ಬೀದರ್‌ | ಸರ್ಕಾರಿ ಶಾಲಾ ಮಕ್ಕಳ ಜತೆಗೆ ಬಿಸಿಯೂಟ ಸವಿದ ಶಿಕ್ಷಣ ಇಲಾಖೆ ಆಯುಕ್ತ

Date:

ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ಮಕ್ಕಳಿಗೆ ಗ್ರಂಥಾಲಯ ಸಮರ್ಪಕವಾಗಿ ಬಳಸಿಕೊಳ್ಳುವಂತೆ ಪ್ರೇರೆಪಿಸಬೇಕು. ಪಠ್ಯದ ಜೊತೆ ಜೊತೆಗೆ ಸಹಪಠ್ಯ ಚಟುವಟಿಕೆಗಳಿಗೂ ಪ್ರಾಮುಖ್ಯತೆ ನೀಡಬೇಕು ಎಂದು ಪ್ರಾದೇಶಿಕ ಶಿಕ್ಷಣ ಇಲಾಖೆ ಆಯುಕ್ತ ಆಕಾಶ್ ಎಸ್. ಹೇಳಿದರು.

ಔರಾದ ತಾಲೂಕಿನ ಎಕಲಾರ ಗ್ರಾಮದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗೆ ಬುಧವಾರ ಭೇಟಿ ನೀಡಿ ಶೈಕ್ಷಣಿಕ ಗುಣಮಟ್ಟ ಹಾಗೂ ಸರ್ಕಾರದ ಯೋಜನೆಗಳ ಅನುಷ್ಠಾನದ ಕುರಿತು ಪರಿಶೀಲನೆ ನಡೆಸಿ ಮಾತನಾಡಿದರು.

ಪ್ರಾಥಮಿಕ ಶಾಲೆಯಲ್ಲಿನ ಅಡುಗೆ ಕೋಣೆ, ಸ್ಮಾರ್ಟ್ ಕ್ಲಾಸ್, ಶೌಚಾಲಯ, ಆಹಾರ ದಾಸ್ತಾನು ಕೋಣೆಗೆ ಭೇಟಿ ನೀಡಿ‌ ಪರಿಶೀಲಿಸಿದರು. ಶಾಲೆಯ ಅಂದ ಚಂದ ಹಾಗೂ ಸ್ವಚ್ಛತೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಅಂದ ಚಂದಕ್ಕೆ ಹಣದ ಕ್ರೋಢಿಕರಣ ಮಾಹಿತಿ ಪಡೆದು ಮಕ್ಕಳೊಂದಿಗೆ ಕುಳಿತು ಬಿಸಿಯೂಟ ಸವಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿಕ್ಷಕಿ ರೂಪಾ ಕಾರ್ಯಕ್ಕೆ ಮೆಚ್ಚುಗೆ : 

ಎಕಲಾರ ಗ್ರಾಮದ ಡಿ.ಎಡ್ ಪೂರ್ಣಗೊಳಿಸಿದ ರೂಪಾ ಶಾಲಾ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಉಚಿತ ಸೇವೆ ಸಲ್ಲಿಸುತ್ತಿರುವ ವಿಷಯ ತಿಳಿದ ಅವರು, ಶಿಕ್ಷಕಿ ರೂಪಾ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದೀರಾ? ಬೀದರ್‌ | ಜಿಲ್ಲೆಯ ಎಲ್ಲ ತಾಲೂಕುಗಳಿಗೂ ಬರ ಘೋಷಣೆ: ಸಚಿವ ಈಶ್ವರ ಖಂಡ್ರೆ

ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯ  ಹಿರಿಯ ಅಧಿಕಾರಿ ಸಿ.ಎಸ್ ಮುಧೋಳ, ಬಿಇಒ ಮಕ್ಸೂದ್ ಅಹ್ಮದ್, ಬಿಆರ್‌ಸಿ ಪ್ರಕಾಶ ರಾಠೋಡ್, ಇನಾಯತಲಿ ಸೌದಾಗರ್, ಇಸಿಒ ಈಶ್ವರ ಕ್ಯಾದೆ, ಬಲಭೀಮ ಕುಲಕರ್ಣಿ, ಸಿಆರ್‌ಪಿ ಮಹಾದೇವ ಘುಳೆ, ಗಫರಖಾನ್ ಹಾಗೂ ಶಾಲೆಯ ಮುಖ್ಯ ಶಿಕ್ಷಕ ಪ್ರಭು ಬಾಳೂರೆ, ಯಶವಂತರಾವ, ಸೂರ್ಯಕಾಂತ ನಾಗೂರೆ, ಬಾಲಾಜಿ ಅಮರವಾಡಿ, ಅಂಕುಶ ಪಾಟೀಲ್, ಶಿವರಾಜ ಬಿರಾದಾರ್, ಸಿದ್ದಾರೆಡ್ಡಿ, ವೀರಶೆಟ್ಟಿ, ಶ್ರೀಮಂತ, ವಿಜಯಲಕ್ಷ್ಮಿ, ಸಿದ್ದೇಶ್ವರಿ ಸೇರಿದಂತೆ ಇನ್ನಿತರರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...