ಬೀದರ್‌ | ಒಳಮೀಸಲಾತಿ ಹಿಂಪಡೆಯದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ

Date:

ಒಳಮೀಸಲಾತಿ ಸಂಬಂಧ ಗೊಂದಲಗಳು, ನ್ಯಾಯಾಲಯ ಅಡತಡೆಗಳು ನಿವಾರಣೆಯಾಗುವವರೆಗೆ ಹಳೆಯ ಮೀಸಲಾತಿ ವ್ಯವಸ್ಥೆ ಜಾರಿಗೆ ತಂದು ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳಿಗೆ ತೊಂದರೆ ಆಗದಂತೆ ಸರ್ಕಾರ ಸೂಕ್ತ ಆದೇಶ ಹೊರಡಿಸಬೇಕು ಎಂದು ಬಲಗೈ ಜಾತಿಗಳ ಒಕ್ಕೂಟದ ಅಧ್ಯಕ್ಷ ಅನಿಲಕುಮಾರ ಬೆಲ್ದಾರ್ ಆಗ್ರಹಿಸಿದರು.

ಜಿಲ್ಲಾ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ʼಪರಿಶಿಷ್ಟ ಜಾತಿಯನ್ನು ಪ್ರವರ್ಗ ಎ, ಬಿ, ಹಾಗೂ ಸಿ ಎಂದು ವರ್ಗೀಕರಿಸಿ ಜಾತಿ ಪ್ರಮಾಣ ಪತ್ರ ನೀಡುವ ಸರ್ಕಾರದ ಆದೇಶದಿಂದ ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ. ಕಳೆದ ಎರಡು ವರ್ಷಗಳಿಂದ ಒಳಮೀಸಲಾತಿ ವಿಚಾರದಿಂದ ನೇಮಕಾತಿಗಳು ವಿಳಂಬವಾಗಿದ್ದು, ವಯೋಮಿತಿ ಮೀರಿದ ಅಭ್ಯರ್ಥಿಗಳಿಗೆ ಅನ್ಯಾಯವಾಗುತ್ತಿದೆʼ ಎಂದು ಆರೋಪಿಸಿದರು.

ʼಪ್ರಸ್ತುತ ಒಳಮೀಸಲಾತಿ ಪದ್ದತಿಯು ಬಲಗೈ ಸಮುದಾಯಗಳಿಗೆ ಮರಣ ಶಾಸನವಾಗಿದೆ. ಸದ್ಯ ಒಳಮೀಸಲಾತಿ ಕಾನೂನು ರಾಜ್ಯಪಾಲರ ಅಂಗಳದಲ್ಲಿದ್ದು, ಯಾವಾಗ ಬೇಕಾದರೂ ರಾಜ್ಯಪಾಲರು ಅದನ್ನು ಜಾರಿ ಮಾಡಬಹುದಾಗಿರುವುದರಿಂದ ರಾಜ್ಯ ಸರ್ಕಾರ ಕೂಡಲೇ ಅದನ್ನು ಹಿಂಪಡೆದು ಅದರಲ್ಲಿನ ಅವೈಜ್ಞಾನಿಕ ಗೊಂದಲಗಳನ್ನು ಸರಿಪಡಿಸಿ ಎಲ್ಲಶೋಷಿತ ಸಮುದಾಯಗಳಿಗೆ ಅವರವರ ಹಕ್ಕು ದೊರೆಯುವಂತೆ ಕ್ರಮ ಕೈಗೊಳ್ಳಬೇಕೆಂದು ಬೀದರ್‌ನಿಂದ ಚಾಮರಾಜನರ ವರೆಗೆ ಗುರುವಾರ ಪತ್ರಿಕಾಗೋಷ್ಠಿ ಹಾಗೂ ಪ್ರಕಟಣೆ ಹೊರಡಿಸಿ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುವ ಕಾರ್ಯಕ್ಕೆ ಮುಂದಾಗಿದ್ದೇವೆ. ಈಗಾಗಲೇ ಜ್ಞಾನಪ್ರಕಾಶ ಸ್ವಾಮೀಜಿ ನೇತೃತ್ವದಲ್ಲಿ ಚಂದ್ರಶೇಖರಯ್ಯ ಒಳಗೊಂಡಂತೆ ನಮ್ಮ ಬಲಗೈ ಸಮುದಾಯದ ಬಾಂಧವರು ಹೋರಾಟದ ರೂಪರೇಷೆ ಸಿದ್ದಪಡಿಸುತ್ತಿದ್ದಾರೆʼ ಎಂದು ಎಚ್ಚರಿಸಿದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಸಂಸ ರಾಜ್ಯ ಸಂಘಟನಾ ಸಂಚಾಲಕ ರಮೇಶ್ ಡಾಕುಳಗಿ ಮಾತನಾಡಿ, ʼಪರಿಶಿಷ್ಟ ಜಾತಿಯ ಎಲ್ಲಾ ಪ್ರವರ್ಗಗಳಿಗೆ ನಿಗದಿತ ಪ್ರಮಾಣದಲ್ಲಿ ಮೀಸಲಾತಿ ಲಭಿಸುವಂತೆ ನೇಮಕಾತಿ ಪ್ರಾಧಿಕಾರಗಳನ್ನು ಒಂದೇ ಘಟಕವನ್ನಾಗಿ ಪರಿಗಣಿಸಿ ಅಧಿಸೂಚನೆ ಹೊರಡಿಸಬೇಕು. ಆದರೆ, ಹಲವು ನೇಮಕಾತಿ ಪ್ರಾಧಿಕಾರಗಳು ವಿಶೇಷವಾಗಿ ವಿಶ್ವವಿದ್ಯಾಲಯಗಳಲ್ಲಿ ಪ್ರತಿ ವಿಭಾಗವನ್ನೇ ಪ್ರತ್ಯೇಕ ಘಟಕವನ್ನಾಗಿ ಪರಿಗಣಿಸಿ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸುತ್ತಿರುವುದರಿಂದ ಹೆಚ್ಚಿನ ಹುದ್ದೆಗಳು ಒಂದೇ ಪ್ರವರ್ಗಕ್ಕೆ ಮೀಸಲಾಗುತ್ತಿವೆ. ಇದರ ಪರಿಣಾಮವಾಗಿ ಪ್ರವರ್ಗ ‘ಬಿ’ ಮತ್ತು ‘ಸಿ’ಗೆ ಅನ್ಯಾಯವಾಗುತ್ತಿದೆʼ ಎಂದು ಅವರು ಆರೋಪಿಸಿದರು.

ಕಾಂಗ್ರೆಸ್ ಸರ್ಕಾರಕ್ಕೆ ನಮ್ಮ ಮತಗಳು ಬೇಕು‌, ಆದರೆ ನಮ್ಮ ಏಳಿಗೆ ಬೇಕಾಗಿಲ್ಲ. ನಮ್ಮ ಸಮುದಾಯದವರೇ ಪ್ರಭಾವಿ ಹುದ್ದೆಗಳಲ್ಲಿ ಮಂತ್ರಿಗಳಾಗಿದ್ದರೂ ಸಮಾಜಕ್ಕೆ ಅನ್ಯಾಯವಾಗುತ್ತಿದ್ದರೂ ಅವರು ಮೌನವಾಗಿರುವುದು ವಿಷಾದಕರʼ ಎಂದರು.

ಇದನ್ನೂ ಓದಿ : ಸರ್ವಜ್ಞ‌ ಕಾವ್ಯದಲ್ಲಿ ವೈಚಾರಿಕತೆ, ಸಾಮಾಜಿಕ ಪ್ರಜ್ಞೆ

ದಸಂಸ ಜಿಲ್ಲಾ ಸಂಚಾಲಕ ಬಾಬುರಾವ ಪಾಸ್ವಾನ್ ಮಾತನಾಡಿ, ʼರಾಜ್ಯ ಸರ್ಕಾರ ಹೊರಡಿಸಿರುವ ಆದೇಶದಲ್ಲಿ 19 ಜಾತಿಗಳನ್ನು ಬಲಗೈ ಸಮುದಾಯವೆಂದು ನಮೂದಿಸಲಾಗಿದೆ. ಆದರೆ, ರಾಜ್ಯ ಸರ್ಕಾರವು 2025ರ ನ.13ರಂದು ಸೌಲಭ್ಯ ಪಡೆಯಲು ಹೊರಡಿಸಿರುವ ಆದೇಶದಲ್ಲಿ 63 ಜಾತಿಗಳನ್ನು ಬಲಗೈ ಸಮುದಾಯವೆಂದು ಗುರುತಿಸಿದ್ದು ಈ ಸಮುದಾಯದ ಎಲ್ಲಾ 63 ಜಾತಿಗಳು ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಪಡೆಯಲು ಸೂಕ್ತ ಆದೇಶ ಹೊರಡಿಸಬೇಕು. ಸರ್ವೋಚ್ಚ ನ್ಯಾಯಾಲಯದ ತೀರ್ಪಿನಲ್ಲಿರುವಂತೆ ಸಂವಿಧಾನದ ಅನುಚ್ಛೇದ 15 ಮತ್ತು 16ರಂತೆ ಶಿಕ್ಷಣ ಮತ್ತು ಉದ್ಯೋಗಕ್ಕೆ ಮಾತ್ರ ಒಳಮೀಸಲಾತಿಯನ್ನು ಸೀಮಿತಗೊಳಿಸಬೇಕು. ಉಳಿದ ಯಾವುದೇ ಕ್ಷೇತ್ರಗಳಿಗೆ ಒಳಮೀಸಲಾತಿಯ ಅನ್ವಯಿಸುವುದಿಲ್ಲವೆಂದು ರಾಜ್ಯ ಸರ್ಕಾರವು ಸ್ಪಷ್ಟಪಡಿಸಿ ಆದೇಶ ಹೊರಡಿಸಬೇಕುʼ ಎಂದು ಒತ್ತಾಯಿಸಿದರು.

ದಲಿತ ಸೇನೆ ಹಾಗೂ ಇತರ ಸಂಘಟನೆಗಳ ಮುಖಂಡರು ಹಾಜರಿದ್ದರು. ಸರ್ಕಾರ ಬೇಡಿಕೆಗಳನ್ನು ಪರಿಗಣಿಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...