ಬೀದರ್ ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆವರಣದಲ್ಲಿ (ಸರ್ಕಾರಿ ಐಟಿಐ ಕಾಲೇಜು) ಮಾ.16ರಂದು ಬೆಳಿಗ್ಗೆ 10.30 ಗಂಟೆಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಉದ್ಯೋಗ ಮೇಳದಲ್ಲಿ ಪ್ರಮುಖ ಕಂಪನಿಗಳಾದ HRH & NEXT EduBridge ಭಾಗವಹಿಸಲಿವೆ. ಮೇಳದಲ್ಲಿ ಬಿಪಿಓ ಮತ್ತು ಐಟಿ ಕ್ಷೇತ್ರದ ಉದ್ಯೋಗ ಅವಕಾಶಗಳು ಲಭ್ಯವಿದ್ದು, 10ನೇ ತರಗತಿಯಿಂದ ಯಾವುದೇ ಪದವಿವರೆಗೆ ವ್ಯಾಸಂಗ ಪೂರೈಸಿದ ವಿದ್ಯಾರ್ಥಿಗಳು ಭಾಗವಹಿಸಬಹುದು.
ಉದ್ಯೋಗಾವಕಾಶಗಳನ್ನು ಹುಡುಕುತ್ತಿರುವ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಇದು ಉತ್ತಮ ಅವಕಾಶವಾಗಿದೆ ಎಂದು ತಿಳಿಸಿದರು.
ಹೆಚ್ಚಿನ ವಿವರಗಳಿಗಾಗಿ ಮೊಬೈಲ್ ಸಂಖ್ಯೆ: 9916364114, 9505478126 ನಂಬಗಳಿಗೆ ಸಂಪರ್ಕಿಸಬಹುದಾಗಿದೆ ಅವರು ತಿಳಿಸಿದ್ದಾರೆ.
ಇದನ್ನೂ ಓದಿ : ಬೀದರ್ | ಜನವಿರೋಧಕ್ಕೆ ಮಣಿದ ಸಮಾಜ ಕಲ್ಯಾಣ ಇಲಾಖೆ : ಅಂಬೇಡ್ಕರ್ ರಾಷ್ಟ್ರೀಯ ವಿಚಾರ ಸಂಕಿರಣ ಮುಂದೂಡಿಕೆ





