರೆ.

ಒಂದು ವೇಳೆ ಈ ಆದೇಶವನ್ನು ಉಲ್ಲಂಘನೆ ಮಾಡಿದಲ್ಲಿ ನಿಯಮಾನುಸಾರ ಕಾನೂನು ರೀತಿ, ಸೂಕ್ತ ಕ್ರಮ ಜರುಗಿಸಲಾಗುವುದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


35 ದಿನಗಳ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ

ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಬೀದರ ಮತ್ತು ಸಂಸೃತಿ ಕೌಶಲ್ಯಾಭಿವೃದ್ಧಿ ಕೇಂದ್ರ ಸಹಯೋಗದಲ್ಲಿ 18–25 ವರ್ಷದ ನಿರುದ್ಯೋಗಿ ಯುವಕ-ಯುವತಿಯರಿಗೆ 35 ದಿನಗಳ ಉಚಿತ ತರಬೇತಿ ನೀಡಲಾಗುತ್ತಿದೆ.

ಬೇಸಿಕ್ ಕಂಪ್ಯೂಟರ್, ಇಂಗ್ಲಿಷ್ ಕಮ್ಯುನಿಕೇಶನ್, ಟ್ಯಾಲಿ, ಜಿಎಸ್‌ಟಿ, ಎಐ ಟೂಲ್ಸ್ ಹಾಗೂ ಜೀವನ ಕೌಶಲ್ಯಗಳ ತರಬೇತಿ ನೀಡಲಾಗುತ್ತದೆ. ತರಬೇತಿ ನಂತರ ಸರ್ಕಾರದ ಪ್ರಮಾಣ ಪತ್ರ ಹಾಗೂ ₹15,000–₹20,000 ವೇತನದ ಉದ್ಯೋಗಾವಕಾಶ ಕಲ್ಪಿಸಲಾಗುವುದು.

ಹೊಸ ಬ್ಯಾಚ್ ಫೆ.24ರಿಂದ ಆರಂಭವಾಗಲಿದ್ದು, ಹೆಚ್ಚಿನ ಮಾಹಿತಿಗೆ ಮೊಬೈಲ್: 9901112533 / 9738486472 / 9916364114 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಫೆ.20ರಂದು ಬಲಗೈ ಸಮುದಾಯದ ಜಿಲ್ಲಾ ಮಟ್ಟದ ಸಭೆ

ಒಳಮೀಸಲಾತಿ ಜಾರಿಯಿಂದ ಬಲಗೈ ಸಮುದಾಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತಲು ಹಾಗೂ ಮುಂದಿನ ಹೋರಾಟದ ರೂಪುರೇಷೆ ಸಿದ್ಧಪಡಿಸಲು ಫೆಬ್ರವರಿ 20ರಂದು ಮಧ್ಯಾಹ್ನ 2 ಗಂಟೆಗೆ ಬೀದರ್ ನಗರದ ಶಾಹಗಂಜ್‌ನಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ಮಟ್ಟದ ಬೃಹತ್ ಸಭೆ ಹಮ್ಮಿಕೊಳ್ಳಲಾಗಿದೆ.

ಪ್ರಸ್ತುತ ಒಳಮೀಸಲಾತಿ ಹಂಚಿಕೆಯಲ್ಲಿ ಬಲಗೈ ಸಮುದಾಯಕ್ಕೆ ಆಗುತ್ತಿರುವ ತಾರತಮ್ಯವು ಮುಂದಿನ ಪೀಳಿಗೆಯ ಭವಿಷ್ಯಕ್ಕೆ ಮಾರಕವಾಗಲಿದೆ ಎಂದು ಸಮುದಾಯದ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ. ಸರ್ಕಾರದ ಮೇಲೆ ಒತ್ತಡ ಹೇರುವ ಸಲುವಾಗಿ ಸಂಘಟಿತ ಹೋರಾಟದ ಅಗತ್ಯವಿದೆ ಎಂದು ಸಮುದಾಯದ ಯುವ ಮುಖಂಡ ಮಹೇಶ್ ಗೋರನಾಳಕರ್ ಹೇಳಿದ್ದಾರೆ.

ಇದನ್ನೂ ಓದಿ : ಬೀದರ್‌ | ಅಕ್ರಮ ಮಾದಕ ವಸ್ತು ಸಾಗಾಟ : ₹3 ಲಕ್ಷ ಮೌಲ್ಯದ ವಸ್ತು ಜಪ್ತಿ; ನಾಲ್ವರ ಬಂಧನ

ಈ ಗಂಭೀರ ವಿಷಯದ ಕುರಿತು ಚರ್ಚಿಸಲು ಜಿಲ್ಲೆಯ ಬಲಗೈ ಸಮುದಾಯದ ಹೋರಾಟಗಾರರು, ಚಿಂತಕರು, ವಿವಿಧ ಸಂಘ–ಸಂಸ್ಥೆಗಳ ಮುಖ್ಯಸ್ಥರು, ಸರ್ಕಾರಿ ಹಾಗೂ ಅರೆ-ಸರ್ಕಾರಿ ನೌಕರರು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಮಹಿಳೆಯರು, ಯುವಕರು ಮತ್ತು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಭೆಗೆ ಆಗಮಿಸಿ ತಮ್ಮ ಸಲಹೆ–ಅಭಿಪ್ರಾಯಗಳನ್ನು ಹಂಚಿಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.

6378a520579666f153c2fe302416fd40eb44392fa3ff3c717bc425bc472039bf?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...