ಬೀಳಗಿ | ವೈಜ್ಞಾನಿಕ ಕೃಷಿ ಪದ್ಧತಿ ನಿರ್ಲಕ್ಷಿಸಿದರೆ ಆಹಾರ ಕೊರತೆ ನಿಶ್ಚಿತ: ರಾಜೇಂದ್ರ ಪೋದ್ದಾರ

Date:

ಭೂಮಿಯ ಮಣ್ಣಿನ ಗುಣಧರ್ಮ ಪರೀಕ್ಷಿಸದೇ ಅವೈಜ್ಞಾನಿಕ ಬೆಳೆ ಪದ್ದತಿಯನ್ನೇ ಮುಂದುವರೆಸಿದರೆ ಮುಂದಿನ ದಿನಗಳಲ್ಲಿ ಆಹಾರ ಕೊರತೆ ಎದುರಿಸಬೇಕಾದ ದುಸ್ಥಿತಿ ಬರಲಿದೆ ಎಂದು ಜಲಸಂಪನ್ಮೂಲ ಇಲಾಖೆಯ ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ ನಿರ್ದೇಶಕ ಡಾ. ರಾಜೇಂದ್ರ ಪೋದ್ದಾರ ಕಳವಳ ವ್ಯಕ್ತಪಡಿಸಿದರು.

ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಕೊರ್ತಿ ಪುನರ್ವಸತಿ ಕೇಂದ್ರದ ಪಿ.ಕೆ.ಪಿ.ಎಸ್ ಸಭಾಂಗಣದಲ್ಲಿ ಭಾರತೀಯ ಕಿಸಾನ್ ಸಂಘ ಕರ್ನಾಟಕ ಪ್ರದೇಶ ಉತ್ತರ ಪ್ರಾಂತ ಬಾಗಲಕೋಟೆ ಜಿಲ್ಲಾ ಘಟಕ ಹಾಗೂ ಬೀಳಗಿ ತಾಲೂಕು ಘಟಕ ಸಹಯೋಗದಲ್ಲಿ ಭಗವಾನ್ ಬಲರಾಮ ಜನ್ಮದಿನೋತ್ಸವ ನಿಮಿತ್ತ ಹಮ್ಮಿಕೊಂಡ ಸವಳು ಜವಳು ನಿಯಂತ್ರಣ ಕಾರ್ಯಾಗಾರವನ್ನುದ್ದೇಶಿಸಿ ಅವರು ಮಾತನಾಡಿದರು.

“ಬೆಳೆಗೆ ಅವಶ್ಯಕತೆಗಿಂತ ಹೆಚ್ಚು ನೀರಿನ ಬಳಿಕೆ ಮಾಡುವುದರಿಂದ ಭೂಮಿ ಆರೋಗ್ಯ ಕೆಟ್ಟು ಸವಳು ಜವಳು ಆಗಿ ಇಳುವರಿ ಕುಂಠಿತವಾಗುತ್ತದೆ. ಇದರಿಂದ ಸಾಮಾಜಿಕ ಹಾಗೂ ಆರ್ಥಿಕ ಪರಸ್ಥಿತಿ ಹದಗೆಟ್ಟು ರೈತರು ಬಿತ್ತನೆಗೆ ಮಾಡಿದ ಖರ್ಚು ಮರಳಿ ಬರದೇ ಸಂಕಷ್ಟದ ಸುಳಿಯಲ್ಲಿ ಸಿಲುಕಬೇಕಾಗುತ್ತದೆ. ಸವಳು ಜವಳು ಸಮಸ್ಯೆಯಿಂದ ಮುಕ್ತರಾಗದಿದ್ದಲ್ಲಿ ದೇಶದಲ್ಲಿ ಆಹಾರದ ಕೊರತೆಯನ್ನು ಎದುರಿಸುವ ಪರಿಸ್ಥಿತಿ ಬಂದೊದಗಲಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸವಳು ಜವಳು ನಿರ್ಮೂಲನೆಗೆ ಅಂತರ್ಗತ ಬಸಿ ಕಾಲುವೆಗಳನ್ನು ಅಳವಡಿಸಿಕೊಳ್ಳಲು ಕಾಡಾಗಳಿಂದ ಕ್ರಿಯಾ ಯೋಜನೆ ತಯಾರಿಸಬೇಕು. ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಡಿಯಲ್ಲಿ ನೀರು ಬಳಿಕೆದಾರರು, ಸಹಕಾರಿ ಸಂಘಗಳು ಗ್ರಾಮ ಪಂಚಾಯತಿ, ನೀರಾವರಿ ಮತ್ತು ಕಾಡಾ ಇಲಾಖೆಗಳ ಸಹಕಾರ ಮತ್ತು ಸಹಯೋಗ ಬಹಳ ಮಹತ್ವವಾಗಿದ್ದು, ಹೆಚ್ಚಿನ ಅನುದಾನ ಅವಶ್ಯಕತೆಯಿದೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಇಚ್ಛಾಶಕ್ತಿ ಪ್ರದರ್ಶಿಸಿದರೆ ಸವಳು ಜವಳಿನ ಸಮಸ್ಯೆಯನ್ನು ಬಗೆಹರಿಸಬಹುದು” ಎಂದರು.

ಭಾರತೀಯ ಕಿಸಾನ್ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಪುಟ್ಟಸ್ವಾಮಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ‌, “ರಾಸಾಯನಿಕ ರಸಗೊಬ್ಬರ ಬಳಕೆ, ಬೆಳೆಗಳಿಗೆ ಅವಶ್ಯಕತೆ ಮೀರಿ ನೀರುಣಿಸುವುದರಿಂದಾಗಿ ಭೂಮಿ ತನ್ನ ಫಲವತ್ತತ್ತೆಯನ್ನು ಕಳೆದುಕೊಂಡ ಪರಿಣಾಮ ಸವಳು ಜವಳು ಆಗಿರುವದರ ಜೊತೆಗೆ ಮಾನವ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ನಮ್ಮ ಹಿರಿಯರು ಮಾಡಿಕೊಂಡು ಬಂದ ಪ್ರಾಚೀನ ಗೋ ಆಧಾರಿತ ಸಮಗ್ರ ಕೃಷಿ ಪದ್ದತಿಯನ್ನು ರೈತರು ಅಳವಡಿಸಿಕೊಂಡು ಆರೋಗ್ಯವಂತ ಸಮಾಜ ನಿರ್ಮಿಸಲು ಪಣತೋಡಬೇಕಾಗಿದೆ” ಎಂದರು.

ಇದನ್ನೂ ಓದಿ: ಬಾಗಲಕೋಟೆ | ಸೆ.4ರಂದು AIUTUC ವತಿಯಿಂದ ಅಖಿಲ ಭಾರತ ಕಾರ್ಮಿಕರ ಬೃಹತ್‌ ಪ್ರತಿಭಟನೆ

ಅಮರೇಶ ನಾಗೂರ ಮಾತನಾಡಿ, “ವಾಣಿಜ್ಯ ಬೆಳೆಯಾದ ಕಬ್ಬು ಬೆಳೆಯನ್ನು ರೈತರು ಸದಾಕಾಲ ಬೆಳೆಯುವುದರಿಂದ ಭೂಮಿಯಲ್ಲಿ‌ ನೀರಿನ ತೇವಾಂಶ ಹೆಚ್ಚಾಗಿ ಭೂ ಫಲವತ್ತತೆಯನ್ನು ಕಳೆದುಕೊಳ್ಳುತ್ತಿದೆ. ಮುಂದಿನ ದಿನಮಾನಗಳಲ್ಲಿ ಬರಡು ಭೂಮಿಯಾಗುವುದರಿಂದ ಯಾವುದೇ ಬೆಳೆ ಬಾರದೇ ನಮ್ಮ ಮಕ್ಳಳು ನಮಗೆ ಹಿಡಿಶಾಪ ಹಾಕುವಂತ ಪರಿಸ್ಥಿತಿ ನಿರ್ಮಾಣವಾಗಬಹುದು. ಅದಕ್ಕಾಗಿ ಪ್ರತಿ ವರ್ಷಕೊಮ್ಮೆ ಬೇರೆ ಬೇರೆ ಸಾವಯವ ಬೆಳೆಯನ್ನು ಬೆಳೆದು ಭೂಮಿಯ ಆರೋಗ್ಯ ಸಂರಕ್ಷಣೆ ಮಾಡೋಣ. ನನ್ನ ಮಕ್ಜಳ ಮುಂದಿನ ಭವಿಷ್ಯ ರೂಪಿಸೋಣ” ಎಂದರು.

ಭಾರತೀಯ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ವಿರುಪಾಕ್ಷಯ್ಯ ಹಿರೇಮಠ ಮಾತನಾಡಿ, “ಜಿಲ್ಲೆಯಲ್ಲಿ ಇರುವ ಸವಳು ಜವಳು ನಿರ್ಮೂಲನೆಗೆ ಹೋರಾಟ ಮಾಡಿ ರೈತರ ಭೂಮಿ ರಕ್ಷಣೆ ಮಾಡುವಲ್ಲಿ ರೈತರೊಂದಿಗೆ ಶ್ರಮಿಸಲಾಗುವುದು” ಎಂದು ಹೇಳಿದರು.

ಈ ಸಂದರ್ಭದಲ್ಲಿ ಬಿಕೆಎಸ್ ತಾಲೂಕು ಅಧ್ಯಕ್ಷ ಮಲ್ಲಪ್ಪ ಗಾಣಿಗೇರ,‌ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುಮಾರ ಯಡಹಳ್ಳಿ, ಜಿಲ್ಲಾ ಕೋಶ್ಯಾಧ್ಯಕ್ಷ ಎಂ ವೈ ವಡವಾಣಿ, ತಾಲೂಕು ಕಾರ್ಯದರ್ಶಿ ಗುರು ಅನಗವಾಡಿ, ಸಂಘದ ಕಾರ್ಯದಶಿ೯ ಶಿವನಗೌಡ ಪಾಟೀಲ ಹಾಗೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...