ಬೀದರ್ ಜಿಲ್ಲೆಯಲ್ಲಿ ಎಲ್‌ಪಿಜಿ ಸಿಲಿಂಡರ್ ಸಾಕಷ್ಟು ಲಭ್ಯ; ಗಾಬರಿಗೊಳ್ಳಬೇಡಿ : ಡಿಸಿ ಶಿಲ್ಪಾ ಶರ್ಮಾ

Date:

ಬೀದರ ಜಿಲ್ಲೆಯಲ್ಲಿ ಗೃಹ ಬಳಕೆಯ ಎಲ್‌ಪಿಜಿ ಅಡುಗೆ ಅನಿಲ ಸಿಲಿಂಡರ್‌ಗಳು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಲಭ್ಯವಿರುವುದರಿಂದ ಗ್ರಾಹಕರು ಗಾಬರಿಗೊಳ್ಳಬಾರದು ಹಾಗೂ ಅನಗತ್ಯವಾಗಿ ಹೆಚ್ಚುವರಿ ಸಿಲಿಂಡರ್ ಸಂಗ್ರಹಿಸಬಾರದು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದ್ದಾರೆ.

ʼಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳಿಗೆ ಸಾರ್ವಜನಿಕರು ಕಿವಿಗೂಡಬಾರದು. ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಮುಂಚಿತವಾಗಿ ಬುಕ್ಕಿಂಗ್ ಮಾಡುತ್ತಿರುವುದರಿಂದ ಐವಿಆರ್‌ಎಸ್ ಮತ್ತು ಮಿಸ್ಡ್ ಕಾಲ್ ವ್ಯವಸ್ಥೆಯಲ್ಲಿ ದಟ್ಟಣೆ ಉಂಟಾಗಿದೆ. ಆದ್ದರಿಂದ IOCL, HPCL ಮತ್ತು BPCL ತೈಲ ಕಂಪನಿಗಳ ವಾಟ್ಸಾಪ್ ಸಂಖ್ಯೆಗಳ ಮೂಲಕವೂ ಗ್ಯಾಸ್ ಬುಕ್ಕಿಂಗ್ ಮಾಡಬಹುದುʼ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ʼಮಾರ್ಚ್ 11ರಂದು ಜಿಲ್ಲೆಯಲ್ಲಿ ಗ್ಯಾಸ್ ಏಜೆನ್ಸಿದಾರರು ಮತ್ತು ಹೋಟೆಲ್ ಉದ್ಯಮಿದಾರರ ಸಭೆ ನಡೆಸಲಾಗಿದ್ದು, ವಾಣಿಜ್ಯ ಸಿಲಿಂಡರ್‌ಗಳ ಲಭ್ಯತೆ ಕುರಿತು ಚರ್ಚೆ ನಡೆಯಿತು. ಹೋಟೆಲ್‌ಗಳಲ್ಲಿ ಅಗತ್ಯದ ಪ್ರಮಾಣದಲ್ಲಿ ಮಾತ್ರ ಸಿಲಿಂಡರ್ ಬಳಸಬೇಕು ಹಾಗೂ ಏಜೆನ್ಸಿಗಳಲ್ಲಿ ಲಭ್ಯವಿರುವ ವಾಣಿಜ್ಯ ಸಿಲಿಂಡರ್‌ಗಳನ್ನು ಅಗತ್ಯಕ್ಕೆ ಅನುಗುಣವಾಗಿ ಸರಬರಾಜು ಮಾಡುವಂತೆ ಸೂಚಿಸಲಾಗಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ಬೀದರ್‌ | ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪಾರದರ್ಶಕವಾಗಿ ನಡೆಸಿ : ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಯಾರೂ ಅನಗತ್ಯವಾಗಿ ಸಿಲಿಂಡರ್ ಸಂಗ್ರಹಣೆ ಅಥವಾ ಮಾರ್ಗಾಂತರ ಮಾಡಬಾರದು. ಇಂತಹ ಪ್ರಕರಣಗಳು ಕಂಡುಬಂದರೆ ಅಗತ್ಯ ವಸ್ತುಗಳ ಕಾಯ್ದೆ 1955ರಡಿ ಕ್ರಮ ಕೈಗೊಳ್ಳಲಾಗುವುದುʼ ಎಂದು ಎಚ್ಚರಿಸಿದ ಅವರು, ಜಿಲ್ಲೆಯಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದ ಕಾರಣ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಎಂದು ಡಿಸಿ ಶಿಲ್ಪಾ ಶರ್ಮಾ ಅವರು ಸ್ಪಷ್ಟಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...