ಬೀದರ್‌ | ಪಶು ವಿವಿಯಲ್ಲಿ ಎಸ್ಸಿ, ಎಸ್ಟಿ ನೌಕರರ ಬಡ್ತಿಗೆ ನಿರಾಕರಣೆ; ಸರ್ಕಾರಕ್ಕೆ ದೂರು

Date:

ಬೀದರ ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನೌಕರರಿಗೆ ನಿಯಮಾನುಸಾರ ಮುಂಬಡ್ತಿ ನೀಡದೆ ಅನ್ಯಾಯ ಎಸಗಲಾಗುತ್ತಿದೆ ಎಂದು ಭೀಮಶಕ್ತಿ ಕಮಿಟಿ ಅಧ್ಯಕ್ಷ ಕಮಲಾಕರ ಹೆಗಡೆ ಆರೋಪಿಸಿ, ಬೀದರ್ ಜಿಲ್ಲಾಧಿಕಾರಿ ಮೂಲಕ‌ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ದೂರು ಸಲ್ಲಿಸಿದ್ದಾರೆ.

“ಪಶು ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಬಿ.ಕೆ. ಪವಿತ್ರ-2 ಪ್ರಕರಣದಲ್ಲಿ ಆದೇಶ ಮತ್ತು ಆಡಳಿತ ಸುಧಾರಣಾ ಇಲಾಖೆಯ ಆದೇಶಗಳನ್ನು ಪಾಲಿಸುತ್ತಿಲ್ಲ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ನೌಕರರಿಗೆ ಹಿಂಬಡ್ತಿ ನೀಡಿ ಅನ್ಯಾಯ ಮಾಡಲಾಗುತ್ತಿದೆ. ಕುಲಪತಿ ಸೇರಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು” ಎಂದು ಒತ್ತಾಯಿಸಿದ್ದಾರೆ.

“ಎಸ್‌ಸಿ ಎಸ್‌ಟಿ ಸಿಬ್ಬಂದಿಗೆ ಬಡ್ತಿ ನೀಡುವ ಸಂಬಂಧ ಸಮಾಜಕಲ್ಯಾಣ ಇಲಾಖೆಯ ಆಯುಕ್ತರು ವಿಶ್ವವಿದ್ಯಾಲಯಕ್ಕೆ ಹಲವು ಪತ್ರ ಬರೆದಿದ್ದಾರೆ. ಆದರೆ, ಕುಲಪತಿ ಡಾ.ಕೆ.ಸಿ.ವೀರಣ್ಣ ಅವರು ನಿರ್ಲಕ್ಷ್ಯ ತೋರಿ 16ಕ್ಕೂ ಹೆಚ್ಚು ನೌಕರರಿಗೆ ಕಾರಣವಿಲ್ಲದೆ ಹಿಂಬಡ್ತಿಗೊಳಿಸುವುದು ಸೇರಿದಂತೆ ಇತರೆ ದೌರ್ಜನ್ಯ ನಡೆಸುತ್ತಿದ್ದಾರೆ. ವಿವಿಯ ಐಎಎಚ್‌ವಿಬಿ ನಿರ್ದೇಶಕ ಡಾ.ರವೀಂದ್ರ ಹೆಗಡೆ ಅವರು ಎಸ್‌ಸಿ ಎಸ್ ಟಿ ಸಿಬ್ಬಂದಿ ಬಡ್ತಿ ಪಡೆಯುವುದನ್ನು ತಡೆಯುವುದಕ್ಕಾಗಿಯೇ ಕುಲಸಚಿವರಿಗೆ ತಪ್ಪು ಮಾಹಿತಿ ನೀಡಿ, ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ” ಎಂದು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅರಣ್ಯ ಇಲಾಖೆಯಿಂದ ಕುಲಸಚಿವರ ಹುದ್ದೆಗೆ ನಿಯೋಜನೆಗೊಂಡಿರುವ ಐಎಫ್‌ಎಸ್ ಅಧಿಕಾರಿ ಎಸ್. ಶಿವಶಂಕರ ಅವರು ಎಸ್‌ಸಿ, ಎಸ್‌ಟಿ ಸಿಬ್ಬಂದಿ ಮುಂಬಡ್ತಿ ಹೊಂದುತ್ತಾರೆಂಬ ಕಾರಣಕ್ಕೆ ವಿಶ್ವವಿದ್ಯಾಲಯದಲ್ಲಿ ಸರ್ಕಾರದ ಆದೇಶ ಜಾರಿಗೊಳಿಸದೆ ಎಸ್‌ಸಿ, ಎಸ್‌ಟಿ ನೌಕರರ ಮೀಸಲಾತಿ ಹಕ್ಕು ಮೊಟಕುಗೊಳಿಸಿ ಅಧಿಕಾರ ದುರ್ಬಳಕೆ ಮಡಿಕೊಂಡಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ರಾಮ ಮಂದಿರ ಕಟ್ಟುವುದರಿಂದ ಉದ್ಯೋಗ, ಶಿಕ್ಷಣ ಸಿಗುತ್ತಾ?: ಮಾವಳ್ಳಿ ಶಂಕರ

ಬಿ.ಕೆ.ಪವಿತ್ರಾ-2 ಪ್ರಕರಣದಲ್ಲಿನ ನ್ಯಾಯಾಲಯದ ಆದೇಶ, ಆಯೋಗದ ಸೂಚನೆ ಮತ್ತು ಸರ್ಕಾರದ ಆದೇಶಗಳನ್ನು ವಿಶ್ವವಿದ್ಯಾಲಯದಲ್ಲಿ ಧಿಕ್ಕರಿಸಲಾಗುತ್ತಿದೆ. ದಲಿತ ಸಿಬ್ಬಂದಿಗೆ ಹುದ್ದೆಗೆ ಅನುಗುಣವಾಗಿ ಕೆಲಸ ನೀಡದೆ ದೌರ್ಜನ್ಯ ಎಸಗಲಾಗುತ್ತಿದೆ. ಬಡ್ತಿ ನೀಡದೆ ಅನ್ಯಾಯ ಮಾಡುತ್ತಿರುವ ವಿವಿ ಕುಲಪತಿ, ಕುಲಸಚಿವರು ಸೇರಿ ಸಂಬಂಧಿಸಿದ ಎಲ್ಲ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ಸರ್ಕಾರದ ಮಟ್ಟದಲ್ಲಿ ತನಿಖೆ ನಡೆಸಬೇಕು. ಅನ್ಯಾಯಕ್ಕೆ ಒಳಗಾಗಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ನೌಕರರಿಗೆ ನ್ಯಾಯ ಒದಗಿಸಬೇಕೆಂದು ಕೋರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...