ಕಮಲನಗರ | ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ : ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

Date:

ಬೀದರ್-ಕಮಲನಗರ ರಾಷ್ಟ್ರೀಯ ಹೆದ್ದಾರಿ-50ರ ಸಾವಳಿ ಗ್ರಾಮ ಸಮೀಪ ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಕಮಲನಗರ ತಾಲೂಕಿನ ಬಸವನಾಳ ಗ್ರಾಮದ ಭಾನುದಾಸ ಮನ್ಮಥಪ್ಪಾ ಕಾರಬಾರಿ (68) ಮೃತರು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಜ.24ರಂದು ಸಂಜೆ 7ಗಂಟೆ ಸುಮಾರಿಗೆ ಬಸವನಾಳ ಗ್ರಾಮದ ರಾಜಕುಮಾರ ಸಂಗಶೆಟ್ಟಿ ಎಂಬುವವರ ದ್ವಿಚಕ್ರ ವಾಹನ ಮೇಲೆ ಹಿಂದುಗಡೆ ಕುಳಿತು ಹೊಳಸಮುದ್ರ ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡ ಭಾನುದಾಸ ಅವರನ್ನು ಭಾಲ್ಕಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಬ್ರಿಮ್ಸ್‌ಗೆ ದಾಖಲಿಸಲಾಗಿತ್ತು. ಬಳಿಕ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಸ್ಪಂದಿಸದೆ ಜ.27ರಂದು ಸಂಜೆ ಮೃತಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಮಲನಗರ-ಬೀದರ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದೆ. ಸಾವಳಿ ಗ್ರಾಮದ ಸಮೀಪದ ರಸ್ತೆ ಮೇಲೆ ಬ್ಯಾರಿಕೇಡ್‌ಗಳಿಲ್ಲ. ಸವಾರರು ಬೇಕಾಬಿಟ್ಟಿಯಾಗಿ ಅತೀ ವೇಗದಿಂದ ವಾಹನ ಚಲಾಯಿಸುತ್ತಿದ್ದಾರೆ. ಕೂಡಲೇ ಸಾವಳಿ ಗ್ರಾಮದ ಬಳಿ ಬ್ಯಾರಿಕೇಡ್‌ ಅಳವಡಿಸಬೇಕೆಂದು ಬಸನಾಳ ಗ್ರಾಮಸ್ಥ ಸದಾನಂದ ಪಾಟೀಲ್‌ ಒತ್ತಾಯಿಸಿದ್ದಾರೆ.

ಈ ಸಂಬಂಧ ಕಮಲನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ತನಿಖೆ ಮುಂದುವರೆದಿದೆ.

ಇದನ್ನೂ ಓದಿ : ಅಜಿತ್ ಪವಾರ್: ಮೋದಿ ಸರ್ಕಾರದ ಒತ್ತಡಕ್ಕೆ ಮಣಿದು ಎನ್‌ಸಿಪಿ ಇಬ್ಭಾಗಿಸಿದ್ದ ‘ಮಹಾ’ ನಾಯಕ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...