ಬೀದರ್‌ | ಭಾಲ್ಕಿಯಲ್ಲಿ ವಕೀಲೆ ಬಂಧನ ಪ್ರಕರಣ; ಜಿಲ್ಲಾಡಳಿತ ವಿರುದ್ಧ ಕಪ್ಪು ಬಟ್ಟೆ ಧರಿಸಿ ಏಕಾಂಗಿ ಪ್ರತಿಭಟನೆ

Date:

ಭಾಲ್ಕಿ ಪಟ್ಟಣದ ಸರ್ವೇ ನಂ. 180 ಜಾಗ ಕಾನೂನು ಬಾಹಿರ ತಡರಾತ್ರಿ ತೆರವುಗೊಳಿಸಿ ವಯೋವೃದ್ಧ ಶಕುಂತಲಾ ಬಳತೆ ಮತ್ತು ಅವರ ಸೊಸೆ ನ್ಯಾಯವಾದಿ ಧನಲಕ್ಷ್ಮಿ ಬಳತೆ ಅವರನ್ನು ತಡರಾತ್ರಿ ಬಂಧಿಸಿ ಖಾಸಗಿ ವಾಹನದಲ್ಲಿ ಕರೆದ್ಯೊಯ್ದು ಮಾನಸಿಕ ಹಿಂಸೆ ಕೊಟ್ಟ ಅಧಿಕಾರಿಗಳನ್ನು ಕೂಡಲೇ ಅಮಾನತ್ತುಗೊಳಿಸಿ ತನಿಖೆ ಕೈಗೊಳ್ಳಬೇಕೆಂದು ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತ ಓಂಪ್ರಕಾಶ ರೊಟ್ಟೆ ವಿಭಿನ್ನ ರೀತಿಯಲ್ಲಿ ಏಕಾಂಗಿ ಪ್ರತಿಭಟನೆ ನಡೆಸಿದರು.

ಬೀದರ್‌ ನಗರದ ಬಸವೇಶ್ವರ ವೃತ್ತದಿಂದ ಭಗತ್‌ ಸಿಂಗ್‌ ವೃತ್ತ, ಡಾ. ಬಿ.ಆರ್.‌ ಅಂಬೇಡ್ಕರ್‌ ವೃತ್ತ, ಶಿವಾಜಿ ವೃತ್ತದ ಮಾರ್ಗವಾಗಿ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಕಪ್ಪು ಬಟ್ಟೆ ಧರಿಸಿ ಜಿಲ್ಲಾಡಳಿತ ಹಾಗೂ ಉಸ್ತುವಾರಿ ಸಚಿವರ ವಿರುದ್ಧ ಏಕಾಂಗಿಯಾಗಿ ಪ್ರತಿರೋಧ ವ್ಯಕ್ತಪಡಿಸಿ ಅವರು ಮುಖ್ಯಮಂತ್ರಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅವರಿಗೆ ಸಲ್ಲಿಸಿದರು.

“ಬೀದರ್‌ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆಯವರ ಮನೆ ಸಮೀಪದ ಸರ್ವೇ ನಂ.180 ಜಮೀನಿನ ವಿವಾದ ಭಾಲ್ಕಿ ಕೋರ್ಟಿನಲ್ಲಿ ಮೊಕದಮ್ಮೆಯಿದ್ದು, ಇದಕ್ಕೆ ತಡೆಯಾಜ್ಞೆ ಇದೆ. ಆದರೆ ಭಾಲ್ಕಿ ತಾಲೂಕು ಆಡಳಿತ ಕಾನೂನು ಗಾಳಿಗೆ ತೂರಿ ತಮ್ಮ ನೇತ್ರತ್ವದಲ್ಲಿ ಸದರಿ ಜಾಗ ತೆರವುಗೊಳಿಸಿ ಖಂಡನೀಯವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಧರ್ಮದ ಮಾರಾಟಗಾರರ ಎಡಬಿಡಂಗಿತನದ ಅನಾವರಣ: ಸಾಣೇಹಳ್ಳಿ ಶ್ರೀಗಳ ಲೇಖನ

“ಬಸವಾದಿ ಶರಣರ ಕಲ್ಯಾಣ ನೆಲದಲ್ಲಿ ಮಹಿಳೆಯರಿಗೆ ಅವಮಾನಿಸಿದ್ದು ತೀರಾ ಖಂಡನೀಯ. ಜನ ಪ್ರತಿನಿಧಿಗಳ ಒತ್ತಡಕ್ಕೆ ಮಣಿದು ಪ್ರಜಾಪ್ರಭುತ್ವದ ಕಗ್ಗೊಲೆಗೆ ಮುಂದಾಗಿ ಮಹಿಳೆಯರನ್ನು ಮಧ್ಯರಾತ್ರಿ ಬಂಧಿಸಿ ಅವಮಾನಿಸಿದ ಭಾಲ್ಕಿ ತಹಸೀಲ್ದಾರ್‌, ಸೇರಿದಂತೆ ಭಾಲ್ಕಿ ತಾಲೂಕು ಆಡಳಿತ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು, ಜಿಲ್ಲಾಧಿಕಾರಿ ಸೇರಿದಂತೆ ಈ ಘಟನೆಯಲ್ಲಿ ಭಾಗಿಯಾದ ಅಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸಿ ಸೂಕ್ತ ತನಿಖೆ ನಡೆಸಬೇಕು. ಬೀದರ್ ಜಿಲ್ಲಾ ಉಸ್ತುವಾರಿ ಸಚಿವರ ಮನೆಯ ಸಮೀಪದಲ್ಲೇ ಇಂತಹ ಅಮಾನವೀಯ ಕರಾಳ ಘಟನೆ ನಡೆದಿರುವುದು ದುರ್ದೈವದ ಸಂಗತಿ, ಆದ್ದರಿಂದ ಸಚಿವ ಈಶ್ವರ ಖಂಡ್ರೆ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕೆಂದು” ಮುಖ್ಯಮಂತ್ರಿಗಳಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿ ಆಗ್ರಹಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...