ಬೀದರ್ | ಶಿಕ್ಷಕರ ಮೇಲೆ ಹಲ್ಲೆ ಆರೋಪ : ಠಾಣೆ ಎದುರು ಹೈಡ್ರಾಮಾ; 49 ಜನರ ವಿರುದ್ಧ ಪ್ರಕರಣ ದಾಖಲು

Date:

ಬಸವಕಲ್ಯಾಣ ನಗರದ ಯಾತ್ರಿ ನಿವಾಸ ಕಡೆಸಂಜೆ ವಾಕಿಂಗ್‌ಗೆ ತೆರಳಿದ್ದ ಖಾಸಗಿ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ನಿರ್ವಹಿಸುತ್ತಿರುವ ಇಬ್ಬರು ಮುಸ್ಲಿಂರ ಮೇಲೆ ಅಪರಿಚಿತ ವ್ಯಕ್ತಿಗಳು ಹಲ್ಲೆ ನಡೆಸಿ ಆರೋಪದಡಿ ಬಸವಕಲ್ಯಾಣ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾ.3ರಂದು ಇಬ್ಬರು ಮೇಲೆ 6-7 ಜನರು ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಹಲ್ಲೆಗೊಳಗಾದ ಮುಹಮ್ಮದ್ ಆರೀಫ್ ಹಾಗೂ ಸೈಯದ್ ಇಮ್ರಾನ್ ಎಂಬುವವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.

ಈ ಪ್ರಕರಣ ಸಂಬಂಧ ಮುಸ್ಲಿಂ ಸಮುದಾಯದವರು ಅದೇ ದಿನ ರಾತ್ರಿ ಪೊಲೀಸ್ ಠಾಣೆ ಎದುರು ಜಮಾಯಿಸಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ ಹೈಡ್ರಾಮಾ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಠಾಣೆ ಎದುರಿನಿಂದ ತೆರಳುವಂತೆ ಪೊಲೀಸರು ಹೇಳಿದರೂ ಕೇಳದ ಜನರು ಪೊಲೀಸರ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದರು. ಈ ವೇಳೆ ಎಎಸ್ಐ ಮುಕ್ತಾರ್ ಪಟೇಲ್ ಅವರಿಗೆ ಗಾಯಗಳಾಗಿದ್ದು, ಅವರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಕ್ರಮ ಕೂಟ ರಚಿಸಿಕೊಂಡು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಸಂಬಂಧ ಠಾಣೆಯ ಸಿಬ್ಬಂದಿ ನೀಡಿದ ದೂರಿನಂತೆ 49 ಜನ ಮುಸ್ಲಿಂ ಸಮುದಾಯದವರ ಮೇಲೆ ಪ್ರಕರಣ ದಾಖಲಾಗಿದೆ.

ನಿನ್ನೆ ತಡರಾತ್ರಿಯಿಂದ ಬಸವಕಲ್ಯಾಣ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಡಿಐಜಿಪಿ ಮತ್ತು ಎಸ್‌ಪಿ ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಬೀದರ್‌ | ಚಂದ್ರ ಗ್ರಹಣ : ʼಮೌಢ್ಯತೆ ತೊಲಗಲಿʼ ಜಾಗೃತಿ ಕಾರ್ಯಕ್ರಮ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...