ಬೀದರ್‌ | ಕಳವು ಪ್ರಕರಣ: 9 ಆರೋಪಿಗಳ ಬಂಧನ; 28 ಲಕ್ಷ ಮೌಲ್ಯದ ವಸ್ತುಗಳು ಜಪ್ತಿ

Date:

  • ಭಾಲ್ಕಿ ಪೊಲೀಸ್ ಉಪ ವಿಭಾಗದ ವ್ಯಾಪ್ತಿಯಲ್ಲಿ ಕಳವು ಆರೋಪಿಗಳ ಬಂಧನ
  • ಅಪರಾಧ ಕಂಡು ಬಂದರೇ ತಕ್ಷಣ ಸಮೀಪದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಬೇಕು.

ಭಾಲ್ಕಿ ಪೊಲೀಸ್ ಉಪ-ವಿಭಾಗದ ಹಲವು ಠಾಣೆ ವ್ಯಾಪ್ತಿಯಲ್ಲಿ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ 9 ಆರೋಪಿಗಳನ್ನು ಬಂಧಿಸಿ ಸುಮಾರು 28,17,450 ರೂ ಮೌಲ್ಯದ ವಿವಿಧ ವಸ್ತುಗಳನ್ನು ವಶಪಡೆದುಕೊಳ್ಳಲಾಗಿದೆ ಎಂದು ಎಸ್ಪಿ ಚನ್ನಬಸವಣ್ಣ ಎಸ್.ಎಲ್ ತಿಳಿಸಿದರು.

ಪಟ್ಟಣದ ಪೊಲೀಸ್ ಉಪಾಧೀಕ್ಷಕರ ಕಚೇರಿಯಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,
“ಕಮಲನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 30 ನೀರಿನ ಮೋಟಾರ್, ರೋಡ್ರೊಲರ್‌ನಲ್ಲಿನ 50 ಲೀಟರ್ ಡಿಸೇಲ್, ಅಪರಾಧಕ್ಕೆ ಬಳಸಿದ ಟವೆರಾ, ಬೊಲೆರೋ ವಾಹನ ಸೇರಿ ಸುಮಾರು 13,00,950 ಮೌಲ್ಯದ ವಸ್ತು ಜಪ್ತಿ ಮಾಡಿಕೊಂಡು ನಾಲ್ವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕ ಒಪ್ಪಿಸಲಾಗಿದೆ. ಧನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎಂಟು ಸಾವಿರ, ಆರು ಸಾವಿರ ಮತ್ತು ಒಂದು ಸಾವಿರ ವ್ಯಾಟನ್ ಎಂಪ್ಲಿಫೈರ್ ಸೇರಿ ಒಟ್ಟು 2,80000 ರೂ ಮೌಲ್ಯದ ನಾಲ್ಕು ಎಂಪ್ಲಿಫೈರ್ ಜಪ್ತಿ ಮಾಡಿಕೊಳ್ಳಲಾಗಿದೆ. ಒರ್ವ ಆರೋಪಿಯನ್ನು ಬಂಧಿಸಲಾಗಿದೆ” ಎಂದು ಹೇಳಿದರು.

“ಮೆಹಕರ್ ಠಾಣೆ ವ್ಯಾಪ್ತಿಯಲ್ಲಿ ಏಳು ಕಿರ್ಲೊಸ್ಕರ್ ಮೋಟಾರ್, ನಾಲ್ಕು ಹ್ಯಾಂಡ್ ಪಂಪ್, ಹೈಡ್ರೊಲಿಕ್ ಮಶೀನ್, ನಾಲ್ಕು ಕಬ್ಬಿಣದ ಪ್ಲೆಟ್ ಸೇರಿ ಒಟ್ಟು 12,36,500 ರೂ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿ ನಾಲ್ವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಜಿಲ್ಲೆಯಲ್ಲಿ ಅಪರಾಧ ಕಂಡು ಬಂದರೇ ತಕ್ಷಣ ಸಮೀಪದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಬೇಕು. ಇದರಿಂದ ಅಪರಾಧ ನಿಯಂತ್ರಿಸಲು ಸಾಧ್ಯವಾಗುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಿಲ್ಲೆಯಲ್ಲಿ ಮೋಟಾರ್, ಪಂಪಸೆಟ್ ಇನ್ನಿತರ ವಸ್ತುಗಳು ಕಳವು ಆಗಿರುವ ಬಗ್ಗೆ ರೈತ ಸಂಘದ ಮುಖಂಡರು, ರೈತರು ದೂರು ನೀಡಿದ್ದರು. ಇದರಿಂದ ವಿವಿಧೆಡೆ ಪೊಲೀಸರ ತಂಡ ರಚಿಸಿ ನಿರಂತರ ಕಾರ್ಯಾಚರಣೆ ನಡೆಸಿದರ ಪರಿಣಾಮ ದೊಡ್ಡ ಮೊತ್ತದ ವಸ್ತುಗಳನ್ನು ಜಪ್ತಿ ಮಾಡಲು ಸಾಧ್ಯವಾಗಿದೆ. ಪ್ರಕರಣ ಭೇದಿಸಿದ ಎಲ್ಲ ಪೊಲೀಸರನ್ನುಅಭಿನಂದಿಸುವುದಾಗಿ” ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | 6 ವರ್ಷದ ಬಾಲಕಿ ಮೇಲೆ 75 ವರ್ಷ ವೃದ್ಧನಿಂದ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ

ಇದೇ ವೇಳೆ ಅಪರಾಧ ಪ್ರಕರಣ ಭೇದಿಸಿದ ಎಸ್ಪಿ ಚನ್ನಬಸವಣ್ಣ ಎಸ್.ಎಲ್. ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ ಸೇರಿದಂತೆ ಪೊಲೀಸ್ ಸಿಬ್ಬಂದಿಗಳನ್ನು ಜಿಲ್ಲಾ ರೈತ ಸಂಘದ ಅಧ್ಯಕ್ಷರಾದ ಸಿದ್ರಾಮಪ್ಪ ಆಣದೂರೆ, ಮಲ್ಲಿಕಾರ್ಜುನ ಸ್ವಾಮಿ ಸನ್ಮಾನಿಸಿ, ಅಭಿನಂದಿಸಿದರು. ಈ ಸಂದರ್ಭದಲ್ಲಿ ಸಿಪಿಐ, ಪಿಎಸ್‌ಐಗಳು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...