ರಾಜ್ಯ ಬಜೆಟ್‌ | ಬೀದರ್ ಜಿಲ್ಲೆಗೆ ಸಿಕ್ಕಿದ್ದೇನು?

Date:

ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು‌ ಇಂದು (ಮಾ.6) 17ನೇ ರಾಜ್ಯ ಬಜೆಟ್‌ ಮಂಡಿಸಿದ್ದಾರೆ.

ಬಜೆಟ್‌ನಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವು ಮಹತ್ವದ ಯೋಜನೆಗಳನ್ನು ಘೋಷಿಸಲಾಗಿದೆ. ಅದರಲ್ಲೂ ಬಿದರಿ ನಾಡು ಜಿಲ್ಲೆಯ ಜನ ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಭಾರೀ ನಿರೀಕ್ಷೆಗಳನ್ನು ಹೊಂದಿದ್ದರು. ನಿರೀಕ್ಷೆಯಂತೆ ಒಂದಷ್ಟು ಖುಷಿ ವಿಚಾರಗಳಿವೆ ಎನ್ನಬಹುದು.

ಬೀದರ್‌ ಜಿಲ್ಲೆಗೆ ಹೊಸದೇನಿದೆ:

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೀದರ್‌ ಜಿಲ್ಲೆಯ ಶರಣ ಭೂಮಿ ಬಸವಕಲ್ಯಾಣದಲ್ಲಿ ಖಾಸಗಿ ವಚನ ವಿಶ್ವವಿದ್ಯಾಲಯವನ್ನು ಪ್ರಾರಂಭಿಸಲು 25 ಎಕರೆ ಒದಗಿಸಲಾಗುವುದು ಎಂದು ಘೋಷಿಸಲಾಗಿದೆ.

ಹೊಸದಾಗಿ ಮೇಲ್ದರ್ಜೆಗೇರಿಸಲಾದ ಬೀದರ್ ಮಹಾನಗರ ಪಾಲಿಕೆಗಳಿಗೆ ಮಹಾತ್ಮಾಗಾಂಧಿ ನಗರ ವಿಕಾಸ್ ಯೋಜನೆ 2.0ರಡಿ 2026–27ನೇ ಸಾಲಿನಲ್ಲಿ 200 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ತಿಳಿಸಲಾಗಿದೆ.

ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವ ಉದ್ದೇಶದಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವಿಜ್ಞಾನ ಕೇಂದ್ರಗಳನ್ನು ಹಾಗೂ ಬೀದರ್‌ ಒಳಗೊಂಡು ಒಟ್ಟು 11 ಜಿಲ್ಲೆಗಳಲ್ಲಿ ತಾರಾಲಯಗಳನ್ನು ಸ್ಥಾಪಿಸಲಾಗುತ್ತಿದ್ದು ಪ್ರಸ್ತುತ ಸಾಲಿನಲ್ಲಿ ಬೀದರ್‌ ಜಿಲ್ಲೆಯಲ್ಲಿ 4 ಕೋಟಿ ರೂ. ವೆಚ್ಚದಲ್ಲಿ ಹೊಸ ತಾರಾಲಯಗಳನ್ನು ಸ್ಥಾಪಿಸಲಾಗುತ್ತದೆ.

ಬಸವಕಲ್ಯಾಣ ಅಭಿವೃದ್ಧಿ ಮಂಡಳಿ (ಬಿಕೆಡಿಬಿ) ವತಿಯಿಂದ ನಿರ್ಮಿಸಲಾಗುತ್ತಿರುವ ‘ನೂತನ ಅನುಭವ ಮಂಟಪ’ ಕಾಮಗಾರಿಯು ಅಂತಿಮ ಹಂತದಲ್ಲಿದ್ದು, ಪ್ರಸಕ್ತ ಸಾಲಿನಲ್ಲಿ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಗರಿಷ್ಠ ಭದ್ರತಾ ಕೇಂದ್ರ ಕಾರಾಗೃಹ ಹಾಗೂ ವಿಜಯಪುರ ಮತ್ತು ಬೀದರ್‌ಗಳಲ್ಲಿ ತಲಾ 1,000 ಬಂದಿಗಳ ಸಾಮರ್ಥ್ಯದ ಜಿಲ್ಲಾ ಕೇಂದ್ರ ಕಾರಾಗೃಹಗಳನ್ನು ಒಟ್ಟಾರೆ 471 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿರುತ್ತದೆ ಎಂದು ಬಜೆಟ್‌ನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ : ಬೀದರ್ | ಧರಿನಾಡಿನ ಅಭಿವೃದ್ಧಿಗೆ ಏನೇನು ಬೇಕು? ಬಜೆಟ್ ನಿರೀಕ್ಷೆಗಳೇನು?

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...