ಬೀದರ್‌ | ಜೆಜೆಎಂ ಅನುದಾನ ದುರ್ಬಳಕೆ ಆರೋಪ; ತನಿಖೆ ಬಿಎಸ್‌ಪಿ ಆಗ್ರಹ

Date:

ಬಸವಕಲ್ಯಾಣ ತಾಲ್ಲೂಕಿನ ಇಸ್ಲಾಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಾಗೂ ಇತರೆ ಗ್ರಾಮಗಳಲ್ಲಿ ಜೆಜೆಎಂ ಕಾಮಗಾರಿ ಕಳಪೆ ಮಟ್ಟದಲ್ಲಿ ನಡೆದಿದ್ದು, ಈ ಬಗ್ಗೆ ತನಿಖೆ ಕೈಗೊಳ್ಳಬೇಕು ಎಂದು ಬಹುಜನ ಸಮಾಜ ಪಕ್ಷದ ಬಸವಕಲ್ಯಾಣ ತಾಲೂಕು ಘಟಕ ಆಗ್ರಹಿಸಿದೆ.

ಬಿಎಸ್‌ಪಿ ತಾಲೂಕು ಘಟಕದ ಪದಾಧಿಕಾರಿಗಳು ಬಸವಕಲ್ಯಾಣ ತಾಲೂಕು ಪಂಚಾಯಿತಿ ಕಚೇರಿ ಎದುರು ಧರಣಿ ನಡೆಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವರಿಗೆ ಬರೆದ ಮನವಿ ಪತ್ರವನ್ನು ತಾ.ಪಂ. ಇಒ ಮಹಾದೇವ ಬಾಬುಳಗಿ ಅವರಿಗೆ ಸಲ್ಲಿಸಿದರು.

“ತಾಲೂಕಿನ ಮಂಗಳೂರು, ಶಿವರಾಮ ತಾಂಡಾ, ಖೇರ್ಡಾ(ಬಿ), ಹಿರೇನಾಗಾಂವ, ನಾರಾಯಣಪುರ, ಕಿಟ್ಟಾ, ಗುತ್ತಿ ಗ್ರಾಮಗಳಲ್ಲಿನ ಜೆಜೆಎಂ ಕಾಮಗಾರಿ ಕುಂಟುತ್ತ ಸಾಗಿದೆ. ಆದ್ದರಿಂದ ಸಂಬಂಧಿತ ಜೆಇ ಮೇಲೆ ಕ್ರಮ ತೆಗೆದುಕೊಳ್ಳಬೇಕು. ಕೆಲಸ ಪೂರ್ಣಗೊಳ್ಳದಿದ್ದರೂ ಈ ಕಾರ್ಯಕ್ಕೆ ಕೆಲ ಪಂಚಾಯಿತಿ ಅಧಿಕಾರಿಗಳು ಮತ್ತು ಸದಸ್ಯರು ಸಹಕಾರ ನೀಡಿದ್ದಾರೆ. ಅವರ ಮೇಲೆ ಕ್ರಮ ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತಾಲೂಕಿನಲ್ಲಿ ಶುದ್ಧ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು, ಕಿಟ್ಟಾ ಗ್ರಾಮದ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶೌಚಾಲಯ, ಕಂಪೌಂಡ್ ಅಡುಗೆ ಕೋಣೆ ಗಾರ್ಡನ್‌ ನಿರ್ಮಿಸಬೇಕು. ತಾಲೂಕು ಪಂಚಾಯತ್‌ ಕಚೇರಿಯಲ್ಲಿ ಶೌಚಾಲಯ ನಿರ್ಮಿಸುವಂತೆ” ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಸ್ಪೃಶ್ಯತೆ, ಮೌಢ್ಯ, ಜಾತೀಯತೆ ತೆೊಲಗಿಸಿ ಬಸವಣ್ಣನಿಗೆ ನಿಜ ಗೌರವ ಸಲ್ಲಿಸೋಣ

ಈ ಸಂದರ್ಭದಲ್ಲಿ ಬಹುಜನ ಸಮಾಜ ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಶಂಕರ ಫುಲೆ, ಜಿಲ್ಲಾ ಉಪಾಧ್ಯಕ್ಷ ಅಶೋಕ ಮಂಠಾಳಕರ್, ಮಹಾದೇವ ಗಾಯಕವಾಡ, ದತ್ತು ಸುಂಠಾಣೆ, ಚೇತನ ಕಾಡೆ, ವಿಷ್ಣುಕಾಂತ ಸೂರ್ಯವಂಶಿ, ಅಶೋಕ ಶಿಂಧೆ, ರೋಷನ ಜವಾಹರ, ಸಚಿನ್‌ ಕಾಂಬಳೆ, ಸಂದೀಪ ಮತ್ತಿತರರು ಉಪಸ್ಥಿತರಿದ್ದರು

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...