ಬೀದರ್‌ | ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ : 94 ಪರೀಕ್ಷಾ ಕೇಂದ್ರ; ವೆಬ್‌ಕಾಸ್ಟಿಂಗ್‌ ಕಣ್ಗಾವಲು

Date:

ಈ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ನಾಳೆಯಿಂದ ಆರಂಭವಾಗಲಿದ್ದು, ಏಪ್ರಿಲ್ 2ರವರೆಗೆ ನಡೆಯಲಿವೆ .

ಬೀದರ್ ಜಿಲ್ಲೆಯಲ್ಲಿ ಒಟ್ಟು 28,439 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಈ ಪೈಕಿ 23,529 ರೆಗ್ಯುಲರ್, 1,439 ಪ್ರೈವೇಟ್ ಫ್ರೆಶರ್ಸ್ ಮತ್ತು 3,471 ಪುನರಾವರ್ತಿತ ವಿದ್ಯಾರ್ಥಿಗಳು ಸೇರಿದ್ದಾರೆ. ಪರೀಕ್ಷೆಯಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ಸುಸೂತ್ರವಾಗಿ ನಡೆಸಲು ಜಿಲ್ಲಾಡಳಿತ ಸಜ್ಜಾಗಿದೆ.

ಒಟ್ಟು 94 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಔರಾದ -13, ಬಸವಕಲ್ಯಾಣ-17, ಭಾಲ್ಕಿ-16, ಬೀದರ-28 ಹಾಗೂ ಹುಮನಾಬಾದ-20 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಶ್ನೆ ಪತ್ರಿಕೆ ವಿತರಣೆಗಾಗಿ 41 ಮಾರ್ಗಗಳನ್ನು ರಚಿಸಲಾಗಿದ್ದು, 1,364 ಪರೀಕ್ಷಾ ಕೊಠಡಿಗಳಿಗೆ ಸಿಸಿ ಕ್ಯಾಮೆರಾಗಳು ಅಳವಡಿಸಲಾಗಿದೆ. ಜಿಲ್ಲಾ ಪಂಚಾಯತದಲ್ಲಿ ಜಿಲ್ಲಾ ಮಟ್ಟದಲ್ಲಿ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯೂ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

ನಿಷೇಧಾಜ್ಞೆ ಜಾರಿ :

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯನ್ನು ಅತ್ಯಂತ ಪರಿಣಾಮಕಾರಿಯಾಗಿ ಹಾಗೂ ದೋಷರಹಿತವಾಗಿ ನಡೆಸಲು ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಶಾಂತ ವಾತಾವರಣದಲ್ಲಿ ನಡೆಸುವ ಹಿನ್ನಲೆಯಲ್ಲಿ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ-2023 ರ ಕಲಂ 163 (1) ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಸದರಿ ಪರೀಕ್ಷೆಯ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಆದೇಶಿಸಿದ್ದಾರೆ.

ಇದನ್ನೂ ಓದಿ : ಅಫ್ಘಾನ್‌ ಆಸ್ಪತ್ರೆ ಮೇಲೆ ಪಾಕ್‌ ಭೀಕರ ವಾಯುದಾಳಿ; 400 ಮಂದಿ ಸಾವು

ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ಝಿರಾಕ್ಸ್, ಕಂಪ್ಯೂಟರ್ ಅಂಗಡಿಗಳು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಪತ್ರ ಹೊಂದಿದ ವಿದ್ಯಾರ್ಥಿಗಳು, ನಿಯೋಜಿತ ಶಿಕ್ಷಕರು, ಜಾಗೃತ ದಳದವರನ್ನು ಹೊರುತಪಡಿಸಿ ಇನ್ನುಳಿದವರಿಗೆ ಅನುಮತಿ ನಿಷೇಧಿಸಲಾಗಿದ್ದು, ಪರೀಕ್ಷಾ ಕೇಂದ್ರದ ಸುತ್ತಲೂ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದು, ನಕಲು ಮಾಡುವ ಸಾಮಗ್ರಿಗಳನ್ನು ಹಾಗೂ ಹೊರಗಿನಿಂದ ನಕಲು ಬರೆದ ಚೀಟಿಗಳನ್ನು ಪರೀಕ್ಷಾ ಕೇಂದ್ರಗಳಲ್ಲಿ ಪೂರೈಸುವುದು ನಿರ್ಬಂಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...