ಬೀದರ್‌ | ಶಿಥಿಲಗೊಂಡ ಅಂಚೆ ಕಚೇರಿ; ನೂತನ ಕಟ್ಟಡಕ್ಕೆ ಕನ್ನಡ ಸೇನೆ ಆಗ್ರಹ

Date:

ಹುಮನಾಬಾದ್‌ ತಾಲೂಕಿನ ಹಳ್ಳಿಖೇಡ(ಬಿ) ಪಟ್ಟಣದಲ್ಲಿರುವ ಅಂಚೆ ಕಚೇರಿ ಶಿಥಿಲಾವಸ್ಥೆಗೆ ತಲುಪಿದ್ದು, ಕೂಡಲೇ ನೂತನ ಕಟ್ಟಡ ನಿರ್ಮಿಸುವಂತೆ ಕನ್ನಡ ಸೇನೆ ಕರ್ನಾಟಕ ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಹುಮನಾಬಾದ್‌ ತಹಶೀಲ್ದಾರ್‌ ಅವರಿಗೆ ಸಲ್ಲಿಸಿದ್ದಾರೆ.

“ಬೀದರ್‌ ಜಿಲ್ಲೆಯ ಹುಮನಾಬಾದ್‌ ತಾಲೂಕಿನ ಹಳ್ಳಿಖೇಡ(ಬಿ) ಪಟ್ಟಣವು ಪುರಸಭೆ ಹಾಗೂ ಹೋಬಳಿ  ಕೇಂದ್ರವಾಗಿದ್ದು, ಜನಸಂಖ್ಯೆ ಹೆಚ್ಚಾಗಿದೆ. ಹತ್ತಾರು ವರ್ಷಗಳಿಂದ ಪಟ್ಟಣದಲ್ಲಿರುವ ಅಂಚೆ ಕಚೇರಿ ಕಟ್ಟಡ ಸಂಪೂರ್ಣ ಶಿಥಿಲಗೊಂಡಿದೆ. ಬೀಳುವ ಹಂತದಲ್ಲಿರುವ ಕಟ್ಟಡದಿಂದ ಸಾರ್ವಜನಿಕರು, ಅಧಿಕಾರಿಗಳಿಗೆ ಆತಂಕ ಉಂಟಾಗಿದೆ” ಎಂದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ನೂತನ ಅಂಚೆ ಕಚೇರಿ ಕಟ್ಟಡ ನಿರ್ಮಿಸಲು ಕ್ರಮಕೈಗೊಳ್ಳಬೇಕು. ಇಲ್ಲವಾದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ ಅಧಿವೇಶನ | ಎರಡು ವಿಧೇಯಕ, ಒಂದು ಚುನಾವಣೆ ಪ್ರಸ್ತಾವ ಅಂಗೀಕಾರ

ಈ ಸಂದರ್ಭದಲ್ಲಿ ಕನ್ನಡ ಸೇನೆ ಜಿಲ್ಲಾಧ್ಯಕ್ಷ ಸುಭಾಷ ಕೆನಾಡೆ, ರಾಜ್ಯ ಉಪಾಧ್ಯಕ್ಷ ಡಾ. ರವಿ ಸ್ವಾಮಿ, ಹುಮನಾಬಾದ್‌ ತಾಲೂಕಾಧ್ಯಕ್ಷ ಮಹೆಬೂಬ್‌, ಜಿಲ್ಲಾ ಉಪಾಧ್ಯಕ್ಷ ದತ್ತು ಲದ್ದೆ ಸೇರಿದಂತೆ ಸೋಮನಾಥ ಮಡಿವಾಳ, ಸೋಮು ಸ್ವಾಮಿ, ನಾಗನಾಥ ಗಾದಾ, ಇದ್ದರು.

ವರದಿ ಮಾಹಿತಿ : ಭೀಮರೆಡ್ಡಿ ಸಿಂಧನಕೇರಾ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...