ಬೀದರ್‌ | ಎಸ್‌ಎಸ್‌ಎಲ್‌ಸಿ ಫಲಿತಾಂಶ ಕುಸಿತ ಆರೋಪ : ವಸತಿ ಶಾಲೆ ಪ್ರಾಚಾರ್ಯ ಅಮಾನತು

Date:

ವಸತಿ ಶಾಲೆಯ ಆಡಳಿತಾತ್ಮಕ ನಿರ್ವಹಣೆ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ವೃದ್ಧಿಸಲು ಕೇಂದ್ರ ಕಚೇರಿಯಿಂದ
ರೂಪಿಸಲಾಗಿರುವ ಕಾರ್ಯ-ಅಂಶಗಳನ್ನು ಕಾರ್ಯಗತಗೊಳಿಸುವಲ್ಲಿ ವಿಫಲವಾದ ಆರೋಪದ ಮೇಲೆ ಭಾಲ್ಕಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಚಾರ್ಯ ಶಂಕರ ಅವರನ್ನು ಅಮಾನತು ಮಾಡಲಾಗಿದೆ.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಮೇಲಾಧಿಕಾರಿಗಳ ತಂಡ ನೀಡಿದ ವರದಿ ಆಧರಿಸಿ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ಕಾಂತರಾಜು ಪಿ.ಎಸ್ ಅವರು ಜ.14ರಂದು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಪ್ರಾಂಶುಪಾಲ ಶಂಕರ ಅವರು ನಿಯಮಿತವಾಗಿ ವಸತಿ ಶಾಲೆಯ ತರಗತಿಗಳು ನಡೆಯುತ್ತಿರುವ ಕುರಿತು ಮೇಲುಸ್ತುವಾರಿಯನ್ನು ಸಮರ್ಪಕವಾಗಿ ಮಾಡದಿರುವುದು. ವಿದ್ಯಾರ್ಥಿಗಳ ದೈನಂದಿನ ಕಾರ್ಯಗಳ ಪಾಲನೆಯ ನಿರ್ವಹಣೆಯ ಮೇಲುಸ್ತುವಾರಿ ನೋಡದಿರುವುದು. 2024-25ನೇ ಶೈಕ್ಷಣಿಕ ಸಾಲಿನಲ್ಲಿ 21 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದು, ಶೇ 43.24ರಷ್ಟು ಫಲಿತಾಂಶಕ್ಕೆ ಕುಸಿದಿದೆ. ಈ ಶಾಲೆಯು ಬೀದರ್ ಜಿಲ್ಲೆ ಹಾಗೂ ರಾಜ್ಯದ ಸಂಘದ ವಸತಿ ಶಾಲೆಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ಕೊನೆ ಸ್ಥಾನದಲ್ಲಿರುವುದು ಸೇರಿ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಕರ್ತವ್ಯಲೋಪ ಎಸಗಿರುವ ಒಟ್ಟು 12 ಅಂಶಗಳ ಪಟ್ಟಿಯನ್ನು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ತವ್ಯಲೋಪ ಹಾಗೂ ಬೇಜವಾಬ್ದಾರಿತನ ಆಗಿರುವುದು ಮೇಲ್ನೋಟಕ್ಕೆ ಕಂಡು ಬಂದಿರುವುದರಿಂದ ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಾವಳಿ-1957 ರ ನಿಯಮ 10(1) (ಡಿ) ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ತಿದ್ದುಪಡಿ ವಿನಿಯಮಗಳು-2025ರಂತೆ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಅಮಾನತು ಮಾಡಲಾಗಿದೆ.

ಇದನ್ನೂ ಓದಿ : ಬೀದರ್‌ | ಆಗಸದಲ್ಲಿ ಚಿತ್ತಾರ ಮೂಡಿಸಿದ ‘ಏರ್‌ ಶೋ’

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...