ಬೀದರ್‌ | ಡಿ. 9 ರಂದು ರಾಷ್ಟ್ರೀಯ ಲೋಕ ಅದಾಲತ್ : ನ್ಯಾ. ಎಸ್.ಕೆ.ಕನಕಟ್ಟೆ

Date:

ಡಿಸೆಂಬರ 9 ರಂದು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರೂ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗ ಎಸ್.ಕೆ. ಕನಕಟ್ಟೆ ಹೇಳಿದರು.

ಗುರುವಾರ ಬೀದರನ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಛೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಡಿಸೆಂಬರ್ 9 ರಂದು ನಡೆಯಲಿರುವ ರಾಷ್ಟ್ರೀಯ ಲೋಕ ಅದಾಲತ್ ಕುರಿತು ಮಾಹಿತಿ ನೀಡಿದರು.

“ಈ ವರ್ಷದ ಕೊನೆಯ ಲೋಕ ಅದಾಲತ್ ಆಗಿರುವದರಿಂದ ಕಳೆದ ಲೋಕ ಅದಾಲತಗಿಂತ ಈ ಸಲ ಹೆಚ್ಚಿನ ಪ್ರಕರಣಗಳನ್ನು ಇತ್ಯರ್ಥಗೊಳಿಸುವ ಗುರಿಯಿದೆ. ಪ್ರಸ್ತುತ ನ್ಯಾಯಾಲಯಗಳಲ್ಲಿ ಚಾಲ್ತಿಯಲ್ಲಿರುವ ಆಸ್ತಿಪಾಲು ವಿಭಾಗ ಜೀವನಾಂಶ, ಚೆಕ್ ಬೌನ್ಸ್, ವಿದ್ಯುತ್ ಪ್ರಕರಣ, ಕಂದಾಯ ಅಪರಾಧಿಕ ಪ್ರಕರಣಗಳಲ್ಲಿ ರಾಜಿ ಮಾಡಿಕೊಳ್ಳುವಂತಹ ಪ್ರಕರಣ, ಕಾರ್ಮಿಕರ ಪ್ರಕರಣ, ಬ್ಯಾಂಕ್ ಪ್ರಕರಣ ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಮಾಡಲು ಅವಕಾಶ ಇರುತ್ತದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಹಿಂದೆ ಸೆಪ್ಟೆಂಬರ್ 9 ರಂದು ಹಮ್ಮಿಕೊಂಡಿದ್ದ ರಾಷ್ಟ್ರೀಯ ಲೋಕ ಅದಾಲತನಲ್ಲಿ ಜಿಲ್ಲೆಯಲ್ಲಿ ಒಟ್ಟು 21,791 ಪ್ರಕರಣಗಳನ್ನು ಇತ್ಯರ್ಥಪಡಿಸಿ, 23.18 ಕೋಟಿ ರೂ.ಗಳನ್ನು ವಸೂಲಾತಿ ಮಾಡಲಾಗಿದೆ. ಈ ಪ್ರಕರಣಗಳಲ್ಲಿ ಬಾಕಿ ಪ್ರಕರಣಗಳು, ವ್ಯಾಜಪೂರ್ವ ಪ್ರಕರಣ, ಬ್ಯಾಂಕ್ ವಸೂಲಿ ಪ್ರಕರಣ, ನಗರಸಭೆ, ಪುರಸಭೆ, ಗ್ರಾಮ ಪಂಚಾಯತಿಗಳ ನೀರಿನ ತೆರಿಗೆ, ಬಿಎಸ್‌ಎನ್‌ಎಲ್ ಹಾಗೂ ಜೆಸ್ಕಾಂ ಬಾಕಿ ಬಿಲ್ ಗಳ ಪ್ರಕರಣಗಳು ಸೇರಿವೆ” ಎಂದರು.

“2023ರ ಜನವರಿ 1ರ ಪ್ರಕಾರ ಜಿಲ್ಲೆಯಲ್ಲಿ ಒಟ್ಟು 27,424 ಪ್ರಕರಣಗಳು ಬಾಕಿಯಿದ್ದು. ಇವುಗಳಲ್ಲಿ ಅತಿ ಹೆಚ್ಚು ಪ್ರಕರಣಗಳನ್ನು ರಾಜಿ ಮಾಡುವ ಗುರಿ ಹೊಂದಿದ್ದೇವೆ. ಈ ನಿಟ್ಟಿನಲ್ಲಿ ಈಗಾಗಲೇ ರೈಲ್ವೆ, ಕೆಎಸ್‌ಆರ್‌ಟಿಸಿ, ನಗರಸಭೆ, ಜಿಲ್ಲಾ ಪಂಚಾಯತ, ಪೊಲೀಸ್, ಬ್ಯಾಂಕ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ರಾಷ್ಟ್ರೀಯ ಲೋಕ ಅದಾಲತನಲ್ಲಿ ಪ್ರಕರಣ ರಾಜಿ ಮಾಡಿಕೊಳ್ಳುವುದರಿಂದ ಕಕ್ಷಿದಾರನಿಗೆ ನ್ಯಾಯಾಲಯ ಶುಲ್ಕ ವಾಪಸ್ ಸಿಗಲಿದೆ. ಎರಡು ಪಕ್ಷದವರು ದ್ವೇಷ ಮರೆತು ಉತ್ತಮ ಬಾಂಧವ್ಯ ಹೊಂದಬಹುದು. ಇಲ್ಲಿ ಇತ್ಯರ್ಥವಾದ ಪ್ರಕರಣಗಳಿಗೆ ಮೇಲ್ಮನವಿ ಸಲ್ಲಿಸಲು ಅವಕಾಶ ಇರುವುದಿಲ್ಲ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಗಡಿ ಭಾಗದ ಕಮಲನಗರ ತಾಲೂಕು ಕೆಂದ್ರದಲ್ಲೇ ಇಲ್ಲ ʼಸರ್ಕಾರಿ ಪ್ರೌಢ ಶಾಲೆʼ

ಈ ಸಂದರ್ಭದಲ್ಲಿ ಜಿಲ್ಲಾ ವಾರ್ತಾಧಿಕಾರಿ ಜಿ. ಸುರೇಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಿಬ್ಬಂದಿಗಳಾದ, ಜಗದೀಶ್ವರ ದೊರೆ, ಆಕಾಶ ಸಜ್ಜನ, ರಾಹುಲ ರೋಷನ್, ಜೀವನ್, ಯೋಹನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...