ಬೀದರ್‌ | ʼಮನರೇಗಾʼ ದುರ್ಬಲಗೊಳಿಸಲು ‘ವಿಬಿ-ಜಿ ರಾಮ್ ಜಿ’ ಮಸೂದೆ ಜಾರಿ : ಸಚಿವ ಈಶ್ವರ ಖಂಡ್ರೆ

Date:

ಗ್ರಾಮೀಣ ಪ್ರದೇಶದಲ್ಲಿ ದುಡಿಯುವ ಕೈಗಳಿಗೆ ಉದ್ಯೋಗದ ಭದ್ರತೆ ನೀಡಲು ಯುಪಿಎ ಸರ್ಕಾರ ಆರಂಭಿಸಿದ್ದ ಮನರೇಗಾ ಯೋಜನೆಯ ಮೂಲ ಉದ್ದೇಶವನ್ನೇ ಬಿಜೆಪಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ ಹಾಳು ಮಾಡುತ್ತಿದೆ. ವಿಬಿ-ಜಿ ರಾಮ್ ಜಿ ಮಸೂದೆ ಬಡವರ ಹೊಟ್ಟೆಯ ಮೇಲೆ ಹೊಡೆಯುವ ಕ್ರಮವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.

ಬೀದರ್ ಜಿಲ್ಲಾ ಕಾಂಗ್ರೆಸ್ ವತಿಯಿಂದ ಶನಿವಾರ ಬೀದರ್‌ನಲ್ಲಿ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿ ಅವರು, ʼಮಹಾತ್ಮಾ ಗಾಂಧೀಜಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಹೆಸರು ಹಾಗೂ ಸ್ವರೂಪವನ್ನು ಬದಲಾಯಿಸಿರುವ ಕೇಂದ್ರ ಸರ್ಕಾರದ ನಡೆಯನ್ನು ಖಂಡನೀಯʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

ʼಮಹಾತ್ಮಾ ಗಾಂಧೀಜಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಹೆಸರು ಹಾಗೂ ಸ್ವರೂಪವನ್ನು ಬದಲಾಯಿಸಿರುವ ಕೇಂದ್ರ ಸರ್ಕಾರ ಬಡವರ ವಿರೋಧಿಯಷ್ಟೇ ಅಲ್ಲ, ಭಾರತದ ಒಕ್ಕೂಟ ವ್ಯವಸ್ಥೆಯ ವಿರೋಧಿಯೂ ಆಗಿದೆ. ಮನರೇಗಾ ಯೋಜನೆಯನ್ನು ದುರ್ಬಲಗೊಳಿಸಿ, ವಿಬಿ-ಜಿ ರಾಮ್ ಜಿ ಕಾಯ್ದೆ ರೂಪಿಸಿದೆʼ ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼದೇಶದ ಸ್ವಾತಂತ್ರ್ಯಕ್ಕಾಗಿ ಜೀವನವನ್ನೇ ಸಮರ್ಪಿಸಿದ ಮಹಾತ್ಮಾ ಗಾಂಧೀಜಿ ಅವರ ಹೆಸರನ್ನೇ ಯೋಜನೆಯಿಂದ ತೆಗೆದುಹಾಕಿರುವುದು ಬಾಪೂಜಿಗೆ ಮಾಡಿದ ಅವಮಾನ. ವಿಬಿ ಜಿ ರಾಮ್‌ ಜಿ ಕಾಯ್ದೆಯಲ್ಲಿ ಶೇ 60:40 ಅನುಪಾತ ಹೇರಿಕೆ ಮೂಲಕ ರಾಜ್ಯ ಸರ್ಕಾರಗಳ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಹಾಕಲಾಗಿದೆ. ಜಿಎಸ್‌ಟಿ ಬಳಿಕ ರಾಜ್ಯಗಳಿಗೆ ತೆರಿಗೆ ಪಾಲು ಕಡಿಮೆಯಾಗಿದ್ದು, 15ನೇ ಹಣಕಾಸು ಆಯೋಗದ ಶಿಫಾರಸಿನಂತೆ ಅನುದಾನದಲ್ಲಿಯೂ ಕಡಿತವಾಗಿದೆ. ಮನರೇಗಾ ಯೋಜನೆಯನ್ನು ಮರುಸ್ಥಾಪಿಸುವವರೆಗೆ ಬಡವರ ಹಕ್ಕುಗಳಿಗಾಗಿ ಕಾಂಗ್ರೆಸ್ ಹೋರಾಟ ಮುಂದುವರೆಯಲಿದೆʼ ಎಂದರು.

ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಮಾತನಾಡಿ, ʼಕೋವಿಡ್ ಸಮಯದಲ್ಲಿ ಖಾತ್ರಿ ಯೋಜನೆ ಗ್ರಾಮೀಣ ಜನರು ಹಾಗೂ ವಲಸೆ ಕಾರ್ಮಿಕರ ಬದುಕಿಗೆ ಆಸರೆಯಾಗಿತ್ತುʼ ಎಂದು ತಿಳಿಸಿದರು.

WhatsApp Image 2026 01 24 at 8.35.40 PM
ಪ್ರತಿಭಟನೆಗೂ ಮುನ್ನ ಜಿಲ್ಲಾ ಕಾಂಗ್ರೆಸ್‌ ಸಮಿತಿ ಕಚೇರಿಯಲ್ಲಿ ಸಚಿವ ಈಶ್ವರ ಖಂಡ್ರೆ ಅವರು ಮಾತನಾಡಿದರು.

ಶಿವನಗರದ ಜಿಲ್ಲಾ ಕಾಂಗ್ರೆಸ್‌ ಸಮಿತಿಯ ಜಿಲ್ಲಾ ಕಚೇರಿಯಿಂದ ಹೊಸ ಬಸ್ ನಿಲ್ದಾಣ, ಗುರುದ್ವಾರ ಕಮಾನ್ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದರು. ಬಳಿಕ ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದುಪಡಿಸುವಂತೆ ರಾಷ್ಟ್ರಪತಿಗೆ ಬರೆದ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ ಅವರಿಗೆ ಸಲ್ಲಿಸಿದರು.

ಬಿಜೆಪಿಯವರು ಮನರೇಗಾ ಪರ :

ಬಿಜೆಪಿಯವರು ಮನರೇಗಾ ವಿರೋಧಿಸಿ ವಿಬಿ-ಜಿ ರಾಮ್‌ ಜಿ ಪರವಾಗಿದ್ದಾರೆ ಎಂಬ ಪ್ರಶ್ನೆಗೆ ಸಚಿವ ಈಶ್ವರ ಖಂಡ್ರೆ ಅವರು ಪ್ರತಿಕ್ರಿಯಿಸಿ, ʼಗ್ರಾಮೀಣ ಭಾಗದಲ್ಲಿ ಬಿಜೆಪಿ ಪಕ್ಷದ ಮುಖಂಡರು, ನಾಯಕರು ಮನರೇಗಾ ಯೋಜನೆಯ ಪರವಾಗಿದ್ದಾರೆ. ಆದರೆ, ಅವರ ವರಿಷ್ಠರ ಹೆದರಿಕೆಯಿಂದ ಮನರೇಗಾ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ. ಗ್ರಾಮೀಣ ಭಾಗದ ಬಿಜೆಪಿ ಪಕ್ಷದವರು ತಮ್ಮ ಆತ್ಮಸಾಕ್ಷಿಯಾಗಿ ಮನರೇಗಾ ವಿರುದ್ಧ ಹೇಳಿಕೊಡಲಿ? ಬಿಜೆಪಿಯವರೂ ಮನರೇಗಾ ಮರುಜಾರಿಗೆ ಒತ್ತಾಯಿಸುವ ಆಲೋಚನೆ ಹೊಂದಿದ್ದಾರೆʼ ಎಂದರು.

ಇದನ್ನೂ ಓದಿ : ಮೋದಿ ಸರ್ಕಾರ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಕಾಯ್ದೆಗೆ ಹೆದರಿದ್ದೇಕೆ?

ಪೌರಾಡಳಿತ ಮತ್ತು ಹಜ್ ಸಚಿವ ರಹೀಂಖಾನ್, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಮಾಜಿ ಸಂಸದ ನರಸಿಂಗರಾವ್ ಸೂರ್ಯವಂಶಿ, ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಪುಂಡಲೀಕರಾವ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಮೃತರಾವ ಚಿಮಕೋಡೆ, ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಹಣಮಂತರಾವ್ ಚೌಹಾಣ್, ನಗರಸಭೆ ಮಾಜಿ ಸದಸ್ಯ ಧನರಾಜ ಹಂಗರಗಿ, ಕೆಪಿಸಿಸಿ ಉಪಾಧ್ಯಕ್ಷ ಜಾನ್ ವೆಸ್ಲಿ, ಪ್ರಧಾನ ಕಾರ್ಯದರ್ಶಿಗಳಾದ ಶಂಕರ ದೊಡ್ಡಿ, ಸಂಜಯ್ ಜಾಗೀರದಾರ್, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಎಂ.ಎ.ಸಮಿ, ದತ್ತಾತ್ರಿ ಮೂಲಗೆ, ಜಾರ್ಜ್ ಫರ್ನಾಂಡೀಸ್, ವಿನೋದಕುಮಾರ ಅಪ್ಪೆ, ಕಾರ್ಯದರ್ಶಿಗಳಾದ ಸುನೀಲ್ ಬಚ್ಚನ್, ರವೀಂದ್ರ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಫರೀದ್‍ಖಾನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಹಮ್ಮದ್ ಯುಸೂಫ್, ಚಂದ್ರಶೇಖರ ಚನಶೆಟ್ಟಿ, ನೀಲಕಂಠ ರಾಠೋಡ್, ರಾಜಕುಮಾರ ಹಲಬರ್ಗೆ, ಆನಂದ ಚೌಹಾಣ್, ಮುಂಚೂಣಿ ಘಟಕಗಳ ಅಧ್ಯಕ್ಷರಾದ ಸಂಜುಕುಮಾರ ಡಿ.ಕೆ, ರಾಕೇಶ ಕುರುಬಖೇಳಗಿ, ಡಾ.ಚಂದ್ರಕಾಂತ ಪಾಟೀಲ, ಪೂಜಾ ಜಾರ್ಜ್, ರಾಜಕುಮಾರ ಲದ್ದೆ, ಗೋವರ್ಧನ್ ರಾಠೋಡ್ ಹಾಗೂ ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...