ರಾಜ್ಯಪಾಲರ ನಡೆ ಸಂವಿಧಾನದ ಆತ್ಮಕ್ಕೆ ಹೊಂದಿಕೆಯಾಗಿಲ್ಲ : ಈಶ್ವರ ಖಂಡ್ರೆ ವಿಷಾದ

Date:

ವರ್ಷದ ಮೊದಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು, ರಾಜ್ಯ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದ ಭಾಷಣವನ್ನು ಓದಬೇಕೇ ಹೊರತು ತಾವೇ ಸಿದ್ಧಮಾಡಿಕೊಂಡ ಭಾಷಣ ಓದಲು ಅವಕಾಶವಿಲ್ಲ. ರಾಜ್ಯಪಾಲರ ಇಂದಿನ ನಡೆ ಸಂವಿಧಾನದ ಆತ್ಮಕ್ಕೆ ಹೊಂದಿಕೆಯಾಗಿಲ್ಲ ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ ವಿಷಾದ ವ್ಯಕ್ತಪಡಿಸಿದ್ದಾರೆ.

ವರ್ಷದ ಪ್ರಥಮ ಅಧಿವೇಶನದಲ್ಲಿ ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡುವುದು ಸಂಪ್ರದಾಯ ಮಾತ್ರವಲ್ಲ, ಅದು ರಾಜ್ಯಪಾಲರ ಸಂವಿಧಾನಾತ್ಮಕ ಕರ್ತವ್ಯವೂ ಆಗಿದೆ. ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರು ಯಾವುದೇ ರಾಜಕೀಯ ಪಕ್ಷದ ಪ್ರತಿನಿಧಿ ಆಗಿರುವುದಿಲ್ಲ. ಆದರೆ ಇಂದು ಅವರು ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿ ಸಂವಿಧಾನದ ವಿಧಿಗಳಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ರಾಜ್ಯಪಾಲರ ಇಂದಿನ ನಡೆ ಸೂಕ್ತವಲ್ಲʼ ಎಂದು ಬೇಸರ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಹಿಂದೆಂದೂ ಕಂಡು ಕೇಳರಿಯದ ಘಟನೆ ನಡೆದಿದೆ. ಯುಪಿಎ ಸರ್ಕಾರ ಮಹಾತ್ಮಾ ಗಾಂಧೀಜಿ ಅವರ ಹೆಸರಿನಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಕಾಯ್ದೆ ರೂಪದಲ್ಲಿ ಜಾರಿಗೆ ತಂದಿತ್ತು. ಅದರ ಹೆಸರನ್ನು ಬದಲಾಯಿಸುವ ಅಗತ್ಯ ಕೇಂದ್ರ ಸರ್ಕಾರಕ್ಕೆ ಇರಲಿಲ್ಲ. ಆದರೂ ರಾಜಕೀಯ ಲಾಭಕ್ಕಾಗಿ ಮಹಾತ್ಮಾ ಗಾಂಧೀ ಅವರ ಹೆಸರನ್ನೇ ತೆಗೆದಿರುವ ಕ್ರಮದ ವಿರುದ್ಧ ರಾಜ್ಯ ಸರ್ಕಾರ ಅಧಿವೇಶನದಲ್ಲಿ ಚರ್ಚಿಸುವುದು ಹಾಗೂ ಖಂಡಿಸುವುದು ಸರಿಯಾದದ್ದು ಎಂದು ತಮ್ಮ ʼಎಕ್ಸ್‌ʼ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ಕಲಬುರಗಿ | ಟ್ರ್ಯಾಕ್ಟರ್‌ ಚಲಿಸುವಾಗ ರೀಲ್ಸ್‌ : ಚಕ್ರಕ್ಕೆ ಸಿಲುಕಿ ಚಾಲಕ ಸಾವು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...