ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯಡಿ ಇದೇ ಫೆಬ್ರವರಿ 22ರಂದು ಬೀದರ ನಗರದ ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾ ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತಿದೆ.
ಈ ಉದ್ಯೋಗ ಮೇಳದಲ್ಲಿ ರಾಜ್ಯ ಮತ್ತು ಅಂತರರಾಜ್ಯ ವಿವಿಧ ಭಾಗದಿಂದ ಉದ್ಯೋಗದಾತ ಕಂಪನಿಗಳು ಆಗಮಿಸುತ್ತಿರುವುದರಿಂದ ಜಿಲ್ಲೆಯ ನಿರುದ್ಯೋಗ ಯುವಕ-ಯುವತಿಯರು ತಮ್ಮ ಸ್ವವಿವರ ಮಾಹಿತಿ, ವಿದ್ಯಾರ್ಹತೆ ದಾಖಲೆ, ಆಧಾರ್ ಕಾರ್ಡ್ ಹಾಗೂ ಬಿಪಿಎಲ್ ಪಡಿತರ ಚೀಟಿಯೊಂದಿಗೆ ಸದರಿ ಉದ್ಯೋಗ ಮೇಳದಲ್ಲಿ ಭಾಗವಹಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಸಂಜೀವಿನಿ ಎನ್‌ಆರ್‌ಎಲ್‌ಎಂ ಶಾಖೆಗೆ ಸಂಪರ್ಕಿಸಲು ಬೀದರ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ : ರೋಹಿತ್ ವೇಮುಲ ಕಾಯ್ದೆಯನ್ನು ಈ ಸಲದ ಬಜೆಟ್ ಅಧಿವೇಶನದಲ್ಲಿ ಘೋಷಿಸಲು ಆಗ್ರಹ





