ವಿಜಯಪುರ | ಬೈಕ್‌-ಬಸ್‌ ಮುಖಾಮುಖಿ ಢಿಕ್ಕಿ : ಬೈಕ್‌ ಸವಾರ ಸಾವು, ಸುಟ್ಟು ಕರಕಲಾದ ಬಸ್

Date:

ಬೈಕ್ ಮತ್ತು ಸರ್ಕಾರಿ ಬಸ್ ಮುಖಾಮುಖಿ ಢಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಲ್ಲದೆ
ಬಸ್‌ಗೆ ಬೆಂಕಿ ಹೊತ್ತುಕೊಂಡು ಸುಟ್ಟು ಕರಕಲಾದ ದುರಂತ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗಬಸಾವಳಗಿ ಬಳಿ ಬುಧವಾರ ಸಂಭವಿಸಿದೆ.

ಮೃತಪಟ್ಟ ಬೈಕ್ ಸವಾರನ ಹೆಸರು ತಿಳಿದು ಬಂದಿಲ್ಲ. ಬೈಕ್ ಬಸ್ ಮಧ್ಯೆ ಸಿಲಿಕಿದ ಕಾರಣ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿ ಹೊತ್ತುತ್ತಿದ್ದಂತೆ ಬಸ್ ನಲ್ಲಿದ್ದ ಪ್ರಯಾಣಿಕರು ಕೆಳಗಿಳಿದು ಅಪಾಯದಿಂದ ಪಾರಾಗಿದ್ದಾರೆ. ಸಿಂದಗಿ ತಾಲೂಕಿನ ಗಬಸಾವಳಗಿ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಸಂಭವಿಸಿದ ದರಂತದಲ್ಲಿ ಸರ್ಕಾರಿ ಬಸ್ ಸುಟ್ಟು ಕರಕಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರು.

ಮೋರಟಗಿಯಿಂದ ಸಿಂದಗಿ ಕಡೆಗೆ ತೆರಳುತ್ತಿದ್ದ ಬಸ್‌ಗೆ ಬೈಕ್  ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ. ಆದರೆ ಏಕಾಏಕಿ ಬಸ್‌ ಹೊತ್ತಿಕೊಂಡು ಉರಿಯಲು ನಿಖರ ಕಾರಣ ಏನೆಂಬುದು ಇನ್ನೂ ತಿಳಿದು ಬಂದಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ನಮ್ ಜನ | ದುಡಿದರೂ ದಣಿದರೂ ನಿಸೂರಾಗದ ನಿರ್ಮಲಮ್ಮನ ಬದುಕು

ಸಿಂದಗಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...