ಕಲ್ಯಾಣ ಕರ್ನಾಟಕ ಫಲಿತಾಂಶ ಸುಧಾರಣೆ ಪಣತೊಟ್ಟ ಎಸ್‌ಐಓ : ಫೆ.15ರವರೆಗೆ ಕಲಿಕೆಯೇ ಕಲ್ಯಾಣ ಅಭಿಯಾನ

Date:

ಕಲ್ಯಾಣ ಕರ್ನಾಟಕದ ಭಾಗದ ಏಳು ಜಿಲ್ಲೆಗಳಲ್ಲಿ ಸ್ಟೂಡೆಂಟ್ ಇಸ್ಲಾಮಿಕ್ ಆರ್ಗನೈಜೇಶನ್ (ಎಸ್‌ಐಓ) ವತಿಯಿಂದ
ʼಕಲಿಕೆಯೇ ಕಲ್ಯಾಣʼ ಎನ್ನುವ ಮಹತ್ವದ ಅಭಿಯಾನವನ್ನು ಫೆಬ್ರುವರಿ 15ರವರೆಗೆ ಆಯೋಜಿಸಲಾಗಿದೆ ಎಂದು ಎಸ್‌ಐಓ ರಾಜ್ಯ ಕಾರ್ಯದರ್ಶಿ ಆಸಿಫ್ ಡಿಕೆ ತಿಳಿಸಿದರು.

ಬೀದರ್ ಜಿಲ್ಲಾ ಪತ್ರಿಕಾ ಭವನದಲ್ಲಿ ಕರೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ, ʼ2025ರ ಡಿ.15ರಿಂದ ಈ ಅಭಿಯಾನ ಆರಂಭಿಸಲಾಗಿದೆ. ಸರ್ಕಾರಿ ಶಾಲೆಗಳಲ್ಲಿ, ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಮೊಹಲ್ಲಾಗಳಲ್ಲಿ ಸಭೆ ನಡೆಸುವುದು, ಓಣಿಗಳಲ್ಲಿ ಪಾಲಕರೊಂದಿಗೆ ಫಲಿತಾಂಶ ಸುಧಾರಣೆ ಕುರಿತು ಸಾಧಕ-ಬಾಧಕಗಳನ್ನು ಚರ್ಚಿಸುವ ಪ್ರಯತ್ನ ಮಾಡಲಾಗುತ್ತಿದೆʼ ಎಂದರು.

ʼಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಾರ್ಷಿಕ ಫಲಿತಾಂಶ ಸುಧಾರಣೆಯೇ ನಮ್ಮ ಮೂಲ ಉದ್ದೇಶವಾಗಿದೆ. ಕಲ್ಯಾಣ ಕರ್ನಾಟಕವು ಭೌಗೋಳಿಕವಾಗಿ ಅತ್ಯಂತ ಶ್ರೀಮಂತವಾಗಿದ್ದರೂ ಶೈಕ್ಷಣಿಕವಾಗಿ ಹಿಂದುಳಿದಿದೆ. ಈ ಸಮಸ್ಯೆಯನ್ನು ತುರ್ತಾಗಿ ಬಗೆಹರಿಸುವ ಅವಶ್ಯಕತೆ ಇದೆʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಸ್‌ಐಓ ಬೀದರ ಜಿಲ್ಲಾಧ್ಯಕ್ಷ ಎಂಡಿ ಸೈಫೋದ್ದಿನ್ ಮಾತನಾಡಿ, ʼಶಿಕ್ಷಣ ಪ್ರತಿಯೊಬ್ಬ ವ್ಯಕ್ತಿ ಮತ್ತು ಸಮುದಾಯದ ಏಳಿಗೆಗೆ ಹೇಗೆ ಕಾರಣವಾಗಬಲ್ಲದು ಎನ್ನುವ ಕುರಿತು ಜಾಗೃತಿ ಮೂಡಿಸುವುದು ಕಲಿಕೆಯೇ ಕಲ್ಯಾಣ ಅಭಿಯಾನದ ಮೂಲ ಉದ್ದೇಶ. ಸಮುದಾಯದ ಬೆಂಬಲ ಮತ್ತು ಸಹಕಾರದಿಂದ ಈ ಭಾಗದದಲ್ಲಿ ಫಲಿತಾಂಶ ಹೆಚ್ಚಳಕ್ಕೆ ಪ್ರಯತ್ನ ನಡೆಯುತ್ತಿದೆ. ಮಾಧ್ಯಮ, ರಾಜಕೀಯ ಹಾಗೂ ಶಿಕ್ಷಣ ತಜ್ಞರು, ಅಧಿಕಾರಿಗಳೊಂದಿಗೆ ಚರ್ಚಿಸಿ ಶೈಕ್ಷಣಿಕ ಹಿಂದುಳಿಯುವಿಕೆಗೆ ಕಾರಣಗಳನ್ನು ಗುರುತಿಸಿ, ಪರಿಹಾರ ಕಂಡುಕೊಳ್ಳುವುದು ಅಭಿಯಾನದ ಉದ್ದೇಶವಾಗಿದೆʼ ಎಂದರು.

ಎಸ್‌ಐಓ ಬೀದರ್ ಘಟಕ ಅಧ್ಯಕ್ಷ ಇಝಾಮ್ ಅಹ್ಮದ್ ಮಾತನಾಡಿ, ʼಕಲ್ಯಾಣ ಕರ್ನಾಟಕ ಭಾಗವು ಶೈಕ್ಷಣಿಕವಾಗಿ
ಹಿಂದುಳಿಯಲು ಶಾಲೆಗಳಲ್ಲಿ ಮೂಲಭೂತ ಸೌಕರ್ಯ, ಶಿಕ್ಷಕರ ಕೊರತೆಯಿದೆ. ಸಾಮಾಜಿಕ ಮತ್ತು ಆರ್ಥಿಕ ಸುಧಾರಣೆಗೆ ಶಿಕ್ಷಣವೇ ಮೂಲ ತಾಯಿಬೇರಾಗಿದ್ದು, ಅದನ್ನು ಸುಧಾರಿಸದ ಹೊರತು ಅಭಿವೃದ್ಧಿ ಸಾಧ್ಯವಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಿ ಕಾರ್ಯಪ್ರವೃತ್ತರಾಗಿದ್ದೇವೆʼ ಎಂದು ಹೇಳಿದರು.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಟ್ರಂಪ್ ವಿರುದ್ಧ ಇನ್ನಾದರೂ ಎದೆ ಸೆಟೆಸುವರೇ ಮೋದಿ?

ಇದೇ ವೇಳೆ ಬೀದರ ಘಟಕದ ಪ್ರಧಾನ ಕಾರ್ಯದರ್ಶಿ ಎಂಎ ಮುಕ್ತಾದೀರ್, ಉಪಾಧ್ಯಕ್ಷ ಎಂಡಿ ಆರಿಫೂದ್ದಿಮ್ ಸೇರಿದಂತೆ ಹಲವರು
ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...