ಬೀದರ್‌ | ಮೌಢ್ಯ, ಅಂಧಶ್ರದ್ಧೆ ನಿರ್ಮೂಲನೆಗೆ ಕ್ರಮ ವಹಿಸಿ : ದಲಿತ ಯುನಿಟಿ ಮೂವ್ಮೆಂಟ್

Date:

ಬೀದರ್ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಇಂದಿಗೂ ಮೌಢ್ಯ, ಅಂಧಶ್ರದ್ಧೆ ತಾಂಡವಾಡುತ್ತಿದ್ದು, ಕೂಡಲೇ ಜಿಲ್ಲಾಡಳಿತ ಅದನ್ನು ಸಂಪೂರ್ಣವಾಗಿ ನಿರ್ಮೂಲನೆಗೆ ಮುಂದಾಗಬೇಕೆಂದು ದಲಿತ ಯುನಿಟಿ ಮೂವ್ಮೆಂಟ್ ಸಂಘಟನೆ ಸಂಸ್ಥಾಪಕ ವಿನೋದ ರತ್ನಾಕರ ಆಗ್ರಹಿಸಿದರು.

ʼಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ಅಂಧಶ್ರದ್ಧೆ, ಜಾನಿ ಪೊತ್ರಾಜ್ ಅಂತಹ ಅನಿಷ್ಠ ಪದ್ಧತಿಯು ಮಾನವ ಘನತೆಗೆ ವಿರುದ್ಧವಾದ ಅಮಾನವೀಯ ಆಚರಣೆಗಳಾಗಿವೆ. ಆದರೆ, ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಜನಪ್ರತಿನಿಧಿಗಳು ಮೌನ ವಹಿಸಿರುವುದು ಖಂಡನೀಯʼ ಎಂದು ಗುರುವಾರ ಬೀದರ್‌ ನಗರದ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.

ʼರಾಜ್ಯದಲ್ಲಿ ಅಂಧಶ್ರದ್ಧೆ ನಿರ್ಮೂಲನಾ ಕಾಯ್ದೆ ಜಾರಿಯಲ್ಲಿದ್ದರೂ ಅದನ್ನು ಸಮರ್ಪಕವಾಗಿ ಜಾರಿಗೆ ತರುವಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ. ಇದು ಕೇವಲ ನಿರ್ಲಕ್ಷ್ಯವಲ್ಲ, ಇದು ಅಂಧಶ್ರದ್ಧೆಗೆ ಮೌನವಹಿಸಿ ಬೆಂಬಲ ನೀಡುವುದು ವ್ಯವಸ್ಥಾತ್ಮಕ ಅಪರಾಧವಾಗಿದೆ. ಪೊಲೀಸ್ ಇಲಾಖೆಯ ನಿರ್ಲಕ್ಷ್ಯ ಹಾಗೂ ಜನಪ್ರತಿನಿಧಿಗಳ ಮೌನ ಅಂಧಶ್ರದ್ಧೆಗೆ ಬೆಂಬಲಿಸಿದಂತಾಗಿದೆʼ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಘಟನೆಯ ರಾಜ್ಯಾಧ್ಯಕ್ಷ ಪ್ರಕಾಶ್ ರಾವಣ ಮಾತನಾಡಿ, ʼ ಅನಿಷ್ಠ ಆಚರಣೆ, ಅಂಧಶ್ರದ್ಧೆ ಇಂದಿಗೂ ಜೀವಂತವಾಗಿರಲು ರಾಜಕಾರಣಿಗಳು ಮತ್ತು ಆಡಳಿತ ವ್ಯವಸ್ಥೆಯೇ ನೇರ ಕಾರಣ. ಮತಬ್ಯಾಂಕ್ ರಾಜಕೀಯಕ್ಕಾಗಿ ಅಂಧಶ್ರದ್ಧೆ ಪೋಷಿಸಲಾಗುತ್ತಿದೆ. ಇದು ಸಂವಿಧಾನ ಹಾಗೂ ಬಾಬಾ ಸಾಹೇಬ್‌ ಅಂಬೇಡ್ಕರರ ಚಿಂತನೆಗೆ ಮಾಡುವ ಅವಮಾನವಾಗಿದೆʼ ಎಂದು ಹೇಳಿದರು.

ಸಂಘಟನೆ ಕಾರ್ಯದರ್ಶಿ ಮುಖಂಡ ಗೌತಮ್ ದೊಡ್ಡಿ ಡಾಕುಳಗಿ ಮಾತನಾಡಿ, ʼಜಾನಿ ಪೊತ್ರಾಜ್ ಅನಿಷ್ಠ ಪದ್ಧತಿಯು ಮಹಿಳಾ ಶೋಷಣೆ, ಮಾನಸಿಕ, ಸಾಮಾಜಿಕ ಹಿಂಸೆ ಹಾಗೂ ಮಾನವ ಘನತೆಯ ನಾಶಕ್ಕೆ ಕಾರಣವಾಗಿದೆ. ಕಾನೂನು ಉಲ್ಲಂಘಿಸಿ ನಡೆಸುವ ಈ ಆಚರಣೆ ಮಾನವೀಯತೆಯ ಮೇಲಿನ ಅಪರಾಧʼ ಎಂದು ತಿಳಿಸಿದರು.

ಸಂಘಟನೆಯ ಜಿಲ್ಲಾಧ್ಯಕ್ಷ ವಿನೀತ್ ಗಿರಿ ಮಾತನಾಡಿ, ʼಜಿಲ್ಲೆಯ ಅನೇಕ ಗ್ರಾಮಗಳಲ್ಲಿ ನಡೆಯುತ್ತಿರುವ ಮೌಢ್ಯ, ಅಂಧಶ್ರದ್ಧೆ ತಕ್ಷಣ ನಿಲ್ಲಿಸದಿದ್ದರೆ ಸಂಬಂಧಪಟ್ಟ ಶಾಸಕರ ಮನೆ ಮುಂದೆ ಸಂವಿಧಾನಾತ್ಮಕವಾಗಿ ಹೋರಾಟ ನಡೆಸುತ್ತೇವೆʼ ಎಂದು ಎಚ್ಚರಿಸಿದರು.

ಇದನ್ನೂ ಓದಿ : ಬೀದರ್‌ | ಗಡಿ ತಾಲೂಕಿನಲ್ಲಿ ಸಂಭ್ರಮದ ʼನುಡಿ ಜಾತ್ರೆʼ ನಡೆಸಲು ತೀರ್ಮಾನ: ಹೇಗಿದೆ ತಯ್ಯಾರಿ?

ಉತ್ತಮ ಕೆಂಪೆ ಮಾತನಾಡಿ, ʼಕರ್ನಾಟಕ ಅಂಧಶ್ರದ್ಧಾ ನಿರ್ಮೂಲನಾ ಕಾಯ್ದೆಯ ಅಡಿಯಲ್ಲಿ ಈ ಕೃತ್ಯಗಳು ಸ್ಪಷ್ಟವಾಗಿ ಅಪರಾಧವಾಗಿವೆ. ಕೆಲವು ಪ್ರಕರಣಗಳು ಜಾಮೀನು ರಹಿತವಾಗಿವೆ. ಆದರೂ, ಪೊಲೀಸರು ಪ್ರಕರಣ ದಾಖಲಿಸದೆ, ಆರೋಪಿಗಳನ್ನು ರಕ್ಷಿಸುವ ಧೋರಣೆ ತಾಳುತ್ತಿದ್ದಾರೆʼ ಎಂದು ದೂರಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...