ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ, ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಘೋಷಿಸಿದ ಸಚಿವ ಈಶ್ವರ್‌ ಖಂಡ್ರೆ

Date:

ಬೀದರ್‌ನಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಆರೋಪ-ಪ್ರತ್ಯಾರೋಪಗಳು ಜೋರಾಗಿದ್ದು, ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಇಂದು ಸಚಿನ್ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಈ ವೇಳೆ ಮೃತ ಸಚಿನ್​ ಕುಟುಂಬಸ್ಥರಿಗೆ 10 ಲಕ್ಷ ರೂ. ಪರಿಹಾರ ನೀಡುವಾಗಿ ಘೋಷಿಸಿದರು. ಬಿಜೆಪಿ ನಿಯೋಗ ಭೇಟಿ ಮೊದಲೇ ಈಶ್ವರ್ ಖಂಡ್ರೆ ಭೇಟಿ ನೀಡಿ ಪರಿಹಾರ ಘೋಷಿಸಿದ್ದಾರೆ.

ಕುಟುಂಬಸ್ಥರ ಭೇಟಿ ಬಳಿಕ ಮಾಧ್ಯಮದವರ ಜೊತೆಗೆ ಮಾತಾಡಿದ ಖಂಡ್ರೆ, “ಸಚಿನ ಆತ್ಮಹತ್ಯೆ ಒಂದು‌ ನೋವಿನ ಸಂಗತಿಯಾಗಿದೆ.‌ ನಾನು, ನಮ್ಮ ಸರಕಾರ ಸಚಿನ್ ಕುಟುಂಬಸ್ಥರ ಜೊತೆಗೆ ಇದ್ದೇವೆ. ಸಚಿನ್ ಆತ್ಮಹತ್ಯೆ ಕೇಸ್ ನಿರ್ಲಕ್ಷ್ಯ ಮಾಡಿದ ಪೊಲೀಸರು ಮೇಲೆ ಕ್ರಮವಾಗುತ್ತೆ. ಈ‌ ಕೇಸ್ ರೈಲ್ವೇ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಕೇಸ್ ತನಿಕೆ ನ್ಯಾಯಯುತವಾಗಿ ನಡೆಯುತ್ತೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಪ್ರಕರಣದಲ್ಲಿ ಯಾರೇ ಇರಲಿ ಅವರ ಮೇಲೆ ಕಾನೂನು ರೀತಿ ಕ್ರಮವಾಗುತ್ತದೆ. ಸಚಿನ್ ಕುಟುಂಬಕ್ಕೆ ಸರಕಾರ ಹಾಗೂ ಖಾಸಗಿಯಾಗಿ 10 ಲಕ್ಷ ಪರಿಹಾರ ನೀಡಲಾಗುವುದು. ನಾನು ಮೊನ್ನೆಯೇ ಬರಬೇಕಾಗಿತ್ತು ಬರಲು ಆಗಲಿಲ್ಲ. ಬೆಳಗಾವಿ ಕಾರ್ಯಕ್ರಮ ಮಾಜಿ ಪ್ರಧಾನಿ ಅವರ ಮರಣ ಕಾರಣಕ್ಕೆ ಬರಲಿಲ್ಲ. ಈ ಆತ್ಮಹತ್ಯೆ ಪ್ರಕರಣಕ್ಕೆ ಸಂಭವಿಸಿದಂತೆ ಪ್ರಿಯಾಂಕ್ ಖರ್ಗೆ ಅವರು ಈ ಕೇಸ್ ಅನ್ನ ತಾವೇ ತನಿಖೆ ಮಾಡಿಸುತ್ತೇನೆ ಎಂದು ಹೇಳಿದ್ದಾರೆ. ಸಚಿನ್ ಮರಣ ಪತ್ರವನ್ನ ಎಫ್‌ಎಸ್‌ಎಲ್‌ಗೆ ಕಳುಹಿಸುತ್ತೇವೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಳೆದುಹೋದ ವರ್ಚಸ್ಸು ಮತ್ತು ಗೇಲಿಯ ಸರಕಾದ ‘ಹೈಡ್ರಾಮಾ’

ಬೀದರ್‌ನಲ್ಲಿ ಯುವ ಗುತ್ತಿಗೆದಾರ ಸಚಿನ್ (26 ವರ್ಷ) ಬಾಲ್ಕಿಯಲ್ಲಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಅತ್ಮಹತ್ಯೆಗೆ ಶರಣಾಗಿದ್ದಾನೆ. ಡೆತ್ ನೋಟ್ ಬರೆದಿಟ್ಟು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಆಪ್ತನ ಹೆಸರು ತಳಕು ಹಾಕಿಕೊಂಡಿದೆ. ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು ಎಂಬುವವರು 15 ಲಕ್ಷಕ್ಕೂ ಅಧಿಕ ಹಣ ತೆಗೆದುಕೊಂಡು ಟೆಂಡರ್‌ ನೀಡದೆ ವಂಚನೆ ಮಾಡಿದ್ದು, ಮಾತ್ರವಲ್ಲದೆ 1 ಕೋಟಿ ಹಣ ನೀಡುವಂತೆ ಒತ್ತಡ, ಕೊಲೆ ಬೆದರಿಕೆ ಹಾಕಲಾಗಿದೆ ಎಂದು ಡೆತ್​ನೋಟ್​ನಲ್ಲಿ ಉಲ್ಲೇಖವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...