ಬೀದರ್‌ | ಮಹಿಳಾ ದಿನಾಚರಣೆ : ಕ್ಯಾನ್ಸರ್ ಗೆದ್ದ ಮಹಿಳೆಗೆ ಸನ್ಮಾನ

Date:

‌ಬೀದರ್ ನಗರದ ಬಸವ ನಗರ ಕಾಲೋನಿಯಲ್ಲಿ ಅಖಿಲ ಭಾರತ ವಿಶ್ವವಿದ್ಯಾಲಯಗಳ ನೌಕರರ ಒಕ್ಕೂಟದ ವತಿಯಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಕ್ಯಾನ್ಸರ್ ರೋಗವನ್ನು ಧೈರ್ಯದಿಂದ ಎದುರಿಸಿ ಜಯಿಸಿದ ಮಹಿಳಾ ಸಾಧಕಿ ಲಕ್ಷ್ಮೀಬಾಯಿ ಬಸವರಾಜ ಪಾಟೀಲ ಜೋಳದಾಬಕಾ ಅವರನ್ನು ವಿಶೇಷವಾಗಿ ಗೌರವಿಸಲಾಯಿತು.

ಲಕ್ಷ್ಮೀಬಾಯಿ ಪಾಟೀಲ ಜೋಳದಾಬಕಾ ಮಾತನಾಡಿ, ʼದೃಢ ಆತ್ಮವಿಶ್ವಾಸ ಮತ್ತು ಧೈರ್ಯವಿದ್ದರೆ ಮಾರಣಾಂತಿಕ ಕ್ಯಾನ್ಸರ್ ರೋಗ ಗೆಲ್ಲಬಹುದು. ಆತ್ಮವಿಶ್ವಾಸ ಕಳೆದುಕೊಳ್ಳದೆ ಚಿಕಿತ್ಸೆ ಪಡೆದ ಪರಿಣಾಮ ಈಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದೇನೆ. ತಮ್ಮ ಧೈರ್ಯವನ್ನು ತಜ್ಞ ವೈದ್ಯರು ಕೂಡ ಪ್ರಶಂಸಿದ್ದಾರೆʼ ಎಂದು ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಂದು ವರ್ಷದ ಹಿಂದೆ ಪರೀಕ್ಷೆಯಲ್ಲಿ ಕ್ಯಾನ್ಸರ್ ಪತ್ತೆಯಾದ ಬಳಿಕ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸಾವು–ಬದುಕಿನ ಮಧ್ಯೆ ಹೋರಾಟ ನಡೆಸಿದ ಅನುಭವವನ್ನು ಅವರು ಹಂಚಿಕೊಂಡರು.

ಅಖಿಲ ಭಾರತ ವಿಶ್ವವಿದ್ಯಾಲಯಗಳ ನೌಕರರ ಒಕ್ಕೂಟದ ಕಾರ್ಯಕಾರಿಣಿ ಸಮಿತಿ ಸದಸ್ಯ ವೀರಭದ್ರಪ್ಪ ಉಪ್ಪಿನ ಪ್ರಾಸ್ತಾವಿಕವಾಗಿ ಮಾತನಾಡಿ, ʼಸಮಾಜದ ವಿಶಿಷ್ಟ ಸಾಧಕರ ಪರಿಚಯʼ ಎಂಬ ಕಾರ್ಯಕ್ರಮದ ಮೂಲಕ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ವ್ಯಕ್ತಿಗಳನ್ನು ಗುರುತಿಸಿ ಅವರ ಅನುಭವಗಳನ್ನು ಜನತೆಗೆ ಪರಿಚಯಿಸುವ ಯೋಜನೆಯನ್ನು ಕೈಗೊಂಡಿದ್ದೇವೆʼ ಎಂದು ಹೇಳಿದರು.

ಇದನ್ನೂ ಓದಿ : ಬೀದರ್ | ಸರ್ಕಾರಿ ಶಾಲೆಗಳಲ್ಲಿ ಮೌಲ್ಯಯುತ ಶಿಕ್ಷಣ

ಹಿರಿಯರಾದ ಸರಸ್ವತಿಬಾಯಿ ಉಪ್ಪಿನ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಶಿಕ್ಷಕಿ ಮಂದಾಕಿನಿ ಸ್ವಾಗತಿಸಿದರು. ಕೊನೆಯಲ್ಲಿ ನಿವೃತ್ತ ಶಿಕ್ಷಕಿ ಜೈಶ್ರೀ ಮೊಳಕೇರಿ ವಂದಿಸಿದರು. ಕಾರ್ಯಕ್ರಮದಲ್ಲಿ ಜಗದೀಶ, ಕವಿತಾ, ಸಂಗಮೇಶ್ವರ, ಶಕುಂತಲಾ, ಅಶ್ವಿನಿ, ಸಿದ್ರಾಮ, ಸರೋಜಿನಿ, ಪ್ರಿಯಾ, ಮಾಧವ, ಸುಭಾಷ್, ಸುಹಾಸಿನಿ, ಜಗದೇವಿ, ಬಂಗಾರಮ್ಮ, ಚಿತ್ರಕಲಾ, ಉಮಾದೇವಿ, ಸುಕನ್ಯಾ, ಅರ್ಚನಾ, ಕೀರ್ತಿ, ಜ್ಯೋತಿ, ಶಕುಂತಲಾ, ಪೂಜಾ, ಗೌರಿ ಸೇರಿದಂತೆ ಅನೇಕರು ಭಾಗವಹಿಸಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...