ಬೀದರ್‌ | ಮಾ.17 ರಂದು ಬಲಗೈ ಸಮುದಾಯಗಳ ಪ್ರತಿಭಟನೆ : ಕರಪತ್ರ ಬಿಡುಗಡೆ

Date:

ಒಳ ಮೀಸಲಾತಿ ವರದಿಯಿಂದ ಉಂಟಾದ ಅವೈಜ್ಞಾನಿಕ ಗೊಂದಲ ಸರಿಪಡಿಸುವಂತೆ ಆಗ್ರಹಿಸಿ ಮಾ.17 ರಂದು ಬೀದರ್‌ ನಗರದಲ್ಲಿ ಬಲಗೈ ಸಮುದಾಯದಿಂದ ನಡೆಯಲಿರುವ ಬೃಹತ್‌ ಪ್ರತಿಭಟನೆಯ ಕರಪತ್ರವನ್ನು ಡಾ.ಬಿ.ಆರ್.ಅಂಬೇಡ್ಕರ್‌ ವೃತ್ತದಲ್ಲಿ ಮಂಗಳವಾರ ಬಿಡುಗಡೆ ಮಾಡಲಾಯಿತು.

ಹೋರಾಟ ಸಮಿತಿಯ ಅಧ್ಯಕ್ಷ ಮಹೇಶ ಗೋರನಾಳಕರ್ ಮಾತನಾಡಿ, ʼರಾಜ್ಯದಲ್ಲಿ ನ್ಯಾ.ನಾಗಮೋಹನದಾಸ್ ಅವರ ಒಳ ಮೀಸಲಾತಿ ವರದಿಯಿಂದ ಉಂಟಾದ ಅವೈಜ್ಞಾನಿಕ ಗೊಂದಲದಿಂದ ಪ್ರವರ್ಗ-ಬಿ ಹಾಗೂ ಪ್ರವರ್ಗ-ಸಿ ಸಮುದಾಯಗಳಿಗೆ ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರಗಳಲ್ಲಿ ಅನ್ಯಾಯವಾಗುತ್ತಿದೆ. ಯಾವುದೇ ಸಮುದಾಯದ ಹಕ್ಕುಗಳನ್ನು ಕಸಿದುಕೊಳ್ಳುವ ಉದ್ದೇಶ ನಮ್ಮದಿಲ್ಲ. ಆದರೆ ನಮಗೆ ದಕ್ಕಬೇಕಾದ ಮೀಸಲಾತಿಯನ್ನು ನೈತಿಕವಾಗಿ ಕೇಳುವುದು ನಮ್ಮ ಸ್ವಾಭಿಮಾನದ ಹಕ್ಕುʼ ಎಂದು ಹೇಳಿದರು.

ʼರಾಜ್ಯದ 101 ಸಮುದಾಯಗಳಿಗೆ ಅನ್ಯಾಯವಾಗದಂತೆ ಸರ್ಕಾರ ಬಿಂದು ಶ್ರೇಣಿಯಲ್ಲಿ ಉಂಟಾದ ಗೊಂದಲವನ್ನು ಸರಿಪಡಿಸಿ ನ್ಯಾಯ ನೀಡಬೇಕೆಂದು ಒತ್ತಾಯಿಸಿ ಇದೇ ಮಾರ್ಚ್ 17ರಂದು ಬೀದರದಲ್ಲಿ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮಾಜದ ಹಿರಿಯ ಮುಖಂಡ ವಿಠಲದಾಸ ಪ್ಯಾಗೆ ಮಾತನಾಡಿ, ʼಬಲಗೈ ಸಮುದಾಯವು ಒಳಮೀಸಲಾತಿ ವಿರೋಧಿಯಲ್ಲ. ಆದರೆ ಕೆಲವರು ಉದ್ದೇಶಪೂರ್ವಕವಾಗಿ ಬಲಗೈ ಸಮುದಾಯದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಸಚಿವರಾದ ಹೆಚ್.ಸಿ.ಮಹಾದೇವಪ್ಪಾ, ಡಾ.ಜಿ.ಪರಮೇಶ್ವರ ಹಾಗೂ ಪ್ರಿಯಾಂಕ್ ಖರ್ಗೆ ಅವರಿಗೆ ಅವಮಾನ ಮಾಡುವ ಮೂಲಕ ಸಮಾಜಗಳಲ್ಲಿ ದ್ವೇಷ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ ಅವರು, ಇಂತಹ ಅಶಾಂತಿ ಮೂಡಿಸುವವರಿಗೆ ತಕ್ಕ ಉತ್ತರ ನೀಡುತ್ತೇವೆʼ ಎಂದು ಹೇಳಿದರು.

ಹಿರಿಯ ಮುಖಂಡ ಕಾಶಿನಾಥ ಚೆಲ್ವಾ ಮಾತನಾಡಿ, ʼಮಾ.17ರಂದು ನಡೆಯುವ ಹೋರಾಟವು ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ನಡೆಯುತ್ತಿದೆ. ಬೀದರ ಜಿಲ್ಲೆಯ ಜನತೆ ಹಾಗೂ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಅನುಯಾಯಿಗಳು ತಮ್ಮ ಎಲ್ಲಾ ಕೆಲಸ ಕಾರ್ಯಗಳನ್ನು ಬದಿಗಿಟ್ಟು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಬೇಕುʼ ಎಂದು ಮನವಿ ನೀಡಿದರು.

ಇದನ್ನೂ ಓದಿ : ಬೀದರ್‌ | ಕುಡಿಯುವ ನೀರಿನ ಸಮಸ್ಯೆ ಕಂಡುಬಂದರೆ 24 ಗಂಟೆಯೊಳಗೆ ಪರಿಹಾರ ಕಲ್ಪಿಸಿ : ಸಚಿವ ಈಶ್ವರ ಖಂಡ್ರೆ

ಹೋರಾಟ ಸಮಿತಿಯ ಸದಸ್ಯರಾದ ಅರುಣ ಪಟೇಲ್, ಸಂಜುಕುಮಾರ ಸಾಗರ, ಪವನ ಮಿಠಾರೆ, ಪ್ರಕಾಶ ರಾವಣ, ರಾಹುಲ್ ಡಾಂಗೆ, ವಿನೋದ ಬಂದಗೆ, ಪ್ರದೀಪ್ ನಾಟೆಕರ್, ಸೂರ್ಯಕಾಂತ ಸಾಧುರೆ, ಭೀಮರಾವ ಮಾಲಗತ್ತಿ ಪ್ರಮುಖರಾದ ಶಿವಕುಮಾರ ನಿಲಿಕಟ್ಟಿ, ರಾಜಕುಮಾರ ಮೂಲಭಾರತಿ, ಸಂಜುಕುಮಾರ ಮೇತ್ರೆ, ಉದಯ ನಾಯಕ, ಮುಕೇಶ್ ರಾಯ್, ಸುನೀಲ್ ಡೋಳೆ, ಮಲ್ಲಿಕಾರ್ಜುನ ಮೊಳಕೇರೆ, ಶಿವಕುಮಾರ ತುಂಗಾ, ಧನರಾಜ ಮುಸ್ತಾಪೂರ, ಸಂದೀಪ್ ಕಾಂಟೆ, ಸತೀಶ್ ಲಕ್ಕಿ, ಪುಟ್ಟು ದೀನೆ, ಶರಣು ಫುಲೆ, ಪ್ರವೀಣ ಕರಂಜೆ, ದಿನೇಶ್ ಶಿಂದೆ, ಸಂತೋಷ ಸೂರ್ಯವಂಶಿ, ವಿಠಲ ಕಾಂಬಳೆ, ಲಕ್ಷ್ಮಣ ಶೇರಿಕಾರ್, ತುಕಾರಾಮ ಯರನಳ್ಳಿ, ದಿಲೀಪ್ ಸನ್ನೂರಕರ್, ಶ್ರೀನಿವಾಸ ದಯಾಳ, ಸುಧಾಮಣಿ ಗುಪ್ತಾ, ಗಂಗಮ್ಮ ಫುಲೆ, ರಂಜೀತಾ ಜೈನೋರ್, ಮಹಾದೇವಿ ನೀಲಿಕಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...