ಬೀದರ್‌ | ಜ.30ರಿಂದ ಮೂರು ದಿನ ʼವಚನ ವಿಜಯೋತ್ಸವʼ

Date:

ಜನವರಿ 30, 31 ಹಾಗೂ ಫೆಬ್ರವರಿ 1ರಂದು ಮೂರು ದಿನಗಳ ಕಾಲ ವಚನ ವಿಜಯೋತ್ಸವʼ ಅನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದ್ದು, ಅಗತ್ಯ ಸಿದ್ಧತೆಗಳು ಭರದಿಂದ ನಡೆಯುತ್ತಿದೆ ಎಂದು ಬಸವ ಸೇವಾ ಪ್ರತಿಷ್ಠಾನದ ಅಧ್ಯಕ್ಷೆ ಡಾ.ಗಂಗಾಂಬಿಕೆ ಅಕ್ಕ ನುಡಿದರು.

ಬೀದರ್ ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಮಂಗಳವಾರ ಪತ್ರಿಕಾಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ʼ12ನೇ ಶತಮಾನದ ಶರಣರ ಸ್ವಾನುಭಾವದಿಂದ ಮೂಡಿ ಬಂದಿರುವ ವಚನಗಳು ಇಂದಿಗೂ ಉಳಿದಿರುವುದು ರೋಚಕ ಸಂಗತಿ. ಶರಣರ ಬಲಿದಾನ ಹಾಗೂ ವೀರಗಾಥೆಯ ಕಾರ್ಯಗಳಿಂದ ಉಳಿದು ಬಂದಿರುವ ವಚನ ಸಾಹಿತ್ಯ ಸಂರಕ್ಷಣೆಯ ಸ್ಮರಣೆಗಾಗಿ ಪ್ರತಿ ವರ್ಷ ವಚನ ವಿಜಯೋತ್ಸವ ಕಾರ್ಯಕ್ರಮ ಆಚರಿಸಲಾಗುತ್ತಿದೆʼ ಎಂದರು.

ಜನವರಿ 30 ರಂದು ಮುಂಜಾನೆ 8 ಗಂಟೆಗೆ ಸಾಮೂಹಿಕ ಇಷ್ಟಲಿಂಗ ಪೂಜಾ ಯೋಗವು ಸಿದ್ಧರಾಮ ಶರಣರು ಬೆಲ್ದಾಳ ಹಾಗೂ ಇನ್ನಿತರ ಪೂಜ್ಯರ ಸಾನಿಧ್ಯದಲ್ಲಿ ನಡೆಯಲಿದ್ದು, ಬಸವಕಲ್ಯಾಣ ಕ್ಷೇತ್ರ ಸಮಿತಿ ಸಂಯೋಜಕ ಬಸವರಾಜ ಪಾಟೀಲ ಸೇಡಂ ಉದ್ಘಾಟಿಸುವರು. ಡಾ.ವಿಜಯಶ್ರೀ ಬಶೆಟ್ಟಿ ಧ್ವಜಾರೋಹಣಗೈಯುವರು, ನಿವೃತ್ತ ವಾಣಿಜ್ಯ ತೆರಿಗೆ ಅಧಿಕಾರಿ ಪಿ.ರುದ್ರಪ್ಪಾ ಕುರಕುಂದಾ ಅನುಭಾವ ನೀಡುವರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜ.30ರಂದು ಬೆಳಿಗ್ಗೆ11ಗಂಟೆಗೆ ಕಾರ್ಯಕ್ರಮದ ಉದ್ಘಾಟನೆ ಬಸವಕಲ್ಯಾಣ ಅನುಭವ ಮಂಟಪ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರ ಹಾಗೂ ಹುಲಸೂರಿನ ಡಾ.ಶಿವಾನಂದ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ತಮ್ಮ ನೇತೃತ್ವದಲ್ಲಿ ತೆಲಂಗಾಣ ರಾಜ್ಯದ ವಾರಂಗಲದ ಪಾಲಕುರಿಕೆ ಸೋಮನಾಥ ಕಲಾ ಪೀಠದ ಅಧ್ಯಕ್ಷ ಡಾ.ರೂಪಾಲು ಸತ್ಯನಾರಾಯಣ ಉದ್ಘಾಟಿಸುವರು. ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರು ವಚನ ವಿಜಯೋತ್ಸವ ಸ್ವಾಗತ ಸಮಿತಿ ಅಧ್ಯಕ್ಷರಾದ ಈಶ್ವರ ಖಂಡ್ರೆ ಅಧ್ಯಕ್ಷತೆ ವಹಿಸಿಕೊಳ್ಳುವರು. ಹಿರಿಯ ಸಾಹಿತಿ ಪ್ರೊ. ಎಸ್.ಜಿ.ಸಿದ್ದರಾಮಯ್ಯ ಅನುಭಾವ ನೀಡುವರು ಸಾಹಿತಿ ಡಾ.ಬಸವರಾಜ ಸಬರದ, ಮಾಜಿ ಸಚಿವರಾದ ರಾಜಶೇಖರ ಪಾಟೀಲ, ಬಂಡೆಪ್ಪ ಖಾಶೆಂಪುರ, ಬುಡಾ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಹಾಗೂ ಕುರುಪತಿ ನೀಲಕಂಠೇಶ್ವರ ಪ್ರಸಾದ, ದೇವರಾಜ ಬಿ.ಲಿಗಾಡೆ ಸೇರಿದಂತೆ ಇತರರು ಪಾಲ್ಗೊಳ್ಳುವರು.

ಅಂದು ಮಧ್ಯಾಹ್ನ 3 ಗಂಟೆಗೆ ಸ್ತ್ರೀ ಶಕ್ತಿ ಸಮಾವೇಶ ನಡೆಯಲಿದ್ದು, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹಾಗೂ ಖ್ಯಾತ ವೈದ್ಯೆ ಡಾ.ವಿಜಯಲಕ್ಷ್ಮಿ ದೇಶಮಾನೆ ಉದ್ಘಾಟಿಸುವರು. ಶಾಂತಿವರ್ಧಕ ಶಿಕ್ಷಣ ಸಂಸ್ಥೆ ನಿರ್ದೇಶಕಿ ಗೀತಾ ಖಂಡ್ರೆ ಗುರುಪೂಜೆ ನೇರವೇರಿಸುವರು. ಅಭಾವಿಲಿಮ ರಾಷ್ಟ್ರೀಯ‌ ಉಪಾಧ್ಯಕ್ಷೆ ಡಾ.ಗುರಮ್ಮಾ ಸಿದ್ದಾರೆಡ್ಡಿ ಅಧ್ಯಕ್ಷತೆ ವಹಿಸಿಕೊಳ್ಳುವರು. ಚಿತ್ರದುರ್ಗದ ಬಸವತತ್ವ ಚಿಂತಕಿ ಡಿ.ಶಬ್ರಿನಾ ಅನುಭಾವ ನೀಡುವರು.

ಸಂಜೆ 6 ಗಂಟೆಗೆ ಶರಣ ಕಲಾವೈಭವವು ಮಾತೆ ಮೈತ್ರಾದೇವಿ ಸಾನಿಧ್ಯದಲ್ಲಿ ಸಿದ್ರಾಮಪ್ಪಾ ಮಾಸಿಮಾಡೆ ಉದ್ಘಾಟಿಸುವರು. ಬೀದರ್‌ನ ಅನುಭವ ಮಂಟಪ ಸಂಸ್ಕೃತಿ ವಿದ್ಯಾಲಯ ಮಕ್ಕಳಿಂದ ಶಿವಯೋಗಿ ಸಿದ್ಧರಾಮೇಶ್ವರ ನಾಟಕ ನಡೆಯಲಿದೆ. ಸುವರ್ಣಾ ಚಿಮಕೋಡೆ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದು, ಶಾಂತಾಬಾಯಿ ಬಿರಾದಾರ, ಸುನಿತಾ ದಾಡಗೆ ಉಪಸ್ಥಿತರಿರುವರು ಎಂದರು.

ಜ.31 ರಂದು ಬೆಳಗ್ಗೆ 8 ಗಂಟೆಗೆ ಸಾಮೂಹಿಕ ವಚನ ಪಾರಾಯಣದ ಸಾನಿಧ್ಯವನ್ನು ಬಸವಪ್ರಭು ಸ್ವಾಮೀಜಿ ಅವರು ವಹಿಸಲಿದ್ದಾರೆ. ಡಿಡಿಪಿಐ ಸುರೇಶ ಎಚ್.ಜಿ ಉದ್ಘಾಟಿಸುವರು. ಮುದ್ದೆಬಿಹಾಳದ ಬಸವತತ್ವ ಚಿಂತಕ ರುದ್ರೇಶ ಕಿತ್ತೂರ ಅನುಭಾವ ನೀಡುವವರು. ವಿವಿಧ ಶಾಲೆಯ 1,008 ಮಕ್ಕಳಿಂದ ಸಾಮೂಹಿಕ ವಚನ ಪಾರಾಯಣ ನಡೆಯಲಿದೆ.

ಬೆ.11ಗಂಟೆಗೆ ಯುವ ಶಕ್ತಿ ಸಮಾವೇಶ-ವಿಶ್ವಕಲ್ಯಾಣ ಯುವ ಪರಿಷತ್ ಸಮಾರಂಭವನ್ನು ಹಿರೇಮಠ ಸಂಸ್ಥಾನದ ಗುರುಬಸವ ಪಟ್ಟದ್ದೇವರ ಸಾನಿಧ್ಯದಲ್ಲಿ, ಸಂಸದ ಸಾಗರ ಖಂಡ್ರೆ ಉದ್ಘಾಟಿಸುವರು. ಇಸ್ರೋ ಉಪನಿರ್ದೇಶಕಿ ಕೆ.ಎಲ್.ಶಿವಾನಿ ಅವರಿಗೆ ಶರಣ ವಿಜ್ಞಾನಿ ಪುರಸ್ಕಾರ ಪ್ರದಾನ ಮಾಡಲಾಗುವುದು. ಬೆಂಗಳೂರು ಕಬ್ಬನ್ ಪಾರ್ಕ್ ಸಹಾಯಕ ಪೊಲೀಸ್ ಆಯುಕ್ತೆ ಡಾ. ಪ್ರಿಯದರ್ಶಿನಿ ಸಾಣಿಕೊಪ್ಪ ಅನುಭಾವ ನೀಡುವರು. ಜಿ.ಪಂ.ಉಪ ಕಾರ್ಯದರ್ಶಿ ಶರಣಬಸಪ್ಪ ಕೊಟೆಪ್ಪಗೊಳ್. ಶಂಕರ ದೇವನೂರು ಸೇರಿದಂತೆ ಇತರರು ಪಾಲ್ಗೊಳ್ಳುವರು.

ಮಧ್ಯಾಹ್ನ 2:30 ಗಂಟೆಗೆ 24ನೇ ವಚನ ವಿಜಯೋತ್ಸವ ನಿಮಿತ್ಯ 24 ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕ ಹಿರಿಯರನ್ನು ಪೂಜ್ಯರ ಸಾನಿಧ್ಯದಲ್ಲಿ ಗೌರವ ಸಮರ್ಪಣೆ ಮಾಡಲಾಗುವುದು. ಮಧ್ಯಾಹ್ನ 3 ಗಂಟೆಗೆ ಧರ್ಮ ಚಿಂತನಗೋಷ್ಠಿಯನ್ನು ಶಿವಯೋಗೀಶ್ವರ ಮಹಾಸ್ವಾಮಿಗಳು ವಿರಕ್ತಮಠ ಭಾತಂಬ್ರಾ, ಖೇಳಗಿಯ ಶಿವಲಿಂಗ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಕರ್ನಾಟಕ ಲೋಕಾಯುಕ್ತ ಡಿವೈಎಸ್‌ಪಿ ಡಾ.ಬಸವರಾಜ ಎಲಿಗಾರ ಉದ್ಘಾಟಿಸುವರು. ಬೆಂಗಳೂರು ಲೋಕಾಯುಕ್ತ ನ್ಯಾಯವಾದಿ ಸಂತೋಷ ನಾಗರಾಳೆ ಅನುಭಾವ ನೀಡುವರು. ಜಾಗತಿಕ ಲಿಂಗಾಯತ ಮಹಾಸಭಾದ ಹಿರಿಯ ಉಪಾಧ್ಯಕ್ಷ ಬಸವರಾಜ ಬುಳ್ಳಾ ಅಧ್ಯಕ್ಷತೆ ವಹಿಸಿಕೊಳ್ಳುವರು.

ಅಂದು ಸಂಜೆ 6ಗಂಟೆಗೆ ಶರಣ ಕಲಾ ವೈಭವ-ವಚನ ನೃತ್ಯೋತ್ಸವ : ಜೆಸ್ಕಾಂ ಶಶಿರೇಖಾ ಪಾಟೀಲ ಉದ್ಘಾಟಿಸುವರು. ಮಹಾದೇವಿ ಬಿರಾದರ ಅಧ್ಯಕ್ಷತೆಯಲ್ಲಿ ನೃತ್ಯಾಂಗನಾ ನಾಟ್ಯ ಮತ್ತು ಕಲಾ ಕೇಂದ್ರ ಬೀದರ ಅವರಿಂದ ವಚನ ನೃತ್ಯಗಳು ಜರುಗಲಿವೆ, ಅಲ್ಲದೆ ವಚನ ಉಗ್ರಡನೆ, ಯಕ್ಷಗಾನ, ಕೋಲಾಟ ನಡೆಯಲಿವೆ ಎಂದು ತಿಳಿಸಿದರು.

ಫೆ 1 ರಂದು ಬೆಳಗ್ಗೆ 9.00 ಗಂಟೆಗೆ ಮೆರವಣಿಗೆ: ನಗರದ ಬಸವೇಶ್ವರ ವೃತ್ತದಿಂದ ಬಸವಗಿರಿ ವರೆಗೆ ಲಿಂಗಾಯತ ಧರ್ಮ ವಚನ ಸಾಹಿತ್ಯದ ಭವ್ಯ ಮೆರವಣಿಗೆ ನಡೆಯಲಿದೆ. ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಮೆರವಣಿಗೆಗೆ ಚಾಲನೆ ನೀಡುವರು. ಜಿ.ಪಂ. ಸಿಇಒ ಡಾ. ಗಿರೀಶ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ವಿವಿಧ ಗಣ್ಯರು ಮೆರವಣಿಗೆಯಲ್ಲಿ ಭಾಗವಹಿಸುವವರು.

ಗುರುಬಸವ ಪುರಸ್ಕಾರ : 

ಪ್ರತಿ ವರ್ಷ ಬಸವ ಸೇವಾ ಪ್ರತಿಷ್ಠಾನದ ವತಿಯಿಂದ ಗುರುಬಸವ ಪುರಸ್ಕಾರ ನೀಡಲಾಗುತ್ತಿದ್ದು, ಈ ಕಾರ್ಯಕ್ರಮದಲ್ಲಿ ಗುರುಬಸವ ಪುರಸ್ಕಾರವನ್ನು ನಾಡಿನ ಪತ್ರಕರ್ತರು ಹಾಗೂ ಹರಳಯ್ಯ ಸಮಾಜದ ಮುಖಂಡರಾದ ಡಾ.ಮಾರ್ಕಂಡೇಯ ದೊಡಮನಿ, ಕಲಬುರಗಿ ಬಸವ ಸಮಿತಿ ಅಧ್ಯಕ್ಷೆ ಡಾ.ವಿಲಾಸವತಿ ಖುಬಾ, ಶರಣ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ. ಸಿ.ಸೋಮಶೇಖರ ಅವರಿಗೆ ಪ್ರದಾನ ಮಾಡಲಾಗುತ್ತಿದೆ ಎಂದು ವಿವರಿಸಿದರು.

ಶರಣ ಸೇವಾ ಪುರಸ್ಕಾರ:

ವಚನ ವಿಜಯೋತ್ಸವ ಕಾರ್ಯಕ್ರಮದಲ್ಲಿ ಈ ವರ್ಷ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ 14 ಜನರನ್ನು ಶರಣ ಸೇವಾ ಪುರಸ್ಕಾರ ನೀಡಿ ಗೌರವಿಲಾಗುತ್ತಿದೆ. ಸುಮಾರು 10 ಸಾವಿರಕ್ಕೂ ಅಧಿಕ ಜನ ಕುಳಿತುಕೊಳ್ಳುವ ಲೋಕನಾಯಕ ಲಿಂ.ಭೀಮಣ್ಣ ಖಂಡ್ರೆ ಮಹಾ ಮಂಟಪ ನಿರ್ಮಿಸಲಾಗಿದೆ. ಬಸವಗಿರಿಗೆ ನಗರದ ವಿವಿದೆಡೆಯಿಂದ ಬೆಳಗ್ಗೆ 7:30 ರಿಂದ ರಾತ್ರಿಯ ವರೆಗೆ ಸೀಟಿ ಬಸ್‌ಗಳನ್ನು ಓಡಿಸಲು ಸಾರಿಗೆ ಇಲಾಖೆ ಸಮ್ಮತಿಸಿದೆ. ಗುಂಪಾ ನೌಬಾದ, ಮಂಗಲಪೇಟ್ ಚೌಬಾರ ಸ್ಥಳಗಳಿಂದ ಸಿಟಿ ಬಸ್‌ಗಳು ಬಸವಗಿರಿಗೆ ಬರಲಿವೆ.

ಇದನ್ನೂ ಓದಿ : ಬೀದರ್‌ | ಫೆ.3ರಂದು SIR ವಿರೋಧಿಸಿ ಚಿಂತನ-ಮಂಥನ ಸಮಾವೇಶ

ಪತ್ರಿಕಾಗೋಷ್ಟಿಯಲ್ಲಿ ಹಿರಿಯ ಚಿಂತಕ ಸಿದ್ದಣ್ಣ ಲಂಗೋಟಿ, ಹಿರಿಯರಾದ ಬಸವರಾಜ ಬುಳ್ಳಾ, ಸೋಮಶೇಖರ ಪಾಟೀಲ ಗಾದಗಿ, ರಾಜೇಂದ್ರಕುಮಾರ ಗಂದಗೆ, ಶರಣಪ್ಪ ಮಿಠಾರೆ, ಚಂದ್ರಕಾಂತ ಮಿರ್ಚೆ, ಸುರೇಶ ಚನಶೆಟ್ಟಿ, ಬಾಬು ವಾಲಿ, ರಾಜಕುಮಾರ ಟಿಳ್ಳೆಕರ್, ಆದಿಶ ವಾಲಿ, ವಿಶ್ವನಾಥ ಕಾಜಿ, ಜಯರಾಜ ಖಂಡ್ರೆ, ವಿಜಯಲಕ್ಷ್ಮೀ ಸುಲೇಪೇಟ್, ಶಿವಶಂಕರ ಟೋಕರೆ ಹಾಗೂ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...