ಬೀದರ್ | ನೀರಿನ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ದುರ್ಮರಣ

Date:

ನೀರಿನ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕರು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಬೀದರ್ ತಾಲೂಕಿನ ಬೇಮಳಖೇಡ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಗಣೇಶ್(10) ಮತ್ತು ಸಾಯಿನಾಥ್(15) ಮೃತಪಟ್ಟ ಬಾಲಕರು. ಓರ್ವ ಬಾಲಕ ಹೊಂಡಕ್ಕೆ ಇಳಿದು ನೀರು ತರುವ ವೇಳೆ ಕಾಲು ಜಾರಿ ಬಿದಿದ್ದಾನೆ. ಆತ ಹೊರಬರಲಾಗದೆ ಒದ್ದಾಡುತ್ತಿರುವುದನ್ನು ಕಂಡು ಇನ್ನೊಬ್ಬ ಬಾಲಕ ಆತನ ರಕ್ಷಣೆಗೆ ಇಳಿದಿದ್ದಾನೆ. ಆತನೂ ಮೇಲೆ ಬರಲಾಗದೆ, ಉಸಿರುಗಟ್ಟಿ ಇಬ್ಬರೂ ಪ್ರಾಣಬಿಟ್ಟಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಅಗ್ನಿ ಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಬಾಲಕರ ಮೃತದೇಹ ಹೊರತೆಗೆದಿದ್ದಾರೆ. ಬೇಮಳಖೇಡ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...