ಬೀದರ್‌ನಲ್ಲಿ ನಾಳೆ ʼSIRʼ ಚಿಂತನ-ಮಂಥನ ಸಮಾವೇಶ

Date:

ಮತದಾರರ ಸಮಗ್ರ ಪರಿಷ್ಕರಣೆ(SIR) ಕುರಿತ ಚಿಂತನ-ಮಂಥನ ಸಮಾವೇಶವನ್ನು ನಾಳೆ (ಫೆ.3) ರಂದು ಬೀದರ್‌ ನಗರದ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಎಸ್‌ಐಆರ್ ವಿರೋಧಿ ಜನಾಂದೋಲನ ಸಮಿತಿಯ ಪ್ರಮುಖರಾದ ಶ್ರೀಕಾಂತ ಸ್ವಾಮಿ ತಿಳಿಸಿದರು

ನಗರದ ಪತ್ರಿಕಾ ಭವನದಲ್ಲಿ ಶನಿವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ʼನಾಳೆ ಬೆಳಿಗ್ಗೆ ಫೇ.೩ ರಂದು ಬೆಳಿಗ್ಗೆ 10:30 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಆರ್ಥಿಕ ತಜ್ಞ, ಪ್ರಗತಿಪರ ಚಿಂತಕ ಪರಕಾಲ ಪ್ರಭಾಕರ್ ಹಾಗೂ ಖ್ಯಾತ ಅಂಕಣಕಾರ, ಚಿಂತಕ ಶಿವಸುಂದರ ಮತ್ತು ನಾಗರಿಕ ಹಕ್ಕುಗಳ ಪ್ರತಿಪಾದಕಿ ತಾರಾ ರಾವ್ ಅವರು ಎಸ್‌ಐಆರ್ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು.

ʼದೇಶದಲ್ಲಿ ಈ ಹಿಂದೆ ಮತದಾರ ಪಟ್ಟಿಯ ಪರಿಷ್ಕರಣೆ ನಡೆಯುತ್ತಿತ್ತು. ಆದರೆ, ಈಗ ಇದು ಸಾಮಾನ್ಯವಾದ ಪರಿಷ್ಕರಣೆ ನಡೆಯುತ್ತಿಲ್ಲ. ಬದಲಾಗಿ ವಿಶೇಷ ಪರಿಷ್ಕರಣೆ ಎಂದು ಮಾಡುತ್ತಿದ್ದಾರೆ. ಬಿಹಾರ, ತಮಿಳುನಾಡು, ಉತ್ತರಪ್ರದೇಶ, ಪಶ್ಚಿಮ ಬಂಗಾಳ ಸೇರಿದಂತೆ ಇತರೆ ರಾಜ್ಯಗಳಲ್ಲಿ ಮತದಾರ ಪಟ್ಟಿ ಪರಿಷ್ಕರಣೆ ನಡೆಸಿ, ಏಳು ಕೋಟಿಗಿಂತ ಹೆಚ್ಚು ಮತದಾರರನ್ನು ಮತಪಟ್ಟಿಯಿಂದ ಕೈ ಬಿಡಲಾಗಿದೆ. ಉತ್ತರ ಪ್ರದೇಶ ಒಂದರಲ್ಲಿಯೇ 1.5ಕೋಟಿ ಮತದಾರರನ್ನು ಕೈ ಬಿಡಲಾಗಿದೆ. ಈ ಎಲ್ಲ ವಿಷಯಗಳ ಬಗ್ಗೆ ಅಂದಿನ ಕಾರ್ಯಕ್ರಮದಲ್ಲಿ ಚಿಂತನ ಮಂಥನ ನಡೆಯಲಿದೆ. ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕುʼ ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮಿತಿಯ ಮುಖಂಡ ಅಬ್ದುಲ್ ಮನ್ನಾನ್ ಸೇಠ್ ಅವರು ಮಾತನಾಡಿ, ʼಮತಪಟ್ಟಿ ಪರಿಷ್ಕರಣೆಯು ನಡೆಯುತ್ತಿರುತ್ತದೆ. ನಾವು ಎಸ್‌ಐಆರ್ ವಿರೋಧವಿಲ್ಲ. ಆದರೆ ಮತಪಟ್ಟಿಯಿಂದ ಉದ್ದೇಶಪೂರ್ವಕವಾಗಿ ಹೆಸರು ತೆಗೆಯಲಾಗುತ್ತಿದೆ. ನಾವು ಅದನ್ನು ವಿರೋಧಿಸುತ್ತಿದ್ದೇವೆʼ ಎಂದರು.

ಪ್ರಗತಿಪರ ಚಿಂತಕ ವಿಠಲದಾಸ್ ಪ್ಯಾಗೆ ಅವರು ಮಾತನಾಡಿ, ʼಭಾರತ ದೇಶ ಒಂದು ಪ್ರಜಾಸತ್ತಾತ್ಮಕ ದೇಶವಾಗಿದೆ. ಪ್ರಜಾ ಪ್ರಭುತ್ವದಲ್ಲಿ ಮತದಾನದ ಹಕ್ಕು ಅತ್ಯಂತ ಪ್ರಮುಖವಾಗಿದೆ. ಮತ ಪರಿಷ್ಕರಣೆಯಾಬೇಕು. ಆದರೆ, ಪರಿಷ್ಕರಣೆ ಹೆಸರಲ್ಲಿ ನಿಜವಾದ ಮತದಾರರನ್ನು ಜಾತಿ, ಧರ್ಮದ ಹೆಸರಿನ ಮೇಲೆ, ಮತದಾನದ ಹಕ್ಕಿನಿಂದ ವಂಚಿತರನ್ನಾಗಿ ಮಾಡುತ್ತಿರುವುದು ಸಂವಿಧಾನ ವಿರೋಧಿ ಕೆಲಸವಾಗಿದೆ. ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆʼ ಎಂದರು.

ಇದನ್ನೂ ಓದಿ : SIR | ಮತದಾರರ ಪಟ್ಟಿ ಪರಿಷ್ಕರಣೆ ನಡೆಸುವ ಇಸಿಐ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಎಸ್‌ಐಆರ್ ವಿರೋಧಿ ಜನಾಂದೋಲನ ಸಮಿತಿಯ ಪ್ರಮುಖರಾದ ಓಂಪ್ರಕಾಶ ರೊಟ್ಟೆ, ಮಹಮ್ಮದ್ ನಿಜಾಮುದ್ದಿನ್, ಜಗದೀಶ್ವರ ಬಿರಾದಾರ್, ಮಹೇಶ ಗೋರನಾಳಕರ್ ಮತ್ತಿತರರಿದ್ದರು.

ಎಸ್‌ಐಆರ್ ಚಿಂತನ ಮಂಥನ ಸಮಾವೇಶ : ಕರಪತ್ರ ಬಿಡುಗಡೆ

ನಾಳೆ ಬೀದರ್‌ನಲ್ಲಿ ನಡೆಯಲಿರುವ ಮತದಾರರ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಕುರಿತ ಚಿಂತನ-ಮಂಥನ ಸಮಾವೇಶದಲ್ಲಿ ತಾಲೂಕು ಸೇರಿ ಜಿಲ್ಲಾದ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿ ಸಂವಿಧಾನ ವಿರೋಧಿಯಾದ ಎಸ್‌ಐಆರ್ ಕುರಿತು ತಿಳಿದುಕೊಳ್ಳಬೇಕಿದೆ ಎಂದು ಎಸ್‌ಐಆರ್ ವಿರೋಧಿ ಜನಾಂದೋಲನ ಸಮಿತಿಯ ಸಂದೀಪ ಮುಕಿಂದೆ ಮನವಿ ಮಾಡಿದರು.

ಬಸವಕಲ್ಯಾಣ ನಗರದ ಡಾ.ಬಿ.ಆರ್.‌ ಅಂಬೇಡ್ಕರ್‌ ವೃತ್ತದಲ್ಲಿ ಎಸ್‌ಐಆರ್ ಚಿಂತನ-ಮಂಥನ ಸಮಾವೇಶದ ಕರಪತ್ರ ಬಿಡುಗಡೆ ಮಾಡಿ ಮಾತನಾಡಿದರು.

image 89

ಈ ಸಂದರ್ಭದಲ್ಲಿ ಪ್ರಮುಖರಾದ ಇಕ್ರಾಮೊದ್ದಿನ್‌ ಖಾದಿವಾಲಾ, ಆಕಾಶ ಖಂಡಾಳೆ, ಸುರೇಶ ಮೋರೆ ಸೇರಿದಂತೆ ಅನೇಕರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...