ಬೀದರ್‌ | ತೀವ್ರ ಚಳಿಗಾಲ : ಪ್ರಾಥಮಿಕ, ಪ್ರೌಢ ಶಾಲಾ ಸಮಯ ಬದಲಾವಣೆ

Date:

ಬೀದರ್ ಜಿಲ್ಲೆಯಲ್ಲಿ ಕೆಲ ದಿನಗಳಿಂದ ತೀವ್ರ ಚಳಿ ಇರುವುದರಿಂದ ಶಾಲಾ ವಿದ್ಯಾರ್ಥಿಗಳಿಗೆ ಬೆಳಿಗ್ಗೆ ಬೇಗ ಶಾಲೆಗೆ ತೆರಳಲು ತೊಂದರೆಯಾಗುತ್ತಿರುವ ಹಿನ್ನೆಲೆ ಶನಿವಾರದಂದು ಎಲ್ಲ ಪ್ರಾಥಮಿಕ, ಪ್ರೌಢ ಶಾಲೆಗಳ ಸಮಯ ಬದಲಾವಣೆ ಮಾಡಿ ಶಾಲಾ ಶಿಕ್ಷಣ ಇಲಾಖೆ (ಆಡಳಿತ) ಉಪನಿರ್ದೇಶಕ ಸುರೇಶ ಹೆಚ್.ಜಿ. ಅವರು ಆದೇಶ ಹೊರಡಿಸಿದ್ದಾರೆ.

ಈ ಹಿಂದೆ ಪ್ರತಿ ಶನಿವಾರದಂದು ಬೆಳಿಗ್ಗೆ 7.30 ರಿಂದ 12.30ರವರೆಗೆ ಶಾಲಾ ಸಮಯ ಬದಲಾವಣೆಯಾಗಿತ್ತು. ಇದರಿಂದ ಚಳಿಗಾಲದಲ್ಲಿ ತೀವ್ರ ಚಳಿ, ಶೀತಗಾಳಿ ಬೀಸುತ್ತಿರುವ ಕಾರಣ ವಿದ್ಯಾರ್ಥಿಗಳು ಬೆಳಿಗ್ಗೆ ಬರಲು ತೊಂದರೆಯಾಗುತ್ತಿತ್ತು. ಮಕ್ಕಳ ಹಿತದೃಷ್ಟಿಯಿಂದ ಶಾಲಾ ಸಮಯ ಬದಲಾವಣೆ ಮಾಡುವಂತೆ ಬೀದರ್‌ ಜಿಲ್ಲಾ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಿತು.

ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರ ಅನುಮತಿ ಆದೇಶ ಮೇರೆಗೆ ಡಿಡಿಪಿಐ ಸುರೇಶ ಹೆಚ್.ಜಿ. ಅವರು ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳ ಸಮಯವನ್ನು ಶನಿವಾರದಂದು ಬೆಳಿಗ್ಗೆ 9.50 ರಿಂದ ಮಧ್ಯಾಹ್ನ 1.30ರವರೆಗೆ ಬದಲಾವಣೆ ಮಾಡಿ ಜ.1ರಂದು ಆದೇಶಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ಬೀದರ್‌ | 10 ತಿಂಗಳಲ್ಲಿ 800ಕ್ಕೂ ಅಧಿಕ ರಸ್ತೆ ಅಪಘಾತ : 263 ಮಂದಿ ಸಾವು

ತೀವ್ರ ಚಳಿಯಿಂದ ಶಾಲಾ ಮಕ್ಕಳ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರುತ್ತಿತ್ತು. ಗ್ರಾಮೀಣ ಭಾಗದಿಂದ ಪ್ರೌಢ ಶಾಲೆಗಳಿಗೆ ಆಗಮಿಸುವ ವಿದ್ಯಾರ್ಥಿಗಳು ಬೆಳಿಗ್ಗೆ ಬಸ್‌ ಸೌಕರ್ಯ ಸೇರಿ ನಾನಾ ತೊಂದರೆ ಅನುಭವಿಸುತ್ತಿದ್ದರು. ಶನಿವಾರ ಶಾಲಾ ಸಮಯ ಬದಲಾವಣೆಗೆ ಶಿಕ್ಷಕರ, ಪೋಷಕರ ಆಗ್ರಹ ಕೇಳಿ ಬಂದಿತ್ತು. ಈಗ ಎಲ್ಲಾ ಸರ್ಕಾರಿ ಅನುದಾನಿತ ಹಾಗೂ ಖಾಸಗಿ ಶಾಲೆಗಳ ಸಮಯ ಬದಲಾವಣೆ ಮಾಡಿ ಶಿಕ್ಷಣ ಇಲಾಖೆ ಆದೇಶಿಸಿರುವುದು ಸಾರ್ವಜನಿಕ ವಲಯದಲ್ಲಿ ಸ್ವಾಗತ ವ್ಯಕ್ತವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...