ಬೀದರ್‌ | ʼಈದಿನʼದ 5 ಸಣ್ಣ ಸುದ್ದಿಗಳು ಓದಿರಿ

Date:

ಬೀದರ್‌ : ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಇಲ್ಲಿಯ ನೆಹರೂ ಕ್ರೀಡಾಂಗಣದಲ್ಲಿ ಜ. 27 ಮತ್ತು 28 ರಂದು ರಾಜ್ಯ ಸರ್ಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ.

ಕ್ರೀಡಾಕೂಟದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ವಿವಿಧ ಕ್ರೀಡೆಗಳು ಹಾಗೂ ಸ್ಪರ್ಧೆಗಳು ನಡೆಯಲಿವೆ. ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಕೂಟದಲ್ಲಿ ಭಾಗವಹಿಸಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸೋಮಶೇಖರ ಬಿರಾದಾರ ಚಿದ್ರಿ ಹಾಗೂ ಪ್ರಧಾನ ಕಾರ್ಯದರ್ಶಿ ಪ್ರಭುಲಿಂಗ ತೂಗಾವೆ ತಿಳಿಸಿದ್ದಾರೆ.

ಕ್ರೀಡಾಕೂಟದಲ್ಲಿ ಹೆಸರು ನೋಂದಣಿಗೆ ಜ.25 ಕೊನೆಯ ದಿನವಾಗಿದೆ. ನೌಕರರು https://bidarsports2026.wasmer.app ಲಿಂಕ್ ಬಳಸಿ ಆನ್‍ಲೈನ್ ಮೂಲಕ ಹೆಸರು ನೋಂದಾಯಿಸಬಹುದು ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಾಯೋಗಿ ವೇಮನ ಜಯಂತಿ ಆಚರಣೆ :

ಬೀದರ್‌ : ಮಹಾಯೋಗಿ ವೇಮನರು ದಕ್ಷಿಣ ಭಾರತದ ಪ್ರಮುಖ ತತ್ತ್ವಜ್ಞಾನಿ, ಸಮಾಜ ಸುಧಾರಕ ಹಾಗೂ ಕವಿ ಆಗಿದ್ದಾರೆ. ಸರಳ ಭಾಷೆಯಲ್ಲಿ ಆಳವಾದ ತತ್ತ್ವಗಳನ್ನು ಹೇಳಿದ ವೇಮನರು, ಅಜ್ಞಾನ, ಅಂಧಶ್ರದ್ಧೆ ಹಾಗೂ ಸಾಮಾಜಿಕ ಅಸಮಾನತೆಗಳ ವಿರುದ್ಧ ಧ್ವನಿ ಎತ್ತಿದರು. ಜನಸಾಮಾನ್ಯರಿಗೆ ಸುಲಭವಾಗಿ ಅರ್ಥವಾಗುವಂತಿದ್ದ ಅವರ ವಚನಗಳು, ಮಾನವೀಯ ಮೌಲ್ಯ, ಸತ್ಯ, ನೀತಿ ಮತ್ತು ಆತ್ಮಜ್ಞಾನವೇ ಜೀವನದ ಮೂಲ ಅಂಶಗಳು ಎಂಬ ಸಂದೇಶವನ್ನು ಸಾರುತ್ತವೆ ಎಂದು ಪೌರಾಡಳಿ ಹಾಗೂ ಹಜ್ ಖಾತೆ ಸಚಿವ ರಹೀಮ್ ಖಾನ್ ಹೇಳಿದರು.

ಸೋಮವಾರ ನಗರದ ಅಮಲಾಪುರ ರಸ್ತೆಯಲ್ಲಿರುವ ಹೇಮ ವೇಮ ಸಮುದಾಯ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೀದರ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ ಮಹಾಯೋಗಿ ವೇಮನ ರವರ 614ನೇ ಜಯಂತ್ಯೋತ್ಸವ ಕಾರ್ಯಕ್ರಮ ಸಸಿಗೆ ನೀರು ಎರೆಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಬೀದರ ದಕ್ಷಿಣ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ,ನಿವೃತ್ತ, ನಗರ ಸಭೆ ಅಧ್ಯಕ್ಷರಾದ ಮೊಹ್ಮದ ಗೌಸ , ನಗರಸಭೆ ಸದಸ್ಯ ರಾಜು ಚಿಂತಾಮಣಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಶಿಂಧೆ, ಪ್ರಾಚಾರ್ಯ ಡಾ.ಶಿವಶರಣಪ್ಪಾ ಹುಗ್ಗಿ ಪಾಟೀಲ್, ರೆಡ್ಡಿ ಸಮಾಜದ ಜಿಲ್ಲಾಧ್ಯಕ್ಷ ಶಂಕರರೆಡ್ಡಿ ,ಬಾಬುರೆಡ್ಡಿ, ಮಾಣಿಕ ರೆಡ್ಡಿ, ಮಲ್ಲಮ್ಮ ನುಡಿ ಪ್ರಾದೇಶಿಕ ಪತ್ರಿಕೆ ಸಂಪಾದಕ ರಮೇಶ ರೆಡ್ಡಿ, ಸಂಗ್ರಾಮ ರೆಡ್ಡಿ, ಸಂಜೀವ್ ರೆಡ್ಡಿ, ಶ್ರೀನಿವಾಸ ರೆಡ್ಡಿ, ಸೂರ್ಯಕಾಂತ್ ಬಿರಾದಾರ, ಸಂಗೀತಾ ರೆಡ್ಡಿ, ಭಾಲ್ಕಿ ರೆಡ್ಡಿ ಸಮಾಜದ ಅಧ್ಯಕ್ಷರಾದ ವಿಜಯ ರೆಡ್ಡಿ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಗ್ರಾಮ ಪಂಚಾಯತಿಗಳಿಗೆ ಆಡಳಿತಾಧಿಕಾರಿ ನೇಮಕ ಆದೇಶ ಹಿಂಪಡೆಯಲು ಆಗ್ರಹ

ಕಮಲನಗರ : ಅವಧಿ ಮುಗಿಯುತ್ತಿರುವ ಗ್ರಾಮ ಪಂಚಾಯತಿಗಳಿಗೆ ಈಗಿರುವ ಆಡಳಿತ ಸಮಿತಿಯನ್ನು ಮರು ನೇಮಕ ಮಾಡಲು ಕಮಲನಗರ ಮದನೂರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪೂಜಾ ಗುಂಡಪ್ಪಾ ಬೇಲ್ಲೆ ಅವರು ಆಗ್ರಹಿಸಿದ್ದಾರೆ.

ಕರ್ನಾಟಕ ಸರ್ಕಾರವು ಆದೇಶ ಹೊರಡಿಸಿ ಆಡಳಿತಾಧಿಕಾರಿಗಳನ್ನು ನೇಮಿಸುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶಿಸಿದೆ, ಆದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜಾಪ್ರತಿನಿಧಿಗಳಿಗೆ ಅವಕಾಶ ನೀಡದೆ ಅಧಿಕಾರಿಗಳಿಗೆ ಆಡಳಿತ ನಡೆಸುವ ಅವಕಾಶ ನೀಡುವುದು ಪ್ರಜಾಪ್ರಭುತ್ವ ವಿರೋಧಿ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ಸರ್ಕಾರ ಆದೇಶ ಹೊರಡಿಸಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 8(1)ಬಿ(ii) ರನ್ವಯ ಆಡಳಿತಾವಧಿ ಮುಗಿಯುತ್ತಿರುವ ಗ್ರಾಮ ಪಂಚಾಯತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶಿಸಿರುತ್ತದೆ. ಆದರೆ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 8(1)ಬಿ(i) ರ ಅನ್ವಯ ಚುನಾಯಿತರಾಗಲು ಅರ್ಹರಾದ ವ್ಯಕ್ತಿಗಳನ್ನೊಳಗೊಂಡ ಆಡಳಿತ ಸಮಿತಿಯನ್ನು ನೇಮಕ ಮಾಡಲು ಅವಕಾಶವಿರುತ್ತದೆ. ರಾಜ್ಯ ಸರ್ಕಾರವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜಾಪ್ರತಿನಿಧಿಗಳಿಗೆ ಅವಕಾಶ ನೀಡದೆ, ಅಧಿಕಾರಿಗಳಿಗೆ ಆಡಳಿತ ನಡೆಸುವ ಅವಕಾಶ ನೀಡುವ ಮೂಲಕ ಪ್ರಜಾಪ್ರಭುತ್ವ ವಿರೋಧಿ ನಡೆಯಾಗಿದೆʼ ಎಂದು ದೂರಿದ್ದಾರೆ.

ಸರ್ಕಾರವು ಗ್ರಾಮ ಪಂಚಾಯತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸುವ ಪ್ರಜಾಪ್ರಭುತ್ವ ವಿರೋಧಿ ಆದೇಶವನ್ನು ಹಿಂಪಡೆದು ಕಾಯ್ದೆಯ ಅನ್ವಯ ಆಡಳಿತಾವಧಿ ಕೊನೆಗೊಳ್ಳುತ್ತಿರುವ ಆಡಳಿತ ಸಮಿತಿಯನ್ನು ಪುನರ್ ನೇಮಕ ಮಾಡಬೇಕೆಂದು ಅವರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಕಚೇರಿಯಲ್ಲಿ ಭೀಮಣ್ಣ ಖಂಡ್ರೆಗೆ ಶ್ರದ್ಧಾಂಜಲಿ

ಬೀದರ್: ನಗರದ ಕಾಂಗ್ರೆಸ್ ಜಿಲ್ಲಾ ಘಟಕದ ಕಚೇರಿಯಲ್ಲಿ ಸೋಮವಾರ ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಖಂಡ್ರೆ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮಾಲಾರ್ಪಣೆ ಮಾಡಿ, ಎರಡು ನಿಮಿಷಗಳ ಮೌನ ಆಚರಿಸಿ ಗೌರವಿಸಲಾಯಿತು.

ಭೀಮಣ್ಣ ಖಂಡ್ರೆ ಅವರು ನಾಲ್ಕು ಬಾರಿ ಶಾಸಕ, ಎರಡು ಬಾರಿ ವಿಧಾನ ಪರಿಷತ್ ಸದಸ್ಯ, ಒಮ್ಮೆ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ, ರಾಜ್ಯ ಉಪಾಧ್ಯಕ್ಷ, ಎಐಸಿಸಿ ಸದಸ್ಯರಾಗಿ ಪಕ್ಷದ ಬಲವರ್ಧನೆಗೆ ಶ್ರಮಿಸಿದ್ದರು. ಶಿಕ್ಷಣ, ಸಹಕಾರ ಕ್ಷೇತ್ರಕ್ಕೂ ಕೊಡುಗೆ ಕೊಟ್ಟಿದ್ದರು. ಅವರ ನಿಧನದಿಂದ ಜಿಲ್ಲೆ ಹಾಗೂ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಮಾಜಿ ಸಂಸದ ನರಸಿಂಗರಾವ್ ಸೂರ್ಯವಂಶಿ ಹೇಳಿದರು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ವಿಧಾನ ಪರಿಷತ್ ಮಾಜಿ ಸದಸ್ಯ ಅರವಿಂದಕುಮಾರ ಅರಳಿ, ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಚಾರ ಸಮಿತಿಯ ಅಧ್ಯಕ್ಷ ಅಮೃತರಾವ್ ಚಿಮಕೋಡೆ ಮಾತನಾಡಿ ಭೀಮಣ್ಣ ಖಂಡ್ರೆ ಅವರ ಕಾರ್ಯ ಸ್ಮರಿಸಿದರು.

ಮುಖಂಡರಾದ ಜಾನ್ ವೆಸ್ಲಿ, ಸಂಜಯ್ ಜಾಗೀರದಾರ್, ರಾಜಶ್ರೀ ಸ್ವಾಮಿ, ವೆಂಕಟೇಶ್ ಸಿಂದೆ, ಚಂದ್ರಕಾಂತ ಹಿಪ್ಪಳಗಾಂವ್, ಎಂ.ಎ.ಸಮಿ, ದತ್ತಾತ್ರಿ ಮೂಲಗೆ, ಜಾರ್ಜ್ ಫರ್ನಾಂಡೀಸ್, ವಿನೋದಕುಮಾರ ಅಪ್ಪೆ, ಶಿವರಾಜ ಹಾಸನಕರ್, ಸುನೀಲ್ ಬಚ್ಚನ್, ವಿಶಾಲ್ ದೊಡ್ಡಿ, ರವೀಂದ್ರ, ಎಂ.ಡಿ. ಮಿಸಬ್, ಡಿ.ಕೆ.ಸಂಜುಕುಮಾರ ಡಿ.ಕೆ, ರಾಕೇಶ ಕುರುಬಖೇಳಗಿ, ಫರೀದ್ ಖಾನ್, ಪೂಜಾ ಜಾರ್ಜ್, ಅಶೋಕ ಕಂದಗೂಳ, ಗೋವರ್ಧನ್ ರಾಠೋಡ್, ಸೂರ್ಯಕಾಂತ ಸಾಧುರೆ, ಧನರಾಜ ಹಂಗರಗಿ ಮತ್ತಿತರರು ಇದ್ದರು. 

ಬೀದರ್‌ನಲ್ಲಿ ಜ.24 ರಿಂದ 26ರವರೆಗೆ ʼಪುಸ್ತಕ ಸಂತೆʼ

ಭಾಲ್ಕಿ : ಬೀದರ್ ನಗರದಲ್ಲಿ ಜ.24 ರಿಂದ 26ರ ವರೆಗೆ ವೀರಲೋಕ ಪುಸ್ತಕ ಜರುಗಲಿದ್ದು ಜಿಲ್ಲೆಯ ಪುಸ್ತಕ ಪ್ರಿಯರು, ಅಭಿಮಾನಿಗಳು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬಸವಕಲ್ಯಾಣ ಅನುಭವ ಮಂಟಪದ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ತಿಳಿಸಿದ್ದಾರೆ.

ʼನಗರದ ನೆಹರು ಸ್ಟೇಡಿಯಂ ಸಮೀಪದ ಸಾಯಿ ಸ್ಕೂಲ್ ಆವರಣದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಹಿರೇಮಠ ಸಂಸ್ಥಾನ ಭಾಲ್ಕಿ ಸಹಯೋಗದಲ್ಲಿ ಮೂರು ದಿನಗಳ ಕಾಲ 4ನೆಯ ಆವೃತ್ತಿಯ ರಾಜ್ಯಮಟ್ಟದ ಪುಸ್ತಕ ಸಂತೆ ಆಯೋಜಿಸಲಾಗುತ್ತಿದೆ. ಅನ್ನ ದಾಸೋಹದಷ್ಟೇ ಜ್ಞಾನ ದಾಸೋಹವೂ ಪವಿತ್ರವಾದುದು ಪುಸ್ತಕಗಳು ಮನುಷ್ಯನ ಅಂತರಂಗವನ್ನು ಶುದ್ಧೀಕರಿಸುವ ಶಕ್ತಿಯನ್ನು ಹೊಂದಿವೆ. ಇಂತಹ ಜ್ಞಾನದ ಪರ್ವ ವೀರಲೋಕ ಪುಸ್ತಕ ಸಂತೆಯು ನಮ್ಮ ಜಿಲ್ಲೆಯಲ್ಲಿ ನಡೆಯುತ್ತಿರುವುದು ನಾಡಿನ ಭಾಗ್ಯʼ ಎಂದರು.

ʼಕನ್ನಡ ನಾಡು-ನುಡಿ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸುವಲ್ಲಿ ವೀರಲೋಕ ಬುಕ್ಸ್ ಸಂಸ್ಥೆಯು ಪ್ರಕಾಶನವನ್ನು ಒಂದು ಸಾಂಸ್ಕೃತಿಕ ಚಳವಳಿಯನ್ನಾಗಿಸುವ ನಿಟ್ಟಿನಲ್ಲಿ ವೀರಕಪುತ್ರ ಶ್ರೀನಿವಾಸ ಅವರು ಪುಸ್ತಕ ಸಂತೆ ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿರುವುದು ಕನ್ನಡಕ್ಕೆ ನೀಡುತ್ತಿರುವ ಬಹುದೊಡ್ಡ ಕೊಡುಗೆಯಾಗಿದೆʼ ಎಂದಿದ್ದಾರೆ.

ಇದನ್ನೂ ಓದಿ : ಬೀದರ್‌ | ಗಾಳಿಪಟ ಹಾರಿಸುವಾಗ ಕಟ್ಟಡ ಮೇಲಿಂದ ಬಿದ್ದು ಯುವಕ ಸಾವು

ಇಂದಿನ ಮೊಬೈಲ್ ಯುಗದಲ್ಲಿ ಯುವ ಪೀಳಿಗೆ ಪುಸ್ತಕಗಳಿಂದ ದೂರ ಸರಿಯುತ್ತಿರುವುದು ಆತಂಕದ ಸಂಗತಿ. ಪುಸ್ತಕ ನಮಗೆ ಸಂಸ್ಕಾರವನ್ನು ಕಲಿಸುತ್ತವೆ. ಸಂಘಟಕರಾದ ಆದೀಶ ವಾಲಿ, ಗುರುನಾಥ ರಾಜಗೀರಾ ಅವರ ನೇತೃತ್ವದಲ್ಲಿ ನಡೆಯಲಿರುವ ಪುಸ್ತಕ ಸಂತೆಯಲ್ಲಿ ಜಿಲ್ಲೆಯ ಭಕ್ತರು, ಕನ್ನಡಾಭಿಮಾನಿಗಳು ಕುಟುಂಬ ಸಮೇತರಾಗಿ ಈ ಪುಸ್ತಕ ಸಂತೆಗೆ ಭೇಟಿ ನೀಡಿ, ಪುಸ್ತಕಗಳನ್ನು ಖರೀದಿಸುವ ಮೂಲಕ ಅಕ್ಷರ ಸಂಸ್ಕೃತಿಯನ್ನು ಬೆಳೆಸಬೇಕು ಮತ್ತು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...