ಬೀಳಗಿ | ಭಾರಿ ಮಳೆಯಿಂದ ಬೆಳೆ ನಾಶ; ರೈತರಿಗೆ ಪರಿಹಾರ ಘೋಷಿಸುವಂತೆ ಕಿಸಾನ್‌ ಸಂಘ ಮನವಿ

Date:

ಕಳೆದ ಎರಡು ದಿನಗಳಿಂದ ಬಾಗಲಕೋಟೆಯ ಬೀಳಗಿ ಸೇರಿದಂತೆ ಹಲವು ತಾಲೂಕು ವ್ಯಾಪ್ತಿಯಲ್ಲಿ ಧಾರಾಕಾರವಾಗಿ ಸುರಿದ ಭಾರಿ ಮಳೆಯಿಂದಾಗಿ ಮನೆಗಳು ಬಿದ್ದಿದ್ದು, ರೈತರು ಬೆಳೆದ ಬೆಳೆಗಳು ನಾಶವಾಗಿದ್ದು ವಿಮೆ ಕಟ್ಟದವರಿಗೆ ತಕ್ಷಣ ಪರಿಹಾರ ಒದಗಿಸಬೇಕು, ವಿಮೆ ಕಟ್ಟಿದವರಿಗೆ ವಿಮಾಕ್ಷೇಮ್ ಕೊಡಿಸಬೇಕು, ಹಳ್ಳ ಕೊಳ್ಳ ಕೆರೆಗಳಲ್ಲಿ ತುಂಬಿದ ಹೂಳು ತೆಗೆಸಬೇಕು, ಹಾನಿಗೆ ಪರಿಹಾರ ಒದಗಿಸಲು ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಶೀಲ್ದಾರ್‌ಗೆ ಭಾರತೀಯ ಕಿಸಾನ್ ರೈತ ಸಂಘಟನೆ ಮನವಿ ಸಲ್ಲಿಸಿತು.

ಸಂಘಟನೆ ಜಿಲ್ಲಾಧ್ಯಕ್ಷ ವಿರೂಪಾಕ್ಷಯ್ಯ ಹಿರೇಮಠ ಮಾತನಾಡಿ, “ಕಳೆದ ಎರಡು ದಿನಗಳಿಂದ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಅಧಿಕ ಪ್ರಮಾಣದ ನೀರು ನಿಂತ ಪರಿಣಾಮ ಬಾಗಲಕೋಟೆ ಜಿಲ್ಲೆಯ ನಗರ, ಪಟ್ಟಣ, ಗ್ರಾಮೀಣ ಪ್ರದೇಶಗಳಲ್ಲಿ ಮನೆಗಳು ಬಿದ್ದಿದ್ದು ಅಪಾರ ಪ್ರಮಾಣದ ಆಸ್ತಿಪಾಸ್ತಿಗಳು ನಷ್ಟವಾಗಿವೆ. ರೈತರ ಜಮೀನುಗಳಲ್ಲಿ ಇರುವ ಬದು ಒಡ್ಡುಗಳು ಕೊಚ್ಚಿಕೊಂಡು ಹೋಗಿ ಎಲ್ಲ ಬೆಳೆಗಳು ನೀರು ಪಾಲಾಗಿದ್ದು, ರೈತರು ಲಕ್ಷಾಂತರ ರೂಪಾಯಿಗಳ ನಷ್ಟ ಅನುಭವಿಸಿದ್ದು, ಸರಕಾರದ ಪ್ರತಿನಿಧಿಗಳಾದ ತಾವು ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆ ಅಧಿಕಾರಿಗಳು ತಕ್ಷಣ ಸರ್ವೇ ಕಾರ್ಯ ಮಾಡಿ ಪರಿಹಾರ ಕಾರ್ಯ ಕೈಗೊಳ್ಳಬೇಕು”

ಇದನ್ನೂ ಓದಿ: ಬಾಗಲಕೋಟೆ | ಭಾರೀ ಮಳೆಯಿಂದ ಈರುಳ್ಳಿ ಬೆಳೆನಾಶ; ಪರಿಹಾರಕ್ಕೆ ಕಿಸಾನ್‌ ಸಂಘ ಆಗ್ರಹ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬೆಳೆ ವಿಮೆ ಕಟ್ಟಿದವರಿಗೆ ವಿಮಾ ಕ್ಷೇಮ್ ಕೊಡಿಸಬೇಕು. ಜಮೀನುಗಳಲ್ಲಿ ನೀರು ಕೊಚ್ಚಿ ಹೋಗುವುದರಿಂದ ಫಲವತ್ತಾದ ಮಣ್ಣಿನ ಜೊತೆ ಬೆಳೆಗಳು ಕೊಚ್ಚಿಕೊಂಡು ಹೋಗುತ್ತಿದ್ದು ತಕ್ಷಣ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ಸಹಯೋಗದಲ್ಲಿ ಕೇಂದ್ರ ಸರಕಾರದ ನರೇಗಾ ಯೋಜನೆಡಿಯಲ್ಲಿ ಹೂಳು ತೆಗೆಸುವ ಕಾರ್ಯವನ್ನು ಮಾಡಿದರೆ ಸಾರ್ವಜನಿಕರಿಗೆ ಹಾಗೂ ರೈತರಿಗೆ ಅನೂಕೂಲವಾಗುವುದು. ತಕ್ಷಣ ಈ ಎಲ್ಲ ಬೇಡಿಕೆಗಳನ್ನು ಈಡೇರಿಸಲು ಜಿಲ್ಲಾಧಿಕಾರಿಗಳು, ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳು ಮುಂದಾಗಬೇಕೆಂದು” ಒತ್ತಾಯಿಸಿದರು.

ಈ ವೇಳೆ ಕಿರಣಕುಮಾರ ಕುಲಕರ್ಣಿ, ಹೊನ್ನಯ್ಯ ಹಿರೇಮಠ, ರವಿ ಕುಂಬಾರ, ಅಶೋಕ ಹಿರೇಮಠ, ಕೆ ಎಂ ಕುಂಬಾರ, ಕುಮಾರ ಮುತ್ತಲಗೆರಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...