ಬೀದರ್ | ಧರಿನಾಡಿನ ಅಭಿವೃದ್ಧಿಗೆ ಏನೇನು ಬೇಕು? ಬಜೆಟ್ ನಿರೀಕ್ಷೆಗಳೇನು?

Date:

ರಾಜ್ಯದ ಹೊಸ ಹಣಕಾಸು ವರ್ಷದ ಬಜೆಟ್‌ ಮಂಡನೆಗೆ ಒಂದೇ ದಿನ ಬಾಕಿ.‌ ಬೀದರ್‌ ಜನರ ನಿರೀಕ್ಷೆ ಈ ಬಾರಿ ಪ್ರತಿ ವರ್ಷಕ್ಕಿಂತ  ತುಸು ಹೆಚ್ಚೇ ಇದೆ.

ಪ್ರತೀ ಬಜೆಟ್‌ ವೇಳೆ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಬೇಡಿಕೆಗಳು ಕೇಳಿಬರುತ್ತಿದ್ದರೂ ಅವುಗಳಲ್ಲಿ ಅನೇಕವು ಬಜೆಟ್‌ ದಿನ ಹೊರತುಪಡಿಸಿ ಎಂದೂ ಈಚೆಗೆ ಮುಖ ತೋರಿಸಲ್ಲ. ಹೀಗಾಗಿ ಈ ಬಾರಿ ಬಜೆಟ್‌ನಲ್ಲಿ ಧರಿನಾಡಿನ ಅಭಿವೃದ್ಧಿಗೆ ಯಾವ ಯೋಜನೆಗಳು ಘೋಷಣೆಯಾಗಬಹುದು? ಹಳೆ ಬಜೆಟ್‌ ಯೋಜನೆಗಳ ಕತೆ ಎಲ್ಲಿಗೆ ಬಂತು? ಎನ್ನುವ ಕುತೂಹಲ ಸಹಜವಾಗಿಯೇ ಜನರಲ್ಲಿ ಮೂಡಿದೆ.

ರಾಜಧಾನಿ ಬೆಂಗಳೂರಿನಿಂದ ಸುಮಾರು 700 ಕಿಲೋಮೀಟರ್ ದೂರದಲ್ಲಿರುವ ಗಡಿ ಜಿಲ್ಲೆ ಬೀದರ್‌ ಅಭಿವೃದ್ಧಿಯಲ್ಲಿ ಇನ್ನೂ ಹಿಂದುಳಿದಿದೆ. ಉದ್ಯಮಗಳ ಕೊರತೆ, ನೀರಾವರಿ ಯೋಜನೆಗಳ ಅಭಾವ ಹಾಗೂ ಮೂಲಸೌಕರ್ಯದ ಕೊರತೆಯಿಂದ ಜಿಲ್ಲೆಯ ಯುವಜನತೆ ಉದ್ಯೋಗಕ್ಕಾಗಿ ಪುಣೆ, ಮುಂಬೈ, ಬೆಂಗಳೂರು, ಹೈದರಾಬಾದ್‌ ಸೇರಿದಂತೆ ಮಹಾನಗರಗಳಿಗೆ ವಲಸೆ ಹೋಗುವುದು ಸಾಮಾನ್ಯವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉದ್ಯೋಗ ಸೃಷ್ಟಿಗೆ ಮನವಿ:

ಜಿಲ್ಲೆಯ ಪ್ರಮುಖ ಸಮಸ್ಯೆ ಉದ್ಯೋಗಾವಕಾಶಗಳ ಕೊರತೆ. ಇಲ್ಲಿ ಕೃಷಿಯೇ ಹೆಚ್ಚಿನವರ ಬದುಕಿನ ಆಧಾರ. ಆದರೆ ಸಮರ್ಪಕ ನೀರಾವರಿ ಸೌಲಭ್ಯಗಳ ಕೊರತೆಯಿಂದ ರೈತರು ಮಳೆಯನ್ನೇ ಅವಲಂಬಿಸಬೇಕಾದ ಪರಿಸ್ಥಿತಿ ಇದೆ. ಜಿಲ್ಲೆಯ ಒಟ್ಟು ಕೃಷಿ ಭೂಮಿಯಲ್ಲಿ ಕೇವಲ ಶೇ.10 ರಿಂದ 12ರಷ್ಟು ಮಾತ್ರ ನೀರಾವರಿ ಪ್ರದೇಶವಿರುವುದರಿಂದ ಕೃಷಿ ಅನಿಶ್ಚಿತವಾಗಿಯೇ ಉಳಿದಿದೆ.

ವಿಶೇಷವಾಗಿ ಔರಾದ್ ಭಾಗದಲ್ಲಿ ನೀರಾವರಿ ಅತ್ಯಂತ ಕಡಿಮೆ. ಒಣ ಬೇಸಾಯ ಕೈಹಿಡಿಯದ ಕಾರಣ ಅನೇಕರು ನೆರೆ ರಾಜ್ಯಗಳಿಗೆ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಪದೇ ಪದೇ ಎದುರಾಗುವ ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ರೈತರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಜಿಲ್ಲೆಯ ತಲಾ ಆದಾಯವೂ ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಕಡಿಮೆ ಎಂಬುದು ರೈತಾಪಿ ವರ್ಗದ ನೋವು. ಕಾರಂಜಾ ಜಲಾಶಯ ಮುಳುಗಡೆ ಸಂತ್ರಸ್ತರು ಪರಿಹಾರಕ್ಕಾಗಿ ಕಾದು ನೋಡುತ್ತಿದ್ದಾರೆ. ಈ ಬಾರಿ ಬಜೆಟ್‌ನಲ್ಲಿ ರೈತರ, ಯುವಕರ ನೋವು ನಿವಾರಿಸುವ ಗುಳಿಗೆ ಸಿಗಲಿ ಎನ್ನುತ್ತದೆ ಬೀದರ್‌ ಜನತೆ.

WhatsApp Image 2026 03 05 at 2.57.32 PM

ಪ್ರವಾಸೋದ್ಯಮಕ್ಕೆ ಒತ್ತು:

ಐತಿಹಾಸಿಕ ಮತ್ತು ಧಾರ್ಮಿಕವಾಗಿ ಪ್ರಮುಖವಾದ ಬಸವಕಲ್ಯಾಣ ಮತ್ತು ಬೀದರ್ ನಗರಗಳು ಪ್ರವಾಸೋದ್ಯಮದ ದೃಷ್ಟಿಯಿಂದ ದೊಡ್ಡ ಅವಕಾಶಗಳನ್ನು ಹೊಂದಿವೆ. ಕೋಟೆಗಳು, ದೇವಾಲಯಗಳು, ಗುರುದ್ವಾರಗಳು ಸೇರಿದಂತೆ ಹಲವು ತಾಣಗಳಿದ್ದರೂ ಅವುಗಳ ಸಮರ್ಪಕ ಅಭಿವೃದ್ಧಿ ಇನ್ನೂ ಆಗಿಲ್ಲ ಎಂಬುದು ಸ್ಥಳೀಯರ ಅಸಮಾಧಾನ.

ಪ್ರವಾಸೋದ್ಯಮ ಸರ್ಕಿಟ್ ನಿರ್ಮಾಣ, ಪ್ರವಾಸಿ ತಾಣಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಪ್ರವಾಸಿಗರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಹಲವು ವರ್ಷಗಳಿಂದ ಬೇಡಿಕೆ ಇದೆ. ಸರಿಯಾದ ಯೋಜನೆಗಳು ಜಾರಿಗೆ ಬಂದರೆ ಪ್ರವಾಸೋದ್ಯಮ ಕ್ಷೇತ್ರವೇ ಜಿಲ್ಲೆಯ ಆರ್ಥಿಕತೆಗೆ ದೊಡ್ಡ ಆಧಾರವಾಗಬಹುದು ಎಂಬ ಅಭಿಪ್ರಾಯವೂ ವ್ಯಕ್ತವಾಗುತ್ತಿದೆ.

ಶಿಕ್ಷಣ ಮತ್ತು ಸಹಕಾರಿ ವಲಯ:

ಜಿಲ್ಲೆಯಲ್ಲಿ ಶಿಕ್ಷಣ ಮತ್ತು ಸಂಶೋಧನಾ ಕ್ಷೇತ್ರದಲ್ಲಿಯೂ ಹೆಚ್ಚಿನ ಅವಕಾಶಗಳ ಅಗತ್ಯವಿದೆ. ಕೃಷಿ ಪ್ರಧಾನ ಜಿಲ್ಲೆಯಾದ ಕಾರಣ ಇಲ್ಲಿ ಕೃಷಿ ಕಾಲೇಜು ಸ್ಥಾಪನೆ ಮಾಡಬೇಕು ಎಂಬ ಬೇಡಿಕೆ ಬಹುಕಾಲದಿಂದ ಕೇಳಿಬರುತ್ತಿದೆ.

ತೋಟಗಾರಿಕೆ ಕಾಲೇಜನ್ನು ವಿಶ್ವವಿದ್ಯಾಲಯವಾಗಿ ಮೇಲ್ದರ್ಜೆಗೇರಿಸುವುದು, ಹೊಸ ಕೃಷಿ ಮಾರುಕಟ್ಟೆ ಸ್ಥಾಪನೆ ಹಾಗೂ ಬೀದರ್ ವಿಶ್ವವಿದ್ಯಾಲಯಕ್ಕೆ ಅಗತ್ಯ ಮೂಲಸೌಕರ್ಯ ಕಲ್ಪಿಸುವುದು ಎಂಬ ಬೇಡಿಕೆಗಳೂ ಪ್ರಸ್ತಾಪವಾಗುತ್ತಿವೆ. ಸಾಲದ ಸಮಸ್ಯೆಯಲ್ಲಿ ಸಿಲುಕಿರುವ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳಿಗೆ ಸರ್ಕಾರ ನೆರವು ನೀಡಬೇಕು ಎನ್ನುವುದು ಸಹಕಾರಿ ವಲಯದ ಒತ್ತಾಯವಾಗಿದೆ.

ಬಿಎಸ್‌ಎಸ್‌ಕೆ ಕಾರ್ಖಾನೆ ಸರ್ಕಾರ ವಶಕ್ಕೆ ಪಡೆದು ಪುನರಾರಂಭಿಸಬೇಕು. ರೈತರ ಎಲ್ಲಾ ತರಹದ ಸಾಲಗಳನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು. ಕರ್ನಾಟಕ ಕಬ್ಬು ಖರೀದಿ ಮತ್ತು ಪೂರೈಕೆ ನಿಯಂತ್ರಣ ಕಾಯ್ದೆ-2013ರಲ್ಲಿ ತಿದ್ದುಪಡಿ ಮಾಡಿ ಜಿಲ್ಲಾ ಮಟ್ಟದಲ್ಲಿ ಸುಗರ್ ಕಂಟ್ರೋಲ್ ಬೋರ್ಡ್ ಸ್ಥಾಪಿಸಬೇಕು ಎಂದು ಸಂಯುಕ್ತ ಕಿಸಾನ ಮೋರ್ಚಾದ ಬಾಬುರಾವ್ ಹೊನ್ನಾ ಅವರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ವಚನ ವಿಶ್ವವಿದ್ಯಾಲಯ:

ವೇಗವಾಗಿ ಬೆಳೆಯುತ್ತಿರುವ ಬಸವಕಲ್ಯಾಣ ಜಿಲ್ಲೆಯನ್ನಾಗಿ ಘೋಷಿಸಬೇಕೆಂಬ ಕೂಗು ಮತ್ತೆ ಮುನ್ನೆಲೆಗೆ ಬಂದಿದೆ. ಬಸವಕಲ್ಯಾಣ ನಗರದಲ್ಲಿ ರಿಂಗ್ ರೋಡ್ ನಿರ್ಮಾಣ ಹಾಗೂ ವಚನ ವಿಶ್ವವಿದ್ಯಾಲಯ ಸ್ಥಾಪನೆ ಕುರಿತ ಚರ್ಚೆಯೂ ಮತ್ತೆ ವೇಗ ಪಡೆದಿದೆ.

ವಚನ ವಿವಿ ಸ್ಥಾಪನೆ ಸಂಬಂಧ ಈಚೆಗೆ ಮಠಾಧೀಶರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವುದೂ ಗಮನಾರ್ಹವಾಗಿದೆ. ಜೊತೆಗೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಹೊಸ ಅತ್ಯಾಧುನಿಕ ಕ್ರೀಡಾಂಗಣ ನಿರ್ಮಾಣ, ಕಾರಂಜಾ ಜಲಾಶಯದ ಎದುರು ಬೃಂದಾವನ ಮಾದರಿಯ ಉದ್ಯಾನ ನಿರ್ಮಾಣ, ಪ್ರಮುಖ ರಸ್ತೆಗಳನ್ನು ಮೇಲ್ದರ್ಜೆಗೇರಿಸುವುದು ಹಾಗೂ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ಯೋಜನೆಗಳನ್ನು ಜಾರಿಗೆ ತರಬೇಕು ಎಂಬ ಬೇಡಿಕೆಗಳು ಕೇಳಿಬರುತ್ತಿವೆ.

1004986051

ರೈಲು ಮಾರ್ಗ:

ಸಂಪರ್ಕ ವ್ಯವಸ್ಥೆಯ ದೃಷ್ಟಿಯಿಂದಲೂ ಜಿಲ್ಲೆಯ ಜನರ ನಿರೀಕ್ಷೆಗಳು ಹೆಚ್ಚಿವೆ. 2019ರಲ್ಲಿ ಮಂಜೂರಾದ ಬೀದರ್-ನಾಂದೇಡ್ ರೈಲು ಮಾರ್ಗ (ಔರಾದ್, ದೇಗಲೂರು) ಯೋಜನೆಗೆ ಚಾಲನೆ ದೊರಕಬೇಕಿದೆ. ಈ ಯೋಜನೆಗೆ ರಾಜ್ಯ ಸರ್ಕಾರ ಅಗತ್ಯ ಭೂಮಿ ಒದಗಿಸಿ ಕಾಮಗಾರಿಗೆ ವೇಗ ನೀಡಬೇಕೆಂಬುದು ಸ್ಥಳೀಯರ ಒತ್ತಾಯವಾಗಿದೆ. ಈ ರೈಲು ಮಾರ್ಗ ಪೂರ್ಣಗೊಂಡರೆ ವ್ಯಾಪಾರ, ಶಿಕ್ಷಣ ಮತ್ತು ಉದ್ಯೋಗದ ದೃಷ್ಟಿಯಿಂದ ಜಿಲ್ಲೆಯ ಸಂಪರ್ಕ ವ್ಯವಸ್ಥೆಗೆ ದೊಡ್ಡ ಉತ್ತೇಜನ ಸಿಗಲಿದೆ.

ಹಿಂದಿನ ಬಜೆಟ್‌ಗಳಲ್ಲಿ ಘೋಷಿಸಲಾದ ಹಲವು ಯೋಜನೆಗಳು ಇನ್ನೂ ಪೂರ್ಣಗೊಳ್ಳದಿರುವುದೂ ಜಿಲ್ಲೆಯ ಜನರಲ್ಲಿ ನಿರಾಸೆ ಮೂಡಿಸಿದೆ.

ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಕ್ಯಾನ್ಸರ್ ಪತ್ತೆ ವಿಭಾಗ ಆರಂಭಿಸುವ ಘೋಷಣೆಯ ಸ್ಥಿತಿ ಇನ್ನೂ ಸ್ಪಷ್ಟವಾಗಿಲ್ಲ. ಐತಿಹಾಸಿಕ ಕರೇಜ್ ಸುರಂಗ ಬಾವಿ ಅಭಿವೃದ್ಧಿಗೆ ಮೀಸಲಾದ ₹15 ಕೋಟಿ ರೂಪಾಯಿ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದೆ. ಲಂಬಾಣಿ ಜನಾಂಗದ ಕಸೂತಿ ತರಬೇತಿ ಕೇಂದ್ರ ಇನ್ನೂ ಪ್ರಾರಂಭವಾಗಿಲ್ಲ. ಔರಾದ್ ತಾಲ್ಲೂಕಿನಲ್ಲಿ ಕೆರೆಗೆ ನೀರು ತುಂಬುವ ಯೋಜನೆಯೂ ಆರಂಭವಾಗಿಲ್ಲ. ನಾನಕ್ ಝೀರಾ ಸಾಹೇಬ್ ಅಭಿವೃದ್ಧಿಗೆ ಘೋಷಿಸಿದ ಅನುದಾನವೂ ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ.

ಇದನ್ನೂ ಓದಿ: ಬೀದರ್‌ | ಬಹುತ್ವ, ಸೌಹಾರ್ದತೆ ಭಾರತದ ನಾಡಿಮಿಡಿತ : ಭೀಮಾಶಂಕರ ಬಿರಾದರ್

ಬೀದರ್ ಜಿಲ್ಲೆಯ ಅಭಿವೃದ್ಧಿಗೆ ಹಲವು ವರ್ಷಗಳಿಂದ ಕೇಳಿಬರುತ್ತಿರುವ ಬೇಡಿಕೆಗಳ ಪಟ್ಟಿಯೇ ದೊಡ್ಡದಾಗಿದೆ. ಕೈಗಾರಿಕೆಗಳಿಂದ ಹಿಡಿದು ನೀರಾವರಿ, ಶಿಕ್ಷಣ, ಪ್ರವಾಸೋದ್ಯಮ ಮತ್ತು ಮೂಲಸೌಕರ್ಯಗಳವರೆಗೆ ಹಲವು ಕ್ಷೇತ್ರಗಳಲ್ಲಿ ಸ್ಪಷ್ಟ ಯೋಜನೆಗಳು ಅಗತ್ಯವೆಂದು ಸ್ಥಳೀಯರು ಒತ್ತಾಯಿಸುತ್ತಿದ್ದಾರೆ.

ಈ ಬಾರಿಯ ರಾಜ್ಯ ಬಜೆಟ್ ಧರಿನಾಡಿನ ಕನಸುಗಳಿಗೆ ಹೊಸ ದಿಕ್ಕು ನೀಡುತ್ತದೆಯೇ ಅಥವಾ ಹಿಂದಿನಂತೆಯೇ ಬೇಡಿಕೆಗಳು ಬೇಡಿಕೆಗಳಾಗಿಯೇ ಉಳಿಯುತ್ತವೆಯೇ ಎಂಬ ಪ್ರಶ್ನೆಗೆ ಉತ್ತರ ಸಿಗಲು ಜಿಲ್ಲೆಯ ಜನರು ಕಾತರದಿಂದ ಕಾಯುತ್ತಿದ್ದಾರೆ.

WhatsApp Image 2025 02 06 at 11.55.32 e1738823214905
ಬಾಲಾಜಿ ಕುಂಬಾರ್
+ posts

ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಹೆಚ್ಚಳ

ಹಣದುಬ್ಬರಕ್ಕೆ ಅನುಗುಣವಾಗಿ ನಡೆಯುವ ವಾರ್ಷಿಕ ದರ ಪರಿಷ್ಕರಣೆಯ ಭಾಗವಾಗಿ ಏಪ್ರಿಲ್ 1ರಿಂದ...

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಭಾಲ್ಕಿ ಹಿರೇಮಠದಲ್ಲಿ ಏ.10ರಿಂದ ಬಸವ ದರ್ಶನ ಪ್ರವಚನ

ಭಾಲ್ಕಿ ಹಿರೇಮಠ ಸಂಸ್ಥಾನದಲ್ಲಿ ವಿಶ್ವಗುರು ಬಸವಣ್ಣನವರ ಜಯಂತಿ ಹಾಗೂ ಚನ್ನಬಸವ ಪಟ್ಟದ್ದೇವರ27ನೆಯ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...