ಬೀದರ್‌ | ಬರ ಪರಿಹಾರ ಪಡೆಯಲು ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು: ಮುನೀಶ್ ಮೌದ್ಗಿಲ್

Date:

ಸರ್ಕಾರದ ಯೋಜನೆಗಳ ಲಾಭ ಜಿಲ್ಲೆಯ ಹೆಚ್ಚಿನ ಜನರು ಪಡೆಯುವಂತಾಗಬೇಕು ಆದ್ದರಿಂದ ಅಧಿಕಾರಿಗಳು ತಮ್ಮ ಇಲಾಖೆಗೆ ಬರುವ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು ಎಂದು ಸರ್ಕಾರದ ವಿಶೇಷ ಆಯುಕ್ತರು (ಕಂದಾಯ) ಬಿ.ಬಿ.ಎಂ.ಪಿ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ, ಜಿಲ್ಲಾ ಪಂಚಾಯತ ಆಡಳಿತಾಧಿಕಾರಿ ಮುನೀಶ್ ಮೌದ್ಗಿಲ್ ಹೇಳಿದರು.
ಬುಧವಾರ ಬೀದರ ಜಿಲ್ಲಾ ಪಂಚಾಯತ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಹಾಗೂ ತಾಲ್ಲೂಕ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾತನಾಡಿ, “ಜಿಲ್ಲೆಯ ರೈತರು ಬರ ಪರಿಹಾರ ಪಡೆಯಲು ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು, ಎಸ್‌ಎಸ್‌ಎಲ್‌ಸಿ. ಹಾಗೂ ಪಿಯುಸಿ ಪರೀಕ್ಷೆ ಫಲಿತಾಂಶ ವೃದ್ಧಿಗೆ ಕ್ರಮ ವಹಿಸಬೇಕು” ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ಮಾತನಾಡಿ, ಜಿಲ್ಲೆಯ ಎಂಟು ತಾಲ್ಲೂಕಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಲಾಗಿದೆ, ಪ್ರಸ್ತುತ ಜಿಲ್ಲೆಯಲ್ಲಿ ಕುಡಿಯುವ ನೀರಿನ ಹಾಗೂ ಮೇವಿನ ಕೊರತೆ ಇಲ್ಲ ಎಂದರು. ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ವಿವಿಧ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು.
ಈ ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ.ಎಂ, ಬೀದರ ಸಹಾಯಕ ಆಯುಕ್ತ ಲವೀಶ್ ಓರ್ಡಿಯಾ,ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕ ಪ್ರಭಾಕರ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕಿ ಸುರೇಖಾ, ಬಸವಕಲ್ಯಾಣ ಸಹಾಯಕ ಆಯುಕ್ತರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...