ಬೀದರ್‌ | ಕೌಶಲಕ್ಕೆ ಎಲ್ಲೆಡೆ ಬಹು ಬೇಡಿಕೆಯಿದೆ : ಸಂಗಪ್ಪ ಮಾಮನಶೆಟ್ಟಿ

Date:

ಪ್ರಸ್ತುತ ಕೌಶಲಕ್ಕೆ ಎಲ್ಲೆಡೆ ಬಹು ಬೇಡಿಕೆ ಇದೆ ಎಂದು ಚಿತ್ತಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಸಂಗಪ್ಪ ಮಾಮನಶೆಟ್ಟಿ ಹೇಳಿದರು.

ಬೀದರ್ ನಗರದ ನೌಬಾದ್‌ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅರ್ಥಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಈಚೆಗೆ ಆಯೋಜಿಸಿದ್ದ 2025-26ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳ ಸ್ವಾಗತ ಹಾಗೂ ರ‍್ಯಾಂಕ್ ವಿಜೇತರ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ʼವಿದ್ಯಾರ್ಥಿಗಳು ಅಂಕ ಗಳಿಕೆ ಜತೆಗೆ ಕೌಶಲಕ್ಕೂ ಪ್ರಾಮುಖ್ಯ ಕೊಡಬೇಕು. ವಿದ್ಯಾರ್ಥಿಗಳು ಸಾಧನೆಗೆ ನಿರ್ದಿಷ್ಟ ಗುರಿ ಇಟ್ಟುಕೊಳ್ಳಬೇಕು. ಕಠಿಣ ಪರಿಶ್ರಮದಿಂದ ಅದನ್ನು ಸಾಕಾರ ಮಾಡಿಕೊಳ್ಳಬೇಕು. ಉನ್ನತ ಶಿಕ್ಷಣಕ್ಕೆ ಸರ್ಕಾರ ಸಾಕಷ್ಟು ಅನುಕೂಲ ಮಾಡಿಕೊಟ್ಟಿದೆ. ವಿದ್ಯಾರ್ಥಿಗಳು ಅದರ ಲಾಭ ಪಡೆಯಬೇಕುʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಪ್ರೊ.ಮನೋಜಕುಮಾರ ಮಾತನಾಡಿ, ʼವಿದ್ಯಾರ್ಥಿಗಳು ಪ್ರಚಲಿತ ಆರ್ಥಿಕ ವಿದ್ಯಮಾನಗಳ ಬಗ್ಗೆ ತಿಳಿದುಕೊಳ್ಳಬೇಕು. ಅವಕಾಶಗಳನ್ನು ಸದುಪಯೋಗ ಪಡೆಸಿಕೊಳ್ಳಬೇಕುʼ ಎಂದು ಹೇಳಿದರು.

Govt First Grade College Noubad photo 2

ʼಕಳೆದ 50 ವರ್ಷಗಳ ಅವಧಿಯಲ್ಲಿ ಅರ್ಥಶಾಸ್ತ್ರ ವಿಭಾಗದಲ್ಲಿ ಕಾಲೇಜು ವಿದ್ಯಾರ್ಥಿಗಳು ಪ್ರಥಮ, ದ್ವಿತೀಯ ಹಾಗೂ ತೃತೀಯ ರ‍್ಯಾಂಕ್ ಗಳಿಸಿದ ಗೌರವಕ್ಕೆ ಭಾಜನರಾಗಿದ್ದಾರೆ ಎಂದು ಡಾ.ಸುಚಿತಾನಂದ ಕೆ. ಮಲ್ಕಾಪುರೆ ತಿಳಿಸಿದರು.

ಇದೇ ಸಂದರ್ಭದಲ್ಲಿ ಸೂಕ್ಷ್ಮ ಅರ್ಥಶಾಸ್ತ್ರ ವಿಷಯದಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯಕ್ಕೆ ಪ್ರಥಮ ರ‍್ಯಾಂಕ್‌ನೊಂದಿಗೆ ಚಿನ್ನದ ಪದಕ ಗಳಿಸಿದ ವಿದ್ಯಾರ್ಥಿನಿ ಸಂಗೀತಾ ಅವರನ್ನು ಸನ್ಮಾನಿಸಲಾಯಿತು.

ಇದನ್ನೂ ಓದಿ : ಬೀದರ್‌ | ʼಮನರೇಗಾʼ ದುರ್ಬಲಗೊಳಿಸಲು ‘ವಿಬಿ-ಜಿ ರಾಮ್ ಜಿ’ ಮಸೂದೆ ಜಾರಿ : ಸಚಿವ ಈಶ್ವರ ಖಂಡ್ರೆ

ಕಾರ್ಯಕ್ರಮದಲ್ಲಿ ಡಾ. ಜೈಭಾರತ ಮಂಗೇಶ್ಕರ್, ಡಾ.ಸುನೀಲಕುಮಾರ ಮೂಲಗೆ, ಪ್ರೊ.ಅರುಣಕುಮಾರ ಮತ್ತಿತರರು ಇದ್ದರು. ಅಜಯ್ ಹಾಗೂ ಸೋನಿಕಾ ನಿರೂಪಿಸಿದರು. ಡಾ.ಸಂತೋಷಕುಮಾರ ಹಂಗರಗಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...