ಬೀದರ್ | ಸರ್ಕಾರಿ ಶಾಲೆಗಳಲ್ಲಿ ಮೌಲ್ಯಯುತ ಶಿಕ್ಷಣ

Date:

ಬೀದರ ತಾಲೂಕಿನ ಚಾಂಗಲೇರಾ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ, ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ 8ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಜರುಗಿತು.

ಜಿಲ್ಲಾ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರವೀಂದ್ರ ರೆಡ್ಡಿ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯಗುರು ಧರಂ ಪ್ರಕಾಶ್ ವೈಸ್ ವಹಿಸಿದ್ದರು.

ಜಿಲ್ಲಾ ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಪ್ರಭುಲಿಂಗ ತೂಗಾವೆ ಮಾತನಾಡಿ, ‘ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗಿಂತ ಮೌಲ್ಯಯುತ ಶಿಕ್ಷಣ ನೀಡುತ್ತಿವೆ. ವಿದ್ಯಾರ್ಥಿಗಳ ಪ್ರತಿಭೆ ಗುರುತಿಸುವ ಶಿಕ್ಷಕರ ಕಾರ್ಯ ಶ್ಲಾಘನೀಯ. 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ನಿಷೇಧ ವಿಧಿಸಿರುವ ಸರ್ಕಾರದ ಕ್ರಮ ಸ್ವಾಗತಾರ್ಹ’ ಎಂದು ಶ್ಲಾಘಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ಸಂದರ್ಭದಲ್ಲಿ ಅಂಗನವಾಡಿ ಶಿಕ್ಷಕಿಯರು ಹಾಗೂ ಸಹಾಯಕಿಯರು, ಆರೋಗ್ಯ ಕಾರ್ಯಕರ್ತರು, ಶಾಲೆಯ ಶಿಕ್ಷಕಿಯರು ಮತ್ತು ಬಿಸಿಯೂಟ ನೌಕರರನ್ನು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಸನ್ಮಾನಿಸಲಾಯಿತು.

WhatsApp Image 2026 03 11 at 12.56.35 PM
ವಿಶೇಷ ಸನ್ಮಾನ

ಕಾರ್ಯಕ್ರಮದಲ್ಲಿ ಶಾಲೆಯ ವಿದ್ಯಾರ್ಥಿಗಳು ಸುಮಾರು 35 ಸಾಂಸ್ಕೃತಿಕ ನೃತ್ಯಗಳನ್ನು ಪ್ರದರ್ಶಿಸಿದರು. ಹಾಸ್ಯ ಕಲಾವಿದ ವೈಜಿನಾಥ ಸಜ್ಜನಶೆಟ್ಟಿ ಹಾಸ್ಯ ಕಾರ್ಯಕ್ರಮ ನಡೆಸಿಕೊಟ್ಟರು. ಶಿಕ್ಷಕ ಎಂ.ಎಸ್.ಮನೋಹರ್ ನಿರೂಪಿಸಿದರು. ಪ್ರಭು ಸ್ವಾಗತಿಸಿದರು, ಮಸ್ತಾನ್ ವಂದಿಸಿದರು.

ಇದನ್ನೂ ಓದಿ : ಬೀದರ್ | ಅಷ್ಟೂರ್ ಜಾತ್ರೆ : ಗ್ರಾ.ಪಂ. ವತಿಯಿಂದ ಐತಿಹಾಸಿಕ ಪುಷ್ಕರಣಿ ಸ್ವಚ್ಛತೆ

ಕಾರ್ಯಕ್ರಮದಲ್ಲಿ ಸಾಹಿತಿಗಳಾದ ಶಿವರಾಜ್ ಮೇತ್ರಿ ವೀರಶೆಟ್ಟಿ ಧನಗರ್, ಸಿಆರ್‌ಪಿ ಸೋಮಶೇಖರ್ ಪಾಟೀಲ್, ಶಿಕ್ಷಕರಾದ ಪ್ರಭು, ಮಸ್ತಾನ್, ಸಾಗರ್, ಪ್ರತಿಭಾ, ಶಾಲೆ ಮುಖ್ಯಗುರು ರಾಜೇಶ್ವರಿ, ಗ್ರಾಮ ಪಂಚಾಯತ್ ಮಾಜಿ ಸದಸ್ಯ ಸುರೇಶ್, ಸುರೇಖಾ ಸ್ವಾಮಿ, ಭುವನೇಶ್ವರಿ ರೆಡ್ಡಿ, ರೇಣುಕಾ ಕುಮಾರಿ, ಕವಿತಾ, ಜಯಶ್ರೀ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...