ಬೀದರ್‌ | ಯುವಕನ ಕಿರುಕುಳಕ್ಕೆ ಮನನೊಂದು ಬಾಲಕಿ ಆತ್ಮಹತ್ಯೆ; ಒಂದು ತಿಂಗಳ ನಂತರ ಪ್ರಕರಣ ದಾಖಲು

Date:

ಯುವಕನ ಕಿರುಕುಳಕ್ಕೆ ಬೆಸತ್ತು ದ್ವಿತೀಯ ಪಿಯುಸಿ ಓದುತ್ತಿದ್ದ ಬಾಲಕಿಯೋರ್ವಳು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳೆಕಿಗೆ ಬಂದಿದೆ. ಕಳೆದ ಆಗಸ್ಟ್‌ 17 ರಂದು ನಡೆದ ಘಟನೆಗೆ ಹೊಸ ತಿರುವು ದೊರಕಿದ್ದು, ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಒಂದು ತಿಂಗಳ ನಂತರ ಸೆ.21 ರಂದು ಚಿಟಗುಪ್ಪ ತಾಲೂಕಿನ ಬೇಮಳಖೇಡಾ ಪೋಲಿಸ್‌ ಠಾಣೆಯಲ್ಲಿ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ.

ಚಿಟಗುಪ್ಪ ತಾಲೂಕಿನ ಬೇಮಳಖೇಡಾ ಗ್ರಾಮದ ಭಾಗಮ್ಮ (ಪ್ರಿಯಾಂಕಾ) (17) ಮರಕುಂದಾ ಎನ್ನುವ ಬಾಲಕಿಗೆ ಅದೇ ಗ್ರಾಮದ ಯುವಕನೋರ್ವ ಪರಿಚಯವಾಗಿ ಸಲುಗೆ ಬೆಳೆಸಿದ, ಬೀದರನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಬಾಲಕಿ ಯುವಕನೊಂದಿಗೆ ಮೊಬೈಲ್‌ನಲ್ಲಿ ಮಾತನಾಡಿದ್ದಾಳೆ. ಅದೇ ಪ್ರೀತಿ ಸಲುಗೆಯಿಂದ ಇಬ್ಬರೂ ಫೋಟೋ ತೆಗೆಸಿಕೊಂಡಿದ್ದಾರೆ. ಆದರೆ, ಬಾಲಕಿಯೊಂದಿಗೆ ಮಾತನಾಡಿದ ಆಡಿಯೋ ರೆರ್ಕಾಡ್‌, ಪೋಟೋಗಳನ್ನು ಇಟ್ಟುಕೊಂಡು ಯುವಕ ಬಾಲಕಿಗೆ ಬ್ಲಾಕ್‌ ಮೇಲ್‌ ಮಾಡಿ ಹಣ ನೀಡುವಂತೆ ಪದೇ ಪದೇ ಪೀಡಿಸುತ್ತಿದ್ದ. ಬಾಲಕಿ ಫೋನ್‌ಪೇ ಮೂಲಕ ಯುವಕನಿಗೆ ಹಣ ಹಾಕಿದ್ದಾಳೆ ಎಂದು ಪೋಷಕರು ಆರೋಪಿಸಿದ್ದಾರೆ.

ಯುವಕ ಮತ್ತೆ ಆ.17ರಂದು ಬಾಲಕಿ ಜೊತೆ ಮಾತನಾಡಿ ಹಣ ಕಳುಹಿಸು, ಇಲ್ಲದಿದ್ದರೆ ನಿನ್ನ ಜೊತೆ ಮಾತನಾಡಿದ ರೆಕಾರ್ಡ್‌, ಪೋಟೊ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್‌ ಮಾಡುವೆ ಎಂದು ಕಿರುಕುಳ ನೀಡಿದ್ದಾನೆ. ಆ ಕಾರಣಕ್ಕೆ ನನ್ನ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮುಂದೆ ಯಾರ ಮನೆಯ ಹೆಣ್ಣು ಮಕ್ಕಳಿಗೆ ಈ ರೀತಿಯ ಅನ್ಯಾಯ ಆಗಬಾರದು. ನನ್ನ ಮಗಳ ಸಾವಿಗೆ ಕಾರಣವಾದ ಯುವಕನ ಮೇಲೆ ಸೂಕ್ತ ಕ್ರಮ ಜರುಗಿಸಿ ನ್ಯಾಯ ದೊರಕಿಸಿಕೊಡಬೇಕೆಂದು ಮೃತ ಬಾಲಕಿಯ ತಾಯಿ ಗಂಗಮ್ಮಾ ನೀಡಿದ ದೂರಿನ ಅನ್ವಯ ಬೇಮಳಖೇಡಾ ಪೋಲಿಸರು ಯುವಕನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರಿ ಅನುದಾನಿತ ಉತ್ಸವಗಳೆಲ್ಲ ಸರಳಗೊಳ್ಳಲಿ

ಈ ಕುರಿತು ಬೇಮಳಖೇಡಾ ಪಿಎಸ್‌ಐ ಈದಿನ.ಕಾಮ್‌ ದೊಂದಿಗೆ ಮಾತನಾಡಿ, “ಒಂದು ತಿಂಗಳ ಹಿಂದೆ ಬೇಮಳಖೇಡಾ ಗ್ರಾಮದಲ್ಲಿ ಪಿಯುಸಿ ವಿದ್ಯಾರ್ಥನಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆದರೆ ಮೃತ ಬಾಲಕಿಯ ಗಂಗಮ್ಮ ಅವರು ಸೆ.21 ರಂದು ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡು ಆರೋಪಿ ಯುವಕನಿಗೆ ಬಂಧಿಸಿ ನ್ಯಾಯಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...