ಬೀದರ್‌ | ಡಿಸಿಸಿ ಬ್ಯಾಂಕ್‌ ಮೇಲೆ ಐಟಿ ದಾಳಿ

Date:

ರಾಜ್ಯ ಸರ್ಕಾರದ ಅರಣ್ಯ ಸಚಿವ, ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ್ ಖಂಡ್ರೆ  ಅವರ ಸಹೋದರ ಅಮರ ಖಂಡ್ರೆ ಅಧ್ಯಕ್ಷರಾಗಿರುವ ಬೀದರ್ ಡಿಸಿಸಿ ಬ್ಯಾಂಕ್ ಮೇಲೆ ಐಟಿ ಅಧಿಕಾರಿಗಳು ಶುಕ್ರವಾರ ದಾಳಿ ಮಾಡಿದ್ದಾರೆ.

ಸರಕಾರದ ನಿಯಮಗಳನ್ನು ಗಾಳಿಗೆ ತೂರಿ ರೈತರಿಗೆ ಲೋನ್ ಕೊಡುತ್ತಿದ್ದಾರೆಂಬ ಆರೋಪದ ಮೇಲೆ ದಾಳಿ ನಡೆದಿದೆ ಎನ್ನಲಾಗುತ್ತಿದೆ. ಬೀದರ್ ನಗರದ ಹೈದ್ರಾಬಾದ್ ರಸ್ತೆಯಲ್ಲಿರುವ ಡಿಸಿಸಿ ಬ್ಯಾಂಕ್ ಮೇಲೆ 15ಕ್ಕೂ ಅಧಿಕ ಐಟಿ ಅಧಿಕಾರಿಗಳ ತಂಡ ದಾಳಿ ಮಾಡಿದ್ದು, ಬ್ಯಾಂಕ್ ಕಡತಗಳು ಪರಿಶೀಲನೆ ನಡೆಸಿದ್ದಾರೆ.

ತೆಲಂಗಾಣ, ಯಾದಗಿರಿ ಕಲಬುರಗಿಯಿಂದ ಬಂದಿರುವ ಐಟಿ ಅಧಿಕಾರಿಗಳು ಬ್ಯಾಂಕ್​ನ ಅಕೌಂಟ್ಸ್​ಗಳನ್ನು ಪರಿಶೀನಲನೆ ಮಾಡುತ್ತಿದ್ದಾರೆ. ಬ್ಯಾಂಕ್‌ ಸಿಬ್ಬಂದಿಯ ಮೊಬೈಲ್​ಗಳನ್ನು ಸ್ವಿಚ್‌ಆಫ್​ ಮಾಡಿಸಿ ಕೂಲಂಕುಶವಾಗಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಎದೆಯ ಮೇಲೆ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್‌ ಖರ್ಗೆ ಟ್ಯಾಟೂ

ಕಳೆದ ಅಕ್ಟೋಬರ್‌ ತಿಂಗಳಲ್ಲಿ ನಡೆದ ಬ್ಯಾಂಕ್ ಚುನಾವಣೆಯಲ್ಲಿ ಈಶ್ವರ ಖಂಡ್ರೆ ಸಹೋದರ ಅಮರ್ ಖಂಡ್ರೆ ಅವರು ಗೆಲುವು ಸಾಧಿಸಿ ಬ್ಯಾಂಕ್‌ ಅಧ್ಯಕ್ಷರಾಗಿದ್ದಾರೆ. ಈಗ ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಈಶ್ವರ ಖಂಡ್ರೆ ಪುತ್ರ ಸಾಗರ್‌ ಖಂಡ್ರೆ ಚುನಾವಣಾ ಕಣದಲ್ಲಿದ್ದಾರೆ. ಈ ಹೊತ್ತಲ್ಲಿ ಬ್ಯಾಂಕ್‌ ಮೇಲೆ ಐಟಿ ದಾಳಿ ರಾಜಕೀಯ ಪ್ರೇರಿತವೇ ಎಂಬ ಕುರಿತು ಚರ್ಚೆ ಕೇಳಿ ಬರುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...