ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

Date:

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ ಮತ್ತು ವಿನಿಮಯ ಕೇಂದ್ರದ ಸಹಯೋಗದಲ್ಲಿ ಮಾ.25ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 3ರವರೆಗೆ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.

ಮೇಳದಲ್ಲಿ ಸ್ಟೋವ್ ಕ್ರಾಫ್ಟ್, ಟಿವಿಎಸ್, ಫಾಕ್ಸ್‍ಕಾನ್, ಲ್ಯುಮಾಕ್ಸ್, ಸೋನಾ ಸ್ಪೀಡ್, ಎಎಯುಎಂ, ಶಾಹ ಹುಂಡಾಯಿ, ಮಾರುತಿ ಸುಜುಕಿ, ಆದಿತ್ಯ ಹೆಲ್ತ್ ಇನ್ಶೂರೆನ್ಸ್, ಮೆಡ್ ಪ್ಲಸ್, ಶ್ರೀ ಸಾಯಿ ಅರ್ಥ್ ಮೂವರ್ಸ್, ಬಜಾಜ್, ಸಿಂದೋಲ್ ಆಟೊಮೋಟಿವ್ ಮೋಟಾರ್ಸ್, ಆರ್‍ಬಿಎಲ್ ಬ್ಯಾಂಕ್, ಚೋಲಾ ಮಂಗಲಮ್, ಎಚ್‍ಡಿಎಫ್‍ಸಿ ಬ್ಯಾಂಕ್, ಮ್ಯಾಕ್ಸ್ ಮಾಲ್, ಮೋರ್ ಮಾಲ್, ಸ್ವತಂತ್ರ ಫೈನಾನ್ಸ್, ಆಟೊಮೊಟಿವ್ ಎಕ್ಸ್‌ಲೆಸ್, ಏಷಿಯನ್ ಪೇಂಟ್ ಹಾಗೂ ಇತರ ಕಂಪನಿಗಳು ಪಾಲ್ಗೊಳ್ಳಲಿವೆ ಎಂದು ಕಾಲೇಜು ಪ್ರಾಚಾರ್ಯ ಶಂಕರ ಗಣಗೊಂಡ ತಿಳಿಸಿದ್ದಾರೆ.

ಐದು ಸಾವಿರಕ್ಕೂ ಅಧಿಕ ಉದ್ಯೋಗ ಅವಕಾಶಗಳು ಇವೆ. ಎಸ್‍ಎಸ್‍ಎಲ್‍ಸಿ ಪಾಸ್/ಫೇಲ್, ಪಿಯುಸಿ, ಡಿಪ್ಲೊಮಾ ಹಾಗೂ ಯಾವುದೇ ಪದವಿ ಪಡೆದ 18 ರಿಂದ 40 ವರ್ಷದ ಒಳಗಿನ ಯುವಕ-ಯುವತಿಯರು ತಮ್ಮ ಶೈಕ್ಷಣಿಕ ದಾಖಲಾತಿ ಹಾಗೂ ಆಧಾರ್ ಕಾರ್ಡ್‍ನೊಂದಿಗೆ ಮೇಳದಲ್ಲಿ ಸಂದರ್ಶನಕ್ಕೆ ಹಾಜರಾಗಬಹುದು ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ಬೀದರ್‌ | ʼಜಲ ಜೀವನʼಕ್ಕೆ ಗ್ರಹಣ, ಹನಿ ನೀರಿಗೂ ತತ್ವಾರ; ಬೇಕಿದೆ ದೂರಗಾಮಿ ಪರಿಹಾರ-ಭಾಗ-1

ಮೇಳದ ಕುರಿತು ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 6360464996 / 9448624880 (ಶಂಕರ ಗಣಗೊಂಡ) ಅಥವಾ 9449619203 (ಡಾ.ನಾಗರಾಜ ಕುಲಕರ್ಣಿ)ಅವರನ್ನು ಸಂಪರ್ಕಿಸಬಹುದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...

ಔರಾದ್‌ | ರಸ್ತೆ ದುರಸ್ತಿ ಕಾಮಗಾರಿ ಕಳಪೆ : ತನಿಖೆಗೆ ಆಗ್ರಹ

ಔರಾದ್‌ ತಾಲೂಕಿನ ಮಮದಾಪುರ ಗ್ರಾಮದಿಂದ ಅಲ್ಲಾಪುರ ಗ್ರಾಮದ ಮಾರ್ಗವಾಗಿ ಮಹಾರಾಷ್ಟ್ರದ ಕುನಮಾರಪಳ್ಳಿ...