ಬೀದರ್‌ ಜಿಲ್ಲೆಯ ವಿವಿಧೆಡೆ ಆಲಿಕಲ್ಲು ಸಹಿತ ಜೋರು ಮಳೆ

Date:

ಬೀದರ್‌ ಜಿಲ್ಲೆಯ ಹಲವಡೆ ಮಂಗಳವಾರ ಸಂಜೆ ಗುಡುಗು, ಮಿಂಚು, ಆಲಿಕಲ್ಲು ಸಹಿತ ಬಿರುಸಿನ ಮಳೆ ಸುರಿಯಿತು.

ಮಧ್ಯಾಹ್ನದಿಂದ ಮೋಡ ಕವಿದ ವಾತಾವರಣ ಇತ್ತು. ಸಂಜೆ 7 ಗಂಟೆ ನಂತರ ಎಲ್ಲೆಡೆ ಮಳೆ ತಣ್ಣನೆಯ ಗಾಳಿ ಬೀಸಿತು. ಬಳಿಕ ಗುಡುಗು, ಮಿಂಚಿನೊಂದಿಗೆ ಆಲಿಕಲ್ಲು ಸಹಿತ ಮಳೆ ಆರ್ಭಟ ಜೋರಾಗಿತ್ತು.

ಬೀದರ್‌ ನಗರದಲ್ಲಿ ಒಂದು ಗಂಟೆಗೂ ಅಧಿಕ ಕಾಲ ಬೆಂಬಿಡದೆ ಮಳೆಯಾಗಿದೆ, ಇನ್ನು ಚಿಟಗುಪ್ಪ, ಹುಮನಾಬಾದ್‌, ಭಾಲ್ಕಿ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ಆಲಿಕಲ್ಲು ಮಳೆಯಾಗಿರುವ ಬಗ್ಗೆ ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾನುವಾರ ಸಂಜೆ ಜಿಲ್ಲೆಯ ವಿವಿಧೆಡೆ ಸಾಧಾರಣ ಮಳೆಯಾಗಿತು, ಸೋಮವಾರ ಕೆಲವೆಡೆ ಅಲ್ಪ ಪ್ರಮಾಣದಲ್ಲಿ ಮಳೆ ಸುರಿಯಿತು. ಮೂರನೇ ದಿನ ಮಂಗಳವಾರ ಆಲಿಕಲ್ಲು ಸಹಿತ ಮಳೆ ಜೋರಾಗಿದೆ. ಯುಗಾದಿ ಬಳಿಕ ಆರಂಭವಾಗುತ್ತಿದ್ದ ಮಳೆ ಈ ಬಾರಿ ಹಬ್ಬಕ್ಕೂ ಮುನ್ನವೇ ಬರುತ್ತಿದೆ. ಅದು ಕೂಡ ಆಲಿಕಲ್ಲು ಸುರಿಸಿ ಅಬ್ಬರಿಸುತ್ತುದೆ.

ಮುಂಗಾರು ಬೆಳೆಗಳಾದ ಬಿಳಿ ಜೋಳ, ಕುಸುಬೆ, ಕಡಲೆ ಸೇರಿದಂತೆ ಹಲವು ತೋಟಗಾರಿಕೆ ಬೆಳೆಗಳಿವೆ. ಕಟಾವಿನ ಹಂತದಲ್ಲಿರುವ ಬೆಳೆ, ಕಲ್ಲಂಗಡಿ, ಮಾವಿನ ಮರ ಇತರೆ ಬೆಳೆಗಳು ಆಲಿಕಲ್ಲು ಮಳೆಯಿಂದ ಹಾನಿಯುಂಟಾಗುವ ಸಾಧ್ಯತೆ ಇದೆ. ಇದರಿಂದ ರೈತಾಪಿ ವರ್ಗ ಆರ್ಥಿಕ ಸಂಕಷ್ಟಕ್ಕೆ ಸಿಲುಕುವಂತಾಗಿದೆ.

ಭಾಲ್ಕಿಯಲ್ಲಿ ಸುರಿದ ಆಲಿಕಲ್ಲು ಸಹಿತ ಮಳೆ

ಇದನ್ನೂ ಓದಿ : ಬೀದರ್‌ | ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ : 94 ಪರೀಕ್ಷಾ ಕೇಂದ್ರ; ವೆಬ್‌ಕಾಸ್ಟಿಂಗ್‌ ಕಣ್ಗಾವಲು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...