ಬೀದರ್‌ | ಗಾಳಿಪಟ ಹಾರಿಸುವಾಗ ಕಟ್ಟಡ ಮೇಲಿಂದ ಬಿದ್ದು ಯುವಕ ಸಾವು

Date:

ಸಂಕ್ರಾಂತಿ ಹಬ್ಬದ ಪ್ರಯುಕ್ತ ಸ್ನೇಹಿತರೊಂದಿಗೆ ಸೇರಿ ಗಾಳಿಪಟ ಹಾರಿಸಲು ಹೋಗಿದ್ದ ಯುವಕನೊಬ್ಬ ಕಾಲೇಜು ಕಟ್ಟಡ ಮೇಲಿಂದ ಆಕಸ್ಮಿಕವಾಗಿ ಬಿದ್ದು ಪ್ರಾಣ ಕಳೆದುಕೊಂಡಿರುವ ಘಟನೆ ಹುಮನಾಬಾದ್ ಪಟ್ಟಣದಲ್ಲಿ ನಡೆದಿದೆ.

ಹುಮನಾಬಾದ್ ಪಟ್ಟಣದ ವಾಂಜರಿ ಬಡಾವಣೆಯ ನಿವಾಸಿಯಾದ ಶಶಿಕುಮಾರ್ (೧೯) ಎಂದು ತಿಳಿದು ಬಂದಿದೆ. ಕಟ್ಟಡದ ಮೇಲೆ ಗಾಳಿಪಟ ಹಾರಿಸಲು ತೆರಳಿದ್ದನು. ಆಗಸದಲ್ಲಿ ಹಾರುತ್ತಿದ್ದ ಗಾಳಿಪಟವೊಂದು ದಾರದಿಂದ ಕಡಿದು ಹೋಗುತ್ತಿತ್ತು. ಅದನ್ನು ಹಿಡಿಯಬೇಕೆಂಬ ಅವಸರದಲ್ಲಿ ಶಶಿಕುಮಾರ್ ಓಡುತ್ತಾ ಹೋಗಿ ಆಯಾ ತಪ್ಪಿ ಕಟ್ಟಡದ ಮೇಲಿಂದ ಕೆಳಗೆ ಬಿದ್ದಿದ್ದಾನೆ ಎನ್ನಲಾಗಿದೆ.

ಕಟ್ಟಡದ ಮೇಲಿಂದ ಕೆಳಗೆ ಬಿದ್ದ ರಭಸಕ್ಕೆ ಶಶಿಕುಮಾರ್ ತಲೆಗೆ ಗಂಭೀರವಾದ ಗಾಯಗಳಾಗಿದ್ದು, ತೀವ್ರ ರಕ್ತಸ್ರಾವ ಸಂಭವಿಸಿದೆ. ಸ್ನೇಹಿತರು ಮತ್ತು ಸ್ಥಳೀಯರು ನೆರವಿಗೆ ಧಾವಿಸುವಷ್ಟರಲ್ಲೇ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಯ ಸಂಬಂಧ ಹುಮನಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಬೀದರ್‌ | ಎಟಿಎಂ ದರೋಡೆ ಪ್ರಕರಣ : ಮೃತ ಗಿರಿ ವೆಂಕಟೇಶ ಕುಟುಂಬಕ್ಕೆ ಪರಿಹಾರ, ಉದ್ಯೋಗ ನೀಡಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...