ರಸ್ತೆ ಬದಿಯ ಸೇತುವೆಗೆ ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಹುಮನಾಬಾದ್ ತಾಲೂಕಿನ ಹಳ್ಳಿಖೇಡ (ಬಿ) ಗ್ರಾಮದ ಸಮೀಪ ನಡೆದಿದೆ.
ಬಸವಕಲ್ಯಾಣ ತಾಲೂಕಿನ ರಾಜೇಶ್ವರ ಗ್ರಾಮದ ವೆಂಕಟ ಖರಾಟಮೊಲ್ (40), ಪತ್ನಿ ಶೀಲಾ (35), ಮಗಳು ರಕ್ಷಿತಾ (12) ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರ ಪುತ್ರ ದಿಗಂಬರ(15) ಅವರನ್ನು ಅಂಬುಲೆನ್ಸ್‌ನಲ್ಲಿ ಬೀದರ್ ಬ್ರಿಮ್ಸ್‌ಗೆ ದಾಖಲಿಸಲಾಗಿದೆ.
ಗ್ರಾಮದಲ್ಲಿ ಕೃಷಿಯಲ್ಲಿ ತೊಡಗಿಸಿಕೊಂಡಿದ್ದ ಮೃತ ವೆಂಕಟ್ ಅವರು ಮಾಜಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದರು.
ಬೀದರ್‌ನಿಂದ ಕುಟುಂಬ ಸಮೇತ ನಾಲ್ವರು ಒಂದೇ ಬೈಕ್‌ನಲ್ಲಿ ಸ್ವಗ್ರಾಮ ರಾಜೇಶ್ವರ ಕಡೆಗೆ ತೆರಳುತ್ತಿದ್ದ ವೇಳೆ ಸೇತುವೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಸ್ತೆ ಮೇಲೆ ನಾಲ್ವರು ಚಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಮೂವರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.
ಹಳ್ಳಿಖೇಡ(ಬಿ) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
ಇದನ್ನೂ ಓದಿ : ಪ್ರಾದೇಶಿಕ ಅಸಮಾನತೆ: ಹೊಣೆಗಾರಿಕೆ ಅಧಿಕಾರಸ್ಥರ ಮೇಲಿದೆ





