ಬೀದರ್‌ | ಕೇಂದ್ರದ ಅನುದಾನ ತರುವಲ್ಲಿ ಸಾಗರ ಖಂಡ್ರೆ ಯಶಸ್ವಿ : ಸಚಿವ ಈಶ್ವರ ಖಂಡ್ರೆ

Date:

ಬೀದರ್‌ ನಗರದ ಪಾಪನಾಶ ದೇವಸ್ಥಾನ ಅಭಿವೃದ್ಧಿಯಾಗಬೇಕು ಎನ್ನುವುದು ಬೀದರ ಜಿಲ್ಲೆಯ ಜನರ ಬಹುದಿನದ ಬೇಡಿಕೆಯಾಗಿತ್ತು, ಅದು ಸಂಸದ ಸಾಗರ ಖಂಡ್ರೆ ಅವರ ಸತತ ಪ್ರಯತ್ನದಿಂದ ಈಡೇರಿದೆ ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯ ಭಾರತ ಸರ್ಕಾರ, ಪ್ರವಾಸೋದ್ಯಮ ಇಲಾಖೆ ಕರ್ನಾಟಕ ಸರ್ಕಾರ, ಜಿಲ್ಲಾಡಳಿತ ಮತ್ತು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಬೀದರ, ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯ ಪ್ರಸಾದ ಯೋಜನೆ ಅಡಿಯಲ್ಲಿ 22.41 ಕೋಟಿ ರೂ. ವೆಚ್ಚದಲ್ಲಿ ಪಾಪನಾಶ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗೆ ಶನಿವಾರ ಚಾಲನೆ ನೀಡಿ ಮಾತನಾಡಿದರು.

ʼ2024ರ ಮಾರ್ಚ್‌ ತಿಂಗಳಲ್ಲಿ ಈ ಕಾಮಗಾರಿ ಘೋಷಣೆಯಾಗಿ ಪ್ರಧಾನಿ ನರೇಂದ್ರ ಮೋದಿ ಅವರು ವರ್ಚವಲ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದರು. ಆದರೆ, ಯಾವುದೇ ಪ್ರಗತಿಯಾಗಿರಲಿಲ್ಲ. ಸಂಸದ ಸಾಗರ ಖಂಡ್ರೆ ಸಂಸದರಾದ ಮೇಲೆ ಕೇಂದ್ರ ಪ್ರವಾಸೋದ್ಯಮ ಸಚಿವರಿಗೆ ನಿರಂತರ ಭೇಟಿ ಮಾಡಿ ಹಣ ಮಂಜೂರಾತಿ ಮಾಡಿಸಿದ್ದಾರೆ. ನಂತರ ರಾಜ್ಯ ಸರ್ಕಾರ ಪ್ರವಾಸೋದ್ಯಮ ಇಲಾಖೆಯಿಂದ ಟೆಂಡರ್ ಆಗಿ ಈಗ ಕಾಮಗಾರಿ ಪ್ರಾರಂಭವಾಗುತ್ತಿದೆ. ಕಾಮಗಾರಿಯೂ ನಾಲ್ಕು ತಿಂಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼದೇವಸ್ಥಾನಗಳ ಮೇಲೆ ಜನರ ಸಾಕಷ್ಟು ನಂಬಿಕೆ ಇದೆ. ಶಿವರಾತ್ರಿ ಸಮಯದಲ್ಲಿ ಪಾಪನಾಶ ದೇವಾಲಯಕ್ಕೆ ಸಹಸ್ರಾರು ಭಕ್ತರು ಭೇಟಿ ನೀಡುತ್ತಾರೆ. ದೇವಸ್ಥಾನದ ಜೀರ್ಣೋದ್ಧಾರದಿಂದ ಬರುವ ಭಕ್ತರಿಗೆ ಅನುಕೂಲವಾಗಲಿದೆ. ಇದರ ಜೊತೆಗೆ 10 ಎಕರೆ ಪ್ರದೇಶದಲ್ಲಿ ಅಂಬೇಡ್ಕರ್ ಸಂಶೋಧನಾ ಸಂಸ್ಥೆ, ವಿಮಾನಯಾನಕ್ಕೆ ಮರುಚಾಲನೆ ಸೇರಿದಂತೆಜಿಲ್ಲೆಯಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳು ಮಾಡಲಾಗುತ್ತಿದೆʼ ಎಂದರು.

WhatsApp Image 2026 02 07 at 6.55.06 PM

ಪೌರಾಡಳಿ ಹಾಗೂ ಹಜ್ ಸಚಿವ ರಹೀಂ ಖಾನ್ ಮಾತನಾಡಿ, ʼಯಾರೇ ಅಭಿವೃದ್ಧಿ ಮಾಡಲಿ ಒಟ್ಟಿನಲ್ಲಿ ಬೀದರ ಅಭಿವೃದ್ಧಿಯಾಗಬೇಕು. ನಮ್ಮ ಇಲಾಖೆಯಿಂದ ಪಾಪನಾಶ ಅಭಿವೃದ್ಧಿಗಾಗಿ 5 ಕೋಟಿ ರೂಪಾಯಿ ನೀಡಿದ್ದೇನೆ. ಬೀದರ ಕೋಟೆ ಅಭಿವೃದ್ಧಿಗಾಗಿ 10 ಕೋಟಿ ಹಾಗೂ ಕೆರೆ ಅಭಿವೃದ್ಧಿಗಾಗಿ 50 ಕೋಟಿ ಮಿಸಲೀಟ್ಟಿದ್ದೇನೆ. ಈಗಾಗಲೇ 100 ಕೋಟಿ ರೂಪಾಯಿ ವೆಚ್ಚದಲ್ಲಿ ಜಿಲ್ಲೆಯಲ್ಲಿ ರಸ್ತೆ ಚರಂಡಿ ಕಾಮಗಾರಿ ನಡೆಯಲಿವೆʼ ಎಂದರು.

ಸಂಸದ ಸಾಗರ ಖಂಡ್ರೆ ಮಾತನಾಡಿ, ʼಐತಿಹಾಸಿಕ ಪಾಪನಾಶ ದೇವಸ್ಥಾನದ ಅಭಿವೃದ್ಧಿಗೆ ʼಪ್ರಸಾದʼ ಯೋಜನೆಯಡಿ ತಾವು ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ಅನುದಾನ ಬಿಡುಗಡೆಗಾಗಿ ವಿನಂತಿಸಿದ ನಂತರ ಸಚಿವರು ಅನುದಾನ ಬಿಡುಗಡೆ ಮಾಡಿದ್ದಾರೆ. ಈಗ ನನ್ನ ಕ್ಷೇತ್ರದ ಜನತೆಯ ಪರವಾಗಿ ಸಂಸದರಾಗಿ 22.41 ಕೋಟಿ ರೂ. ವೆಚ್ಚದಲ್ಲಿ ದೇವಾಲಯ ಅಭಿವೃದ್ಧಿಯ ವಿವಿಧ ಕಾಮಗಾರಿಗೆ ಚಾಲನೆ ನೀಡಿದ್ದೇವೆ. ಧಾರ್ಮಿಕ ಕಾರ್ಯಕ್ರಮದಲ್ಲಿ ಯಾರೂ ರಾಜಕೀಯ ತರಬಾರದು. ಪಾಪನಾಶ ದೇವಸ್ಥಾನ ಅಭಿವೃದ್ಧಿಗೆ ಅಲ್ಲದೇ ಜಿಲ್ಲೆಯ ಎಲ್ಲ ಧಾರ್ಮಿಕ ಕ್ಷೇತ್ರಗಳನ್ನು ಸಹ ಅಭಿವೃದ್ಧಿ ಮಾಡಲಾಗುವುದುʼ ಎಂದರು.

ʼಬಡ ಜನರಿಗಾಗಿ ಈಗಾಗಲೇ 50 ಸಾವಿರ ಮನೆಗಳನ್ನು ಮಂಜೂರು ಮಾಡಲಾಗಿದೆ. ಜಿಲ್ಲೆಯಲ್ಲಿ ಸುಮಾರು 100 ಕೋಟಿ ರೈಲ್ವೆ ಕಾಮಗಾರಿ ನಡೆಯುತ್ತಿದೆ. ಜಿಲ್ಲೆಯನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯಲು ತಾವು ಬದ್ಧರಾಗಿದ್ದೇವೆ. ಪಾಪನಾಶ ಮಂದಿರದ ಪರಿಸರದಲ್ಲಿ ಜಾತ್ರಾ ಸಂಕೀರ್ಣ ನಿರ್ಮಾಣ, ಕೆರೆ ಮತ್ತು ಸುತ್ತಲಿನ ಪ್ರದೇಶ ಕಾಮಗಾರಿ, ಅನ್ನದಾಸೋಹ ಕಟ್ಟಡ, ಯಾತ್ರಿಕರ ವಿಶ್ರಾಂತಿ ತಾಣ, ಸಾಂಸ್ಕೃತಿಕ ಮತ್ತು ಮನೋರಂಜನಾ ಕೇಂದ್ರ, ಪಾರ್ಕಿಂಗ್ ಪ್ರದೇಶ ಅಭಿವೃದ್ಧಿ, ರಸ್ತೆ, ಪಾದಚಾರಿ ಮಾರ್ಗಗಳು, ಮುಖ್ಯ ಪ್ರವೇಶ ದ್ವಾರ ಹಾಗೂ ವಿವಿಧ ರೀತಿಯ ಕಾಮಗಾರಿಗಳನ್ನು ಕೈಗೊಳ್ಳಲಾಗುವುದುʼ ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಚಂದ್ರಶೇಖರ ಪಾಟೀಲ್ ಮಾತನಾಡಿ, ʼಸಂಸದ ಸಾಗರ ಖಂಡ್ರೆ ಅವರು ಶ್ರಮದಿಂದ ಅನುದಾನ ತಂದು ತರುವಲ್ಲಿ ಸಫಲರಾಗಿದ್ದಾರೆ. ಈಗ ಟೆಂಡರ್ ಮಾಡಿಸಿ ಕಾಮಗಾರಿ ಪ್ರಾರಂಭಿಸಿದ್ದಾರೆ. ನಾವೆಲ್ಲರೂ ಸೇರಿ ಅವರಿಗೆ ಸಹಕಾರ ನೀಡಿದಾಗ ಇನ್ನೂ ಹೆಚ್ಚಿನ ಅಭಿವೃದ್ಧಿ ಕೆಲಸ ಮಾಡಲು ಶಕ್ತಿ ನೀಡಿದಂತಾಗುತ್ತದೆʼ ಎಂದರು.

ಇದನ್ನೂ ಓದಿ : ಬೀದರ್ | ವಸತಿ ಗೃಹದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಆತ್ಮಹತ್ಯೆ

ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಾಲಾ ನಾರಾಯಣರಾವ್, ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ್ ಜಾಬಶೆಟ್ಟಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಮೃತರಾವ ಚಿಮಕೋಡೆ, ಬೀದರ ನಗರಸಭೆ ಅಧ್ಯಕ್ಷ ಮಹ್ಮದ್ ಗೌಸ್, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಸಿಇಒ ಡಾ.ಗಿರೀಶ್ ಬದೋಲೆ, ಬೀದರ ಮಹಾನಗರ ಪಾಲಿಕೆ ಆಯುಕ್ತ ಮುಕುಲ್ ಜೈನ್, ಎಎಸ್ಪಿ ಚಂದ್ರಕಾಂತ ಪೂಜಾರಿ, ಬೀದರ ಸಹಾಯಕ ಆಯುಕ್ತ ಮೊಹ್ಮದ್ ಶಕೀಲ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಶಿವಲಿಂಗಪ್ಪ ಸೇರಿದಂತೆ ಬಸವರಾಜ ಧನ್ನೂರ, ಹಣಮಂತ ಚವ್ಹಾಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...