ಬೀದರ್‌ | ಧರ್ಮವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ಪ್ರಜಾಪ್ರಭುತ್ವ ದೇಶಕ್ಕೆ ಅಪಾಯ: ಸಾತಿ ಸುಂದರೇಶ

Date:

ದೇಶದ ಜನರನ್ನು ಧರ್ಮದ ಹೆಸರಿನಲ್ಲಿ ಸಮೂಹಸನ್ನಿಗೆ ಬಳಸಿಕೊಂಡು ಭಾವನಾತ್ಮಕ ರಾಜಕಾರಣ ನಡೆಸುತ್ತಿರುವ ಕೇಂದ್ರ ಬಿಜೆಪಿ ಸರ್ಕಾರ ಹಾಗೂ ಆರ್‌ಎಸ್‌ಎಸ್ ಗುಟ್ಟು ನೀತಿಯನ್ನು ಕಮ್ಯೂನಿಸ್ಟ್‌ ಪಕ್ಷ ತೀವ್ರವಾಗಿ ಖಂಡಿಸುತ್ತದೆ ಎಂದು ಸಿಪಿಐ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ ಹೇಳಿದರು.

ಬೀದರ್‌ ನಗರದ ಸಿಪಿಐ ಪಕ್ಷದ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಜಿಲ್ಲಾ ಮಂಡಲದ ಸಭೆಯಲ್ಲಿ ಭಾಗವಹಿಸಿ ಮಾತನಾಡಿ “ಜನಸಾಮಾನ್ಯರ ಅಸಂಖ್ಯಾತ ಜ್ವಲಂತ ಸಮಸ್ಯೆಗಳನ್ನು ಮರೆಮಾಚಿ ಕೇವಲ ಧಾರ್ಮಿಕ ವಿಷಯಗಳಿಂದ ಭಾವನಾತ್ಮಕ ರಾಜಕಾರಣವನ್ನು ವಿರೋಧಿಸಿ ಜನರ ಬದುಕು ಕಟ್ಟುವ ರಾಜಕಾರಣ ಮುಂದುವರೆಸಬೇಕೆಂಬ ಬೇಡಿಕೆ ಮುಂದಿಟ್ಟುಕೊಂಡು ನಮ್ಮ ಹೋರಾಟ ನಡೆಯುತ್ತಿದೆ” ಎಂದರು.

“ಧರ್ಮವನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ಪ್ರಧಾನಿ ಮೋದಿ ನೇತ್ರತ್ವದ ಸರ್ಕಾರದ ನೀತಿ ದೇಶದ ಪ್ರಜಾಪ್ರಭುತ್ವಕ್ಕೆ ಅಪಾಯ ತಂದೊಡ್ಡಿದೆ. ಗಣರಾಜ್ಯ ದೇಶವನ್ನು ರಾಮರಾಜ್ಯ ಮಾಡಿದ್ದೇವೆ ಎಂದು ಹೇಳಿಕೊಂಡು, ರಾಮರಾಜ್ಯ ಬಂದ ಮೇಲೆ ದೇಶದಲ್ಲಿ ಎಲ್ಲಾ ಸಮಸ್ಯೆಗಳು ಬಗೆಹರಿಯುತ್ತೇವೆ ಎನ್ನುವ ನಿಟ್ಟಿನಲ್ಲಿ ಭಾವನೆಗಳನ್ನು ಹೇರುವ ಕೇಂದ್ರದ ವಿರುದ್ಧ ನಾವು ಅನೇಕ ಕಾರ್ಯಕ್ರಮಗಳು ನಡೆಸುತ್ತಿದ್ದೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಇಂಡಿಯಾʼ ಮೈತ್ರಿಕೂಟಕ್ಕೆ ಸಿಪಿಐ ಬೆಂಬಲ :

“ದೇಶದಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಉಳಿಯಬೇಕೆಂಬ ಅಪೇಕ್ಷೆಯಿಂದ ಮುಂದಿನ ಲೋಕಸಭಾ ಚುನಾವಣೆಯಲ್ಲಿ ದೇಶದ ಜಾತ್ಯಾತೀತ, ಪ್ರಗತಿಪರ ಮತ್ತು ಎಡಪಕ್ಷಗಳು ಒಗ್ಗೂಡಿ ರಚಿಸಿದ ಇಂಡಿಯಾ ಮೈತ್ರಿಕೂಟದ ಭಾಗವಾಗಿ ನಾವಿದ್ದೇವೆ. ರಾಜ್ಯದಲ್ಲಿ ಇಂಡಿಯಾ ಮೈತ್ರಿಕೂಟದ ಭಾಗವಾಗಿ ನಾವು ಸಕ್ರಿಯವಾಗಿ ದೇಶದಲ್ಲಿ ಸಂವಿಧಾನ, ಪ್ರಜಾಪ್ರಭುತ್ವ ಹಾಗೂ ಜಾತ್ಯಾತೀತ ಮೌಲ್ಯಗಳಿಗೆ ಬೆಲೆ ಕೊಡುವ ಸರ್ಕಾರವನ್ನು ಕೇಂದ್ರದಲ್ಲಿ ರಚಿಸಲು ಸಂಪೂರ್ಣವಾಗಿ ರಾಜಕೀಯ ಹೋರಾಟಕ್ಕೆ ನಾವು ಮುಂದಾಗಿದ್ದೇವೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ನೋಟಿಸ್ ಬಂದ ಮೇಲೆ ಕಾರ್ಖಾನೆ ಬಂದ್ ಮಾಡಬೇಕು, ಇಲ್ಲದಿದ್ದರೆ ಕ್ರಿಮಿನಲ್ ಪ್ರಕರಣ ದಾಖಲು: ಸಚಿವ ಈಶ್ವರ ಖಂಡ್ರೆ

“ಮಾಜಿ ಸಿಎಂ ಜಗದೀಶ ಶೆಟ್ಟರ್‌ ಕಾಂಗ್ರೇಸ್‌ ತೊರೆದು ಪುನಃ ಬಿಜೆಪಿ ಸೇರ್ಪಡೆಯಾಗಿದ್ದು ನೋಡಿದರೆ ಪ್ರಸಕ್ತ ರಾಜಕೀಯದಲ್ಲಿ ಯಾವುದೇ ರಾಜಕಾರಣಿಗಳಿಗೂ ಪಕ್ಷ ನಿಷ್ಠೆ ಮತ್ತು ಸಿದ್ಧಾಂತದ ವಿಚಾರಕ್ಕೆ ರಾಜಕಾರಣ ಮಾಡುವುದು ಮರೆಯಾಗಿದೆ. ರಾಜಕಾರಣವನ್ನು ಸಂಪೂರ್ಣವಾಗಿ ಕಲುಷಿತ ಮಾಡುತ್ತಿರುವ ರಾಜಕೀಯ ನಾಯಕರನ್ನು ಜನರೇ ಬಹಿಷ್ಕರಿಸಬೇಕು” ಎಂದು ಒತ್ತಾಯಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...