ಬೀದರ್‌ | ಎರಡು ಬಾರಿ ಮೋದಿ ಅಲೆಯಲ್ಲಿ ಗೆದ್ದ ಖೂಬಾ ಮತ್ತೆ ಅದೇ ಕನಸು ಕಾಣುತ್ತಿದ್ದಾರೆ : ಸಾಗರ್‌ ಖಂಡ್ರೆ

Date:

ಜನರ ಸಮಸ್ಯೆ ಆಲಿಸುವಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ವಿಫಲರಾಗಿದ್ದಾರೆ. ಎರಡು ಸಲ ಮೋದಿ ನಾಮಬಲದಿಂದ ಗೆಲುವು ಸಾಧಿಸಿದರೂ ಖೂಬಾ ಜನರಿಗೆ ಸ್ಪಂದಿಸಲಿಲ್ಲ. ಈ ಬಾರಿಯೂ ಜನರಿಗೆ ಭೇಟಿ ಮಾಡುವ ಅವಶ್ಯಕತೆಯಿಲ್ಲ. ಕೆಲಸ ಮಾಡುವ ಅವಶ್ಯಕತೆಯಿಲ್ಲ. ಪ್ರಧಾನಿ ಮೋದಿ ಹೆಸರಿನ ಮೇಲೆ ಮತ್ತೆ ಗೆಲುವು ಸಾಧಿಸುತ್ತೇನೆಂದು ಕನಸು ಕಾಣುತ್ತಿದ್ದಾರೆ ಎಂದು ಕಾಂಗ್ರೆಸ್‌ ಅಭ್ಯರ್ಥಿ ಸಾಗರ್‌ ಖಂಡ್ರೆ ಕುಟುಕಿದರು.

ಶನಿವಾರ ಔರಾದ ತಾಲೂಕಿನ ಬೆಳಕುಣ (ಚೌ), ಹೆಡಗಾಪೂರ, ಸಂತಪೂರ, ಶೆಂಬೆಳ್ಳಿ, ಲಾಧಾ, ಧೂಪತಮಾಹಾಗಾಂವ, ಕೌಠಾ (ಬಿ) ಗ್ರಾಮ ಪಂಚಾಯತ್ ಗ್ರಾಮಗಳಲ್ಲಿ ಮತಯಾಚನೆ ವೇಳೆ ಮಾತನಾಡಿ, “ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಅವರು ಬೀದರ ಜಿಲ್ಲೆಗೆ ಯಾವುದೇ ಅಭಿವೃದ್ಧಿ ಕಾರ್ಯ ಮಾಡಿಲ್ಲ. ಅವರ ಸಾಧನೆ ಶೂನ್ಯವಾಗಿದೆ. ಅವರನ್ನು ಜನರೇ ತಿರಸ್ಕರಿಸಲು ಕಂಕಣಬದ್ಧರಾಗಿದ್ದಾರೆ, ಸ್ವಪಕ್ಷದ ಶಾಸಕರೇ ಅವರನ್ನು ವಿರೋಧಿಸುತ್ತಿದ್ದಾರೆ” ಎಂದರು.

“ನಾನು ಕಾನೂನು ಪದವಿ ಪಡೆದು ಸುಪ್ರಿಂಕೋರ್ಟ್‌ನಲ್ಲಿ ಕಾರ್ಯನಿರ್ವಹಿಸಿದ್ದೇನೆ. ನನಗೆ ಕಾನೂನಿನ ಜ್ಞಾನವಿದೆ. ಇಲ್ಲಿಯ ಯುವಕರಿಗೆ ಉದ್ಯೋಗವಿಲ್ಲ. ಈ ಬಾರಿ ನನ್ನನ್ನು ಸಂಸದನ್ನಾಗಿ ಆಯ್ಕೆ ಮಾಡಿದರೆ ಜಿಲ್ಲೆಯಲ್ಲಿ ಐಟಿ ಕಂಪನಿ, ಕಾರ್ಖಾನೆ ಸ್ಥಾಪಿಸಿ ನಿರುದ್ಯೋಗ ಯುವಕರಿಗೆ ಕೆಲಸ ಕೊಡಿಸುವೆ. ದಿನದ 24 ಗಂಟೆಯೂ ಜನರ ಸೇವೆಗಾಗಿ ಸಿದ್ಧನಿದ್ದೇನೆ. ಔರಾದ್ ತಾಲೂಕಿನ ನೀರಿನ ಸಮಸ್ಯೆ, ರೈತರ ಸಮಸ್ಯೆಗಳು ಬಗೆಹರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ” ಎಂದು ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಮೋದಿ-ಅಮಿತ್ ಶಾ ಬಳಿ ಮನುಷ್ಯರನ್ನು ಶುದ್ಧಗೊಳಿಸುವ ವಾಷಿಂಗ್ ಮಷೀನ್ ಇದೆ : ಮಲ್ಲಿಕಾರ್ಜುನ ಖರ್ಗೆ

ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ಡಾ. ಭೀಮಸೇನರಾವ ಶಿಂಧೆ, ಗಂಗಾಧರ ಮಜಿಗೆ, ಮಲ್ಲಿಕಾರ್ಜುನ ಪಾಟೀಲ್, ಹಣಮಂತರಾವ ಚವ್ಹಾಣ, ರಾಜಕುಮಾರ ಹಲಬರ್ಗೆ, ಸುಧಾಕಾರ ಕೊಳ್ಳುರ್, ಎಂ.ಡಿ ನಯೂಮ್, ಕರಬಸು, ದೇವಿದಾಸ, ಮಹೇಶ, ರವಿ ಮಾಳಗೆ, ಖದೀರ್, ಪಾಂಡು ರೆಡ್ಡಿ, ಸೈಯದ್ ಶರಿಫೋದ್ಧಿನ್, ಧೋಂಡಿಬಾ, ಶೇಷರಾವ, ಭೀಮರಾವ ಶೆಟಕಾರ ಸೇರಿದಂತೆ ಅನೇಕ ಕಾರ್ಯಕರ್ತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...