ಬೀಳಗಿ | ಮೆಕ್ಕೆಜೋಳ ಖರೀದಿ ಕೇಂದ್ರ ಸ್ಥಾಪನೆಗೆ‌ ಕಿಸಾನ್ ಸಂಘ ಮನವಿ

Date:

ಬಾಗಲಕೋಟೆ ಜಿಲ್ಲೆಯ ಎಲ್ಲ ತಾಲೂಕಿನ ಎಪಿಎಮ್ಸಿಯಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರವನ್ನು ತೆರೆದು ಕೇಂದ್ರ ಸರಕಾರದ ರೂ.2400 ಗಳ ಬೆಂಬಲ ಬೆಲೆಯಡಿ ಕನಿಷ್ಠ 50 ಕ್ವಿಂಟಲ್ ಜೋಳ ಖರೀದಿಸಬೇಕು. ಅತಿವೃಷ್ಟಿಯಿಂದ ಹಾನಿಯಾದ ಬೆಳೆಗಳಿಗೆ ಪರಿಹಾರ, ವಿಮೆ ಕ್ಲೇಮ್ಗಳನ್ನು ಶೀಘ್ರದಲ್ಲಿ ಕೊಡಿಸಬೇಕೆಂದು ಆಗ್ರಹಿಸಿ ಭಾರತೀಯ ಕಿಸಾನ್ ಸಂಘ ಕರ್ನಾಟಕ ಪ್ರದೇಶ ಉತ್ತರ ಪ್ರಾಂತ ಬಾಗಲಕೋಟೆ ಜಿಲ್ಲಾ ಘಟಕ ಹಾಗೂ ತಾಲೂಕು ಘಟಕದ ನೇ‌ತೃತ್ವದಲ್ಲಿ ತಾಲೂಕು ಆಡಳಿತ ಸೌಧದ ಮುಂದೆ ಶಾಂತಿಯುತ ಪ್ರತಿಭಟನೆ ನಡೆಸಿ ತಹಶೀಲ್ದಾರ ವಿನೋದ ಹತ್ತಳ್ಳಿ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಭಾರತೀಯ ಕಿಸಾನ ಸಂಘದ ಜಿಲ್ಲಾ ಅಧ್ಯಕ್ಷ ವಿರುಪಾಕ್ಷಯ್ಯ ಪ ಹಿರೇಮಠ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ, “ಬಾಗಲಕೋಟೆ ಜಿಲ್ಲೆಯ ರೈತರು 85,000 ಹೆಕ್ಟೇರ್‌ ಜೋಳ ಬೆಳೆದಿದ್ದು, ಪ್ರತಿ ಕ್ವಿಂಟಲ್‌ಗೆ ಕೇವಲ 1,500 ರಿಂದ 1,800 ರೂಗಳಿಗೆ ಮಧ್ಯವರ್ತಿಗಳಿಗೆ ಮಾರಾಟ ಮಾಡಲಾತ್ತಿದೆ. ಇದರಿಂದ ಬಿತ್ತನೆಗೆ ಮಾಡಿದ ಖರ್ಚೂ ಬಾರದೆ ತೊಂದರೆ ಅನುಭವಿಸುತ್ತಿದ್ದಾರೆ. ಅಳಿದುಳಿದ ಮೆಕ್ಕೆಜೋಳವನ್ನು ಜಮಖಂಡಿ, ಬಾಗಲಕೋಟೆಗೆ ಹೋಗಿ, ಗುಣಮಟ್ಟವನ್ನು ಪರೀಕ್ಷಿಸಿ ಅಲ್ಲಿ ಪಾಸಾದರೆ ನಂತರ ಧಾರವಾಡಕ್ಕೆ ಹೋಗಿ ಮಾರಾಟ ಮಾಡಬೇಕು. ಅಲ್ಲಿಗೆ ಹೋಗಬೇಕಾದರೆ ಪ್ರತಿ ಕ್ವಿಂಟಲ್ ಗೆ 200 ರಿಂದ 300 ರೂಗಳ ಖರ್ಚಾಗುತ್ತದೆ. ಅದರಲ್ಲಿ ಪಾಸಾದರೆ 25 ಕ್ವಿಂಟಲ್ ಮೆಕ್ಕೆಜೋಳವನ್ನು ಕೆಎಂಎಫ್ ಪಶು ಆಹಾರ ಘಟಕದವರು ಖರೀದಿಸುತ್ತಾರೆ” ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಬಾಗಲಕೋಟೆ | ರೈಲು ಸೇವೆ ವಿಸ್ತರಣೆಗೆ ಒತ್ತಾಯಿಸಿ ಪ್ರತಿಭಟನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೆರೂರ್ ಪಿಕೆಪಿಎಸ್ ನಲ್ಲಿ 5 ಕ್ವಿಂಟಲ್ ಖರೀದಿಗೆ ಅವಕಾಶ ನೀಡಿದ್ದು, ಸರ್ಕಾರ ಅವೈಜ್ಞಾನಿಕ ಆದೇಶ ಹೊರಡಿಸಿದ್ದು, ಸರಿಯಾದುದ್ದಲ್ಲ. ತಕ್ಷಣ ಕೇಂದ್ರ ಸರ್ಕಾರದ ರೂ.2400 ಬೆಂಬಲ ಬೆಲೆ, ರಾಜ್ಯ ಸರ್ಕಾರದ ರೂ. 600 ಗಳನ್ನು ಹೆಚ್ಚಿಗೆ ನೀಡಿ ಒಟ್ಟು 3000 ರೂ ಕೊಟ್ಟು ಕನಿಷ್ಠ 50 ಕ್ವಿಂಟಲ್ ಖರೀದಿಸಬೇಕು. ಧಾರವಾಡ ಕೆಎಂಎಫ್ ಬದಲು ಆಯಾ ತಾಲೂಕು ಕೇಂದ್ರದ ಎಪಿಎಂಸಿಯಲ್ಲಿ ಖರೀದಿಸುವಂತೆ ಅದೇಶಿಸಬೇಕು” ಎಂದು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...